Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ಕೊರಿಂಥದವರಿಗೆ 5:17

ಬೈಬಲ್ ವಚನ · IRV

2 ಕೊರಿಂಥದವರಿಗೆ 5:17

ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.

ಇಡೀ ಅಧ್ಯಾಯ ಓದಿ: 2 ಕೊರಿಂಥದವರಿಗೆ 5

ಸಂದರ್ಭದಲ್ಲಿ

14ಯಾಕೆಂದರೆ ಕ್ರಿಸ್ತನ ಪ್ರೀತಿಯು ನಮ್ಮನ್ನು ಒತ್ತಾಯಪಡಿಸುತ್ತದೆ; ಎಲ್ಲರಿಗೋಸ್ಕರ ಒಬ್ಬನು ಸತ್ತಮೇಲೆ ಎಲ್ಲರೂ ಸತ್ತಂತಾಯಿತೆಂದು ನಿಶ್ಚಯಿಸಿಕೊಂಡಿದ್ದೇವೆ.

15ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.

16ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.

17ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.

18ಇವೆಲ್ಲವುಗಳು ದೇವರಿಂದಲೇ ಉಂಟಾದದ್ದು. ದೇವರು ಕ್ರಿಸ್ತನ ಮೂಲಕ ನಮ್ಮನ್ನು ತನಗೆ ಸಂಧಾನಪಡಿಸಿಕೊಂಡು, ಸಂಧಾನಮಾಡುವ ಸೇವೆಯನ್ನು ನಮಗೆ ಅನುಗ್ರಹಿಸಿದ್ದಾನೆ;

19ಹೇಗೆಂದರೆ, ಕ್ರಿಸ್ತನಲ್ಲಿ ದೇವರು ಜಗತ್ತನ್ನು ತನ್ನೊಡನೆ ಸಂಧಾನಮಾಡಿಕೊಳ್ಳುತ್ತಿದ್ದಾನೆ; ಮನುಷ್ಯರ ಅಪರಾಧಗಳನ್ನು ಅವರ ಲೆಕ್ಕಕ್ಕೆ ಹಾಕದೇ, ಈ ಸಂಧಾನದ ಸಂದೇಶವನ್ನು ಎಲ್ಲರಿಗೂ ಸಾರುವಂತೆ ಅದನ್ನು ನಮ್ಮ ಮೇಲೆ ಹೊರಿಸಿದ್ದಾನೆ.

20ಆದ್ದರಿಂದ ನಾವು ಕ್ರಿಸ್ತನ ರಾಯಭಾರಿಗಳು. ದೇವರೇ ನಮ್ಮ ಮುಖಾಂತರ ಕರೆನೀಡುತ್ತಿದ್ದಾನೆ. ದೇವರೊಡನೆ ನೀವು ಸಂಧಾನಮಾಡಿಕೊಳ್ಳಿರೆಂದು ಕ್ರಿಸ್ತನ ಹೆಸರಿನಲ್ಲಿ ನಾವು ನಿಮ್ಮನ್ನು ವಿನಂತಿಸುತೇವೆ.

2 ಕೊರಿಂಥದವರಿಗೆ 5

ಇಂಗ್ಲಿಷ್‌ನಲ್ಲಿ

Berean Standard Bible2 Corinthians 5:17Therefore if anyone is in Christ, he is a new creation. The old has passed away. Behold, the new has come!

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಯೆಹೆ 36:26ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.
ಎಫೆ 4:22–24ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು. ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
ಯೆಶಾ 43:18–19ಹಿಂದಿನ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನ ಕಾರ್ಯಗಳನ್ನು ಮರೆತುಬಿಡಿರಿ. ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು.
ಯೋಹಾ 3:3ಯೇಸು ಅವನಿಗೆ, “ನಾನು ನಿಜನಿಜವಾಗಿ ಹೇಳುತ್ತೇನೆ, ಒಬ್ಬನು ಹೊಸದಾಗಿ ಹುಟ್ಟದಿದ್ದರೆ ಅವನು ದೇವರ ರಾಜ್ಯವನ್ನು ಕಾಣಲಾರನು,” ಎಂದು ಉತ್ತರ ಕೊಟ್ಟನು.
ಕೀರ್ತ 51:10ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.
ಯೆಹೆ 11:19“ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.
ರೋಮಾ 8:1ಆದ್ದರಿಂದ ಈಗ ಕ್ರಿಸ್ತ ಯೇಸುವಿನಲ್ಲಿರುವವರಿಗೆ ಯಾವ ಅಪರಾಧ ನಿರ್ಣಯವೂ ಇಲ್ಲ,
ಗಲಾ 6:15ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು