ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ಕೊರಿಂಥದವರಿಗೆ 6:14
ಬೈಬಲ್ ವಚನ · IRV
2 ಕೊರಿಂಥದವರಿಗೆ 6:14
ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?
ಇಡೀ ಅಧ್ಯಾಯ ಓದಿ: 2 ಕೊರಿಂಥದವರಿಗೆ 6
ಸಂದರ್ಭದಲ್ಲಿ
11ಕೊರಿಂಥದವರೇ, ಬಿಚ್ಚುಮನದಿಂದಲೂ ತೆರೆದ ಹೃದಯದಿಂದಲೂ ನಾವು ನಿಮ್ಮೊಡನೆ ಮಾತನಾಡಿದ್ದೇವೆ.
12ನಮ್ಮಲ್ಲಿ ಸಂಕುಚಿತ ಭಾವನೆಯೇನೂ ಇಲ್ಲ. ಇದು ಇರುವುದಾದರೆ ನಿಮ್ಮಲ್ಲೇ.
13ಆದ್ದರಿಂದ ಮಕ್ಕಳಿಗೆ ಹೇಳುವಂತೆ ಹೇಳುತ್ತಿದ್ದೇವೆ; ನಾವು ನಿಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿದಂತೆ, ನೀವು ನಮ್ಮನ್ನು ಪೂರ್ಣ ಹೃದಯದಿಂದ ಪ್ರೀತಿಸಿರಿ.
14ನೀವು ಕ್ರಿಸ್ತ ನಂಬಿಕೆಯಿಲ್ಲದವರೊಂದಿಗೆ ಸೇರಿ ಇಜ್ಜೋಡಿಯಾಗಬೇಡಿರಿ. ಧರ್ಮಕ್ಕೂ, ಅಧರ್ಮಕ್ಕೂ ಸಹವಾಸವೇನು?
15ಬೆಳಕಿಗೂ, ಕತ್ತಲೆಗೂ ಅನ್ಯೋನ್ಯತೆಯೇನು? ಕ್ರಿಸ್ತನಿಗೂ ಸೈತಾನನಿಗೂ ಒಪ್ಪಂದವೇನು? ವಿಶ್ವಾಸಿಗೂ ಅವಿಶ್ವಾಸಿಗೂ ಪಾಲುಗಾರಿಕೆಯೇನು?
16ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.
17ಆದ್ದರಿಂದ, “ಅನ್ಯಜನರನ್ನು ಬಿಟ್ಟು ಹೊರಬನ್ನಿರಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ” ಎಂದು ಕರ್ತನು ಹೇಳುತ್ತಾನೆ.
ಇಂಗ್ಲಿಷ್ನಲ್ಲಿ
Do not be unequally yoked with unbelievers. For what partnership can righteousness have with wickedness? Or what fellowship does light have with darkness?ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.“‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.ನಿಮ್ಮನ್ನು ಕತ್ತಲೆಯೊಳಗಿನಿಂದ ತನ್ನ ಆಶ್ಚರ್ಯಕರವಾದ ಬೆಳಕಿಗೆ ಕರೆದಾತನ ಅದ್ಭುತಕಾರ್ಯಗಳನ್ನು ಪ್ರಚಾರಮಾಡುವವರಾಗುವಂತೆ ನೀವು ದೇವರಿಂದ ಆರಿಸಿಕೊಳ್ಳಲ್ಪಟ್ಟ ಜನಾಂಗವೂ, ರಾಜವಂಶಸ್ಥರಾದ ಯಾಜಕರೂ, ಪರಿಶುದ್ಧ ಜನಾಂಗವೂ, ದೇವರ ಸ್ವಕೀಯ ಜನರೂ ಆಗಿದ್ದೀರಿ. ಮೊದಲು ನೀವು ಪ್ರಜೆಯಾಗಿರಲಿಲ್ಲ. ಈಗಲಾದರೂ ದೇವರ ಸ್ವಕೀಯಪ್ರಜೆಯಾಗಿದ್ದೀರಿ. ಮೊದಲು ನೀವು ಕರುಣೆ ಹೊಂದಿದವರಾಗಿರಲಿಲ್ಲ. ಈಗಲಾದರೂ ಕರುಣೆ ಹೊಂದಿದವರಾಗಿದ್ದೀರಿ.ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ. ನನಗೆ ದುರ್ಜನರ ಕೂಟವು ಅಸಹ್ಯ; ದುಷ್ಟರ ಸಂಗವು ಬೇಕಿಲ್ಲ.ದ್ರಾಕ್ಷಿತೋಟಗಳಲ್ಲಿ ಬೇರೆ ವಿಧವಾದ ಬೀಜವನ್ನು ಬಿತ್ತಬಾರದು; ಹಾಗೆ ಮಾಡಿದರೆ ಯಾಜಕರು ಆ ಬೆಳೆಯನ್ನು, ದ್ರಾಕ್ಷಿಯ ಬೆಳೆಯನ್ನು ಅಂತೂ ಆ ತೋಟದ ಎಲ್ಲಾ ಬೆಳೆಯನ್ನು ದೇವರಿಗೆ ಸಮರ್ಪಿಸಬೇಕು. ಎತ್ತನ್ನೂ ಮತ್ತು ಕತ್ತೆಯನ್ನೂ ಜೊತೆಮಾಡಿ ನೇಗಿಲಿಗೆ ಕಟ್ಟಿ ಉಳಬಾರದು. ನಾರು ಹಾಗು ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು.ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ? ನಾನು ಅವರನ್ನು ಸಂಪೂರ್ಣವಾಗಿ ದ್ವೇಷಿಸುತ್ತೇನೆ, ಅವರು ನನಗೂ ವೈರಿಗಳೇ ಆಗಿದ್ದಾರೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು