Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ಕೊರಿಂಥದವರಿಗೆ 11:14

ಬೈಬಲ್ ವಚನ · IRV

2 ಕೊರಿಂಥದವರಿಗೆ 11:14

ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,

ಇಡೀ ಅಧ್ಯಾಯ ಓದಿ: 2 ಕೊರಿಂಥದವರಿಗೆ 11

ಸಂದರ್ಭದಲ್ಲಿ

11ನಿಮ್ಮಿಂದ ನಾನು ಏನನ್ನೂ ತೆಗೆದುಕೊಳ್ಳುತ್ತಿಲ್ಲವೇಕೆ? ನಿಮ್ಮ ಮೇಲೆ ಪ್ರೀತಿ ಇಲ್ಲದ್ದರಿಂದಲೋ? ಇಲ್ಲ, ನಿಮ್ಮ ಮೇಲೆ ನಮಗಿರುವ ಪ್ರೀತಿ ಎಷ್ಟೆಂದು ದೇವರೇ ಬಲ್ಲನು.

12ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಅಪೊಸ್ತಲರಾಗಿ ಮಾಡುತ್ತಿರುವ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಹುಡುಕುವವರಿಗೆ ಯಾವ ಆಸ್ಪದವೂ ಸಿಕ್ಕದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.

13ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.

14ಇದೇನೂ ಆಶ್ಚರ್ಯವಲ್ಲ. ಸೈತಾನನು ತಾನೇ ಪ್ರಕಾಶ ರೂಪವುಳ್ಳ ದೇವದೂತನ ವೇಷವನ್ನು ಹಾಕಿಕೊಳ್ಳುವಾಗ,

15ಅವನ ಸೇವಕರೂ ಸಹ ನೀತಿಗೆ ಸೇವಕರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವುದು ಆಶ್ಚರ್ಯವೇನಲ್ಲ. ಅವರ ಅಂತ್ಯಾವಸ್ಥೆಯು ಅವರ ಕೃತ್ಯಗಳಿಗೆ ತಕ್ಕಂತೆಯೇ ಇರುವುದು.

16ಯಾರೂ ನನ್ನನ್ನು ಬುದ್ಧಿಹೀನನೆಂದು ತಿಳಿಯಬಾರದೆಂದು ತಿರುಗಿ ಹೇಳುತ್ತೇನೆ. ಹಾಗೆ ನೆನಸಿದರೂ ಚಿಂತೆಯಿಲ್ಲ. ನನ್ನನ್ನು ಬುದ್ಧಿಹೀನನಾಗಿಯೇ ಸ್ವೀಕರಿಸಿ. ಆಗ ನಾನು ಆತ್ಮ ಪ್ರಶಂಸೆ ಮಾಡಿಕೊಳ್ಳಲು ಅಲ್ಪಸ್ವಲ್ಪವಾದರೂ ಆಸ್ಪದವಾಗುತ್ತದೆ.

17ನಾನು ಈಗ ಆಡುವ ಮಾತುಗಳನ್ನು ಕರ್ತನನ್ನು ಅನುಸರಿಸುವವರಾಗಿ ಆಡದೆ ಭರವಸದಿಂದ ತನ್ನನ್ನು ಹೊಗಳಿಕೊಳ್ಳುವ ಬುದ್ಧಿಹೀನನಂತೆ ಆಡುತ್ತೇನೆ.

2 ಕೊರಿಂಥದವರಿಗೆ 11

ಇಂಗ್ಲಿಷ್‌ನಲ್ಲಿ

Berean Standard Bible2 Corinthians 11:14And no wonder, for Satan himself masquerades as an angel of light.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಗಲಾ 1:8ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.
2 ಕೊರಿ 2:11ಸೈತಾನನು ನಮ್ಮನ್ನು ವಂಚಿಸಬಾರದೆಂದು ಹೀಗೆ ಮಾಡಿದೆನು. ಅವನ ಕುತಂತ್ರಗಳನ್ನು ನಾವು ಚೆನ್ನಾಗಿ ತಿಳಿದಿದ್ದೇವಲ್ಲಾ.
2 ಕೊರಿ 11:3ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಗಾಗಿ ಮೋಸಹೋದಳೋ ಹಾಗೆ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಶುದ್ಧತ್ವವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವಾಗಿದೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು