Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ಕೊರಿಂಥದವರಿಗೆ 9:7

ಬೈಬಲ್ ವಚನ · IRV

2 ಕೊರಿಂಥದವರಿಗೆ 9:7

ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.

ಇಡೀ ಅಧ್ಯಾಯ ಓದಿ: 2 ಕೊರಿಂಥದವರಿಗೆ 9

ಸಂದರ್ಭದಲ್ಲಿ

4ನೀವು ಸಿದ್ಧವಾಗದಿದ್ದರೆ ಒಂದು ವೇಳೆ ಮಕೆದೋನ್ಯದವರಲ್ಲಿ ಯಾರಾದರೂ ನನ್ನ ಸಂಗಡ ಬಂದು ನೀವು ಸಿದ್ಧವಾಗಲಿಲ್ಲವೆಂಬುದನ್ನು ಕಂಡು ನಮಗೆ ನಿಮ್ಮ ಮೇಲೆ ಇಂಥ ಭರವಸೆ ಇಟ್ಟಿದ್ದಕ್ಕೆ ನಾವು ನಾಚಿಕೆಪಡಬೇಕಾದೀತು; ನಿಮಗೂ ನಾಚಿಕೆಯಾಗುವುದೆಂದು ನಾನು ಹೀಗೆ ಹೇಳುತ್ತೇನೆ.

5ಹೀಗಿರಲಾಗಿ ಈ ಸಹೋದರರು ಮುಂಚಿತವಾಗಿ ನಿಮ್ಮ ಬಳಿಗೆ ಬಂದು ನೀವು ಮೊದಲೇ ವಾಗ್ದಾನಮಾಡಿದ ಕೊಡುಗೆಯನ್ನು ಸಿದ್ಧಪಡಿಸಲು ನಿಮಗೆ ಸಹಾಯಮಾಡುವಂತೆ ಇವರನ್ನು ಬೇಡಿಕೊಳ್ಳುವುದು ಅವಶ್ಯವೆಂದು ನನಗೆ ತೋಚಿತು. ಹೀಗೆ ಈ ದಾನ ಒತ್ತಾಯದ ವಸೂಲಿ ಆಗಿರದೆ ಮನಃಪೂರ್ವಕವಾಗಿ ಕೊಟ್ಟ ದಾನ ಆಗಿರುತ್ತದೆ.

6ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.

7ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.

8ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.

9“ಅವನು ಬಡವರಿಗೆ ಧಾರಾಳವಾಗಿ ನೀಡುವನು; ಅವನ ನೀತಿಯು ಸದಾಕಾಲವೂ ಇರುವುದು.”

10ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.

2 ಕೊರಿಂಥದವರಿಗೆ 9

ಇಂಗ್ಲಿಷ್‌ನಲ್ಲಿ

Berean Standard Bible2 Corinthians 9:7Each one should give what he has decided in his heart to give, not out of regret or compulsion. For God loves a cheerful giver.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

2 ಕೊರಿ 8:12ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.
ಅ. ಕೃ 20:35ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.
1 ಪೂರ್ವ 29:17ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.
ವಿಮೋ 25:2“ಇಸ್ರಾಯೇಲರು ನನಗಾಗಿ ಕಾಣಿಕೆಯನ್ನು ತರಬೇಕೆಂದು ಅವರಿಗೆ ಹೇಳು. ಮನಃಪೂರ್ವಕವಾಗಿ ಕೊಡುವವರಿಂದಲೇ ಆ ಕಾಣಿಕೆಯನ್ನು ತೆಗೆದುಕೊಳ್ಳಬೇಕು.
ಜ್ಞಾನೋ 11:25ಉದಾರಿಯು ಪುಷ್ಟನಾಗುವನು, ನೀರು ಹಾಯಿಸುವವನಿಗೆ ನೀರು ಸಿಕ್ಕುವುದು.
ಧರ್ಮೋ 15:7–11ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದ ಯಾವ ಊರಿನಲ್ಲಾದರೂ ಸ್ವದೇಶದವನಾದ ಬಡವನು ಇದ್ದರೆ, ನೀವು ಆ ಬಡ ಸಹೋದರನಿಗೆ ಮನಸ್ಸನ್ನು ಕಠಿಣಮಾಡಿಕೊಂಡು ಅವನಿಗೆ ಸಹಾಯಮಾಡದೆ ಇರಬಾರದು. ನೀವು ಕೈತೆರೆದು ಅವನಿಗೆ ಅವಶ್ಯವಾಗಿ ಬೇಕಾದದ್ದನ್ನು ಕೊಟ್ಟು ಸಹಾಯ ಮಾಡಬೇಕು. ನೀವು “ಬಿಡುಗಡೆಯುಂಟಾಗುವ ಏಳನೆಯ ವರ್ಷವು ಸಮೀಪವಾಯಿತು” ಎಂಬ ನೀಚವಾದ ಆಲೋಚನೆಯನ್ನು ಮಾಡಿ, ಆ ಬಡ ಸಹೋದರನಿಗೆ ಏನೂ ಕೊಡದೆ ಇರಬಾರದು, ಎಚ್ಚರಿಕೆ! ಹಾಗೆ ಧಿಕ್ಕರಿಸಿದರೆ ಅವನು ಒಂದು ವೇಳೆ ನಿಮ್ಮ ವಿಷಯದಲ್ಲಿ ಯೆಹೋವನಿಗೆ ಮೊರೆಯಿಟ್ಟಾನು, ನೀವು ದೋಷಿಗಳಾಗಿ ಕಂಡುಬರುವಿರಿ. ನೀವು ಕೊಡುವಾಗ ಬೇಸರಗೊಳ್ಳದೆ ಉದಾರವಾದ ಮನಸ್ಸಿನಿಂದಲೇ ಕೊಡಬೇಕು. ಇದರಿಂದ ನಿಮ್ಮ ದೇವರಾದ ಯೆಹೋವನು ನಿಮ್ಮ ಎಲ್ಲಾ ಕೆಲಸಗಳಲ್ಲಿಯೂ ಮತ್ತು ಪ್ರಯತ್ನಗಳಲ್ಲಿಯೂ ನಿಮ್ಮನ್ನು ಅಭಿವೃದ್ಧಿಪಡಿಸುವನು. ದೇಶದಲ್ಲಿ ಯಾವಾಗಲೂ ಬಡವರು ಇರುವರಷ್ಟೆ; ಆದುದರಿಂದ, “ನೀವು ಸ್ವದೇಶದವರಾದ ನಿಮ್ಮ ಸಹೋದರರಿಗೂ, ಬಡವರಿಗೂ ಮತ್ತು ಗತಿಯಿಲ್ಲದವರಿಗೂ ಕೈನೀಡಿ ಸಹಾಯಮಾಡಬೇಕು” ಎಂದು ನಾನು ನಿಮಗೆ ಆಜ್ಞಾಪಿಸಿದ್ದೇನೆ.
ಜ್ಞಾನೋ 22:9ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
1 ಪೇತ್ರ 4:9ಗುಣಗುಟ್ಟದೆ ಒಬ್ಬರಿಗೊಬ್ಬರು ಅತಿಥಿ ಸತ್ಕಾರ ಮಾಡಿರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು