Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ಕೊರಿಂಥದವರಿಗೆ 12:9

ಬೈಬಲ್ ವಚನ · IRV

2 ಕೊರಿಂಥದವರಿಗೆ 12:9

ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.

ಇಡೀ ಅಧ್ಯಾಯ ಓದಿ: 2 ಕೊರಿಂಥದವರಿಗೆ 12

ಸಂದರ್ಭದಲ್ಲಿ

6ಹೊಗಳಿಕೊಳ್ಳುವುದಕ್ಕೆ ನನಗೆ ಒಂದು ವೇಳೆ ಮನಸ್ಸಿದ್ದರೂ ಹಾಗೆ ಹೊಗಳಿಕೊಳ್ಳುವುದರಲ್ಲಿ ನಾನು ಬುದ್ಧಿಹೀನನಾಗುವುದಿಲ್ಲ, ಯಾಕೆಂದರೆ ನಾನು ಸತ್ಯವನ್ನೇ ಹೇಳುತ್ತಿರುವೆನು. ಆದರೂ ಯಾರೂ ನನ್ನಲ್ಲಿ ಕಾಣುವುದಕ್ಕಿಂತಲೂ ಅಥವಾ ನನ್ನಿಂದ ಕೇಳುವುದಕ್ಕಿಂತಲೂ ಹೆಚ್ಚಾಗಿ ನನ್ನನ್ನು ಪರಿಗಣಿಸಬಾರದು.

7ಈ ಕಾರಣದಿಂದಲೂ ಮತ್ತು ನನಗೆ ತಿಳಿಸಲ್ಪಟ್ಟ ರಹಸ್ಯಗಳು ಬಹು ವಿಶೇಷವಾಗಿರುವುದರಿಂದಲೂ ನಾನು ಹೊಗಳಿಕೊಳ್ಳದೇ ಸುಮ್ಮನಿರುತ್ತೇನೆ. ನಾನು ನನ್ನನ್ನು ಅತಿಶಯವಾಗಿ ಹೆಚ್ಚಿಸಿಕೊಳ್ಳಬಾರದೆಂದು ಒಂದು ಶೂಲವು ನನ್ನನ್ನು ತಿವಿಯುವುದಕ್ಕಾಗಿ ನನ್ನ ದೇಹದೊಳಗೆ ಇರಿಸಲಾಗಿದೆ. ನಾನು ಅಹಂಕಾರಪಡದ ಹಾಗೆ ಇದು ನನ್ನನ್ನು ತಿವಿತಿವಿದು ಸೈತಾನನ ದೂತನಂತೆ ಕಾಡಿಸುತ್ತಿತ್ತು.

8ಈ ನೋವು ನನ್ನನ್ನು ಬಿಟ್ಟುಹೋಗುವಂತೆ ಮೂರು ಸಾರಿ ಕರ್ತನನ್ನು ಬೇಡಿಕೊಂಡೆನು ಆದರೆ

9ಅದಕ್ಕಾತನು, “ನನ್ನ ಕೃಪೆಯೇ ನಿನಗೆ ಸಾಕು, ಬಲಹೀನತೆಯಲ್ಲಿಯೇ ನನ್ನ ಬಲವು ಪೂರ್ಣಸಾಧಕವಾಗುತ್ತದೆ” ಎಂದು ನನಗೆ ಹೇಳಿದನು. ಹೀಗಿರಲಾಗಿ, ಕ್ರಿಸ್ತನ ಬಲವು ನನ್ನಲ್ಲಿ ನೆಲೆಸಿರಬೇಕೆಂದು ನನಗುಂಟಾಗುವ ಬಲಹೀನತೆಯಲ್ಲಿಯೂ ಬಹು ಸಂತೋಷವಾಗಿ ಹೆಚ್ಚಳಪಡುವೆನು.

10ಆದ್ದರಿಂದ ಕ್ರಿಸ್ತನ ನಿಮಿತ್ತ ನನಗೆ ಬಲಹೀನತೆಯಲ್ಲಿಯೂ, ತಿರಸ್ಕಾರದಲ್ಲಿಯೂ, ಕೊರತೆಯಲ್ಲಿಯೂ, ಹಿಂಸೆಯಲ್ಲಿಯೂ ಮತ್ತು ಇಕ್ಕಟ್ಟೂ ಸಂಭವಿಸಿದಾಗಲೂ ಸಂತುಷ್ಟನಾಗಿದ್ದೇನೆ. ಯಾಕೆಂದರೆ ನಾನು ಯಾವಾಗ ದುರ್ಬಲನಾಗಿರುವೆನೋ, ಆವಾಗಲೇ ಬಲವುಳ್ಳವನೂ ಆಗಿರುತ್ತೇನೆ.

11ನಾನು ಹೀಗೆ ಬರೆದು, ಬುದ್ಧಿಹೀನನಾಗಿದ್ದೇನೆ! ಅದಕ್ಕೆ ನೀವೇ ನನ್ನನ್ನು ಬಲವಂತ ಮಾಡಿದಿರಿ. ನಿಮ್ಮಿಂದ ನನಗೆ ಹೊಗಳಿಕೆಯು ಉಂಟಾಗಬೇಕಾಗಿತ್ತು, ಯಾಕೆಂದರೆ ನಾನು ಕೇವಲ ಅಲ್ಪನಾದರೂ “ಅತಿಶ್ರೇಷ್ಟರಾದ, ಅಪೊಸ್ತಲರು” ಅನ್ನಿಸಿಕೊಳ್ಳುವವರಿಗಿಂತಲೂ ಒಂದರಲ್ಲಿಯಾದರೂ ಕಡಿಮೆಯಾದವನಲ್ಲ.

12ನಾನು ಹಿಂಸೆಯನ್ನು ಸ್ಥಿರಚಿತ್ತದಿಂದ ತಾಳಿಕೊಳ್ಳುವುದರಲ್ಲಿಯೂ, ಸೂಚಕಕಾರ್ಯಗಳನ್ನೂ ಮತ್ತು ಅದ್ಭುತಗಳನ್ನೂ, ಹಾಗೂ ಮಹತ್ಕಾರ್ಯಗಳನ್ನೂ ನಡಿಸಿದ್ದರಲ್ಲಿಯೂ ಒಬ್ಬ ಅಪೊಸ್ತಲನಿಗೆ ಇರತಕ್ಕ ಲಕ್ಷಣಗಳು ನಿಮ್ಮ ಮಧ್ಯದಲ್ಲಿ ಪ್ರಕಟವಾದವಲ್ಲಾ.

2 ಕೊರಿಂಥದವರಿಗೆ 12

ಇಂಗ್ಲಿಷ್‌ನಲ್ಲಿ

Berean Standard Bible2 Corinthians 12:9But He said to me, “My grace is sufficient for you, for My power is perfected in weakness.” Therefore I will boast all the more gladly in my weaknesses, so that the power of Christ may rest on me.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಫಿಲಿಪ್ಪಿ 4:13ನನ್ನನ್ನು ಬಲಪಡಿಸುವವನ ಮುಖಾಂತರ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.
ಯೆಶಾ 40:29–31ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ. ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು. ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.
ಎಫೆ 3:16ನೀವು ದೇವರಾತ್ಮನ ಮೂಲಕ ಆಂತರ್ಯದಲ್ಲಿ ವಿಶೇಷಬಲವನ್ನು ಹೊಂದುವಂತೆಯೂ,
ಯೆಹೋ 1:9ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.
ಯೆಶಾ 43:2ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು, ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು.
1 ಕೊರಿ 10:13ಮನುಷ್ಯರಿಗೆ ಸಾಧಾರಣವಾಗಿ ಬರುವ ಶೋಧನೆಯೇ ಹೊರತು ಬೇರೆ ಯಾವುದೂ ನಿಮಗೆ ಸಂಭವಿಸಲಿಲ್ಲವಲ್ಲ. ದೇವರು ನಂಬಿಗಸ್ತನು. ನಿಮ್ಮ ಶಕ್ತಿಗೆ ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವುದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು.
ಇಬ್ರಿ 4:16ಆದುದರಿಂದ ನಾವು ತಕ್ಕ ಸಮಯದಲ್ಲಿ ಕರುಣೆಯನ್ನು ಹೊಂದುವಂತೆಯೂ ಆತನ ಕೃಪೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಆತನ ಕೃಪಾಸನದ ಮುಂದೆ ಬರೋಣ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು