Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ಪೇತ್ರನು 3:9

ಬೈಬಲ್ ವಚನ · IRV

2 ಪೇತ್ರನು 3:9

ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.

ಇಡೀ ಅಧ್ಯಾಯ ಓದಿ: 2 ಪೇತ್ರನು 3

ಸಂದರ್ಭದಲ್ಲಿ

6ಆ ನೀರಿನಿಂದಲೇ ಅಂದಿನ ಲೋಕವು ಜಲಪ್ರಳಯದಲ್ಲಿ ನಾಶವಾಯಿತು.

7ಆದರೆ ಈಗಿನ ಭೂಮ್ಯಾಕಾಶಗಳು ಅದೇ ವಾಕ್ಯದಿಂದ ಅಗ್ನಿನಾಶಕ್ಕಾಗಿ ಕಾದಿರಿಸಲ್ಪಟ್ಟಿವೆ. ಅವು ನ್ಯಾಯ ತೀರ್ಪಿನ ದಿನಕ್ಕಾಗಿ ಮತ್ತು ಭಕ್ತಿಹೀನರ ನಾಶಕ್ಕಾಗಿ ಉಳಿಸಲ್ಪಟ್ಟಿವೆ.

8ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರ್ಷಗಳಂತೆಯೂ ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ ಎಂಬುದನ್ನು ಮಾತ್ರ ಮರೆಯಬೇಡಿರಿ.

9ಕರ್ತನು ತನ್ನ ವಾಗ್ದಾನಗಳನ್ನು ನೆರವೇರಿಸುವುದಕ್ಕೆ ತಡಮಾಡುತ್ತಾನೆಂಬುದಾಗಿ ಕೆಲವರು ತಿಳಿದುಕೊಂಡಿರುವ ಪ್ರಕಾರ ಆತನು ತಡಮಾಡುವವನಲ್ಲ. ಯಾರೊಬ್ಬನೂ ನಾಶವಾಗುವುದರಲ್ಲಿ ಆತನು ಇಷ್ಟಪಡದೆ ಎಲ್ಲರೂ ಪಶ್ಚಾತ್ತಾಪ ಪಡಬೇಕೆಂದು ಅಪೇಕ್ಷಿಸುವವನಾಗಿದ್ದು ನಿಮ್ಮ ವಿಷಯದಲ್ಲಿ ದೀರ್ಘಶಾಂತಿಯುಳ್ಳವನಾಗಿದ್ದಾನೆ.

10ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶ ಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವವು. ಮೂಲಧಾತುಗಳು ಉರಿದು ಲಯವಾಗಿ ಹೋಗುವವು. ಭೂಮಿಯೂ ಅದರಲ್ಲಿರುವ ಕೆಲಸಗಳೂ ಸುಟ್ಟು ಹೋಗುವವು.

11ಇವೆಲ್ಲವುಗಳು ಹೀಗೆ ನಾಶವಾಗಿ ಹೋಗುವುದರಿಂದ ನೀವು ಎಂಥವರಾಗಿರಬೇಕು? ಪರಿಶುದ್ಧವಾಗಿಯೂ ಭಕ್ತಿಯುಳ್ಳವರಾಗಿಯೂ ಜೀವಿಸಬೇಕು.

12ದೇವರ ದಿನದ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಮಂಡಲವು ಬೆಂಕಿಯಿಂದ ನಾಶವಾಗಿ ಹೋಗುವವು. ಅತಿ ಉಷ್ಣದಿಂದ ಮೂಲಧಾತುಗಳು ಉರಿದು ಕರಗಿ ಹೋಗುವವು.

2 ಪೇತ್ರನು 3

ಇಂಗ್ಲಿಷ್‌ನಲ್ಲಿ

Berean Standard Bible2 Peter 3:9The Lord is not slow in keeping His promise as some understand slowness, but is patient with you, not wanting anyone to perish but everyone to come to repentance.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ತಿಮೊ 2:4ಎಲ್ಲಾ ಜನರೂ ರಕ್ಷಣೆಯನ್ನು ಹೊಂದಿ ಸತ್ಯದ ಜ್ಞಾನಕ್ಕೆ ಸೇರಬೇಕೆಂಬುದೇ ಆತನ ಚಿತ್ತವಾಗಿದೆ.
ರೋಮಾ 2:4ಅಥವಾ ಆತನ ಅಪಾರವಾದ ದಯೆ, ಸಹನೆ, ದೀರ್ಘಶಾಂತಿಗಳನ್ನು ಕೇವಲವಾಗಿ ಯೋಚಿಸಿ, ನಿನ್ನ ಮನಸ್ಸು ಮಾರ್ಪಡಿಸಿಕೊಳ್ಳುವಂತೆ ಪ್ರೆರೇಪಿಸುವ ದೇವರ ಒಳ್ಳೆತನದ ಅರಿವು ನಿನಗಿಲ್ಲವೋ?
ಹಬ 2:3ಸೂಕ್ತ ಹಾಗು ನಿಯಮಿತ ಕಾಲದಲ್ಲಿ ಆ ದರ್ಶನದಲ್ಲಿ ಕಂಡದ್ದು ನೆರವೇರುವುದು, ಅದರ ಅಂತಿಮ ಪರಿಣಾಮ ಶೀಘ್ರದಲ್ಲೇ ಗೊತ್ತಾಗುವುದು. ತಡವಾದರೂ ಅದಕ್ಕೆ ಕಾದಿರು; ಅದು ಖಂಡಿತವಾಗಿ ಕೈಗೂಡುವುದು.
ಕೀರ್ತ 86:15ಕರ್ತನೇ, ನೀನು ಕನಿಕರವೂ, ದಯೆಯೂ ಉಳ್ಳ ದೇವರು; ದೀರ್ಘಶಾಂತನು, ಬಹಳ ಪ್ರೀತಿಯೂ, ನಂಬಿಕೆಯೂ ಉಳ್ಳವನು.
ಯೆಶಾ 30:18ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು.
ಪ್ರಕ 2:21ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ.
ಲೂಕ 18:7–8ದೇವರು ಆರಿಸಿಕೊಂಡವರು ಆತನಿಗೆ ಹಗಲುರಾತ್ರಿ ಮೊರೆಯಿಡುವಲ್ಲಿ, ಆತನು ಅವರ ವಿಷಯದಲ್ಲಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯವನ್ನು ತೀರಿಸದೆ ಇರುವನೇ? ಅವರಿಗೆ ಬೇಗ ನ್ಯಾಯತೀರಿಸುವನೆಂದು ನಿಮಗೆ ಹೇಳುತ್ತೇನೆ. ಹೀಗಿದ್ದರೂ ಮನುಷ್ಯಕುಮಾರನು ಬರುವಾಗ ಭೂಮಿಯ ಮೇಲೆ ನಂಬಿಕೆಯನ್ನು ಕಾಣಲು ಸಾಧ್ಯವೋ?” ಅಂದನು.
1 ತಿಮೊ 1:16ಆದರೆ ಇನ್ನು ಮುಂದೆ ನಿತ್ಯಜೀವಕ್ಕಾಗಿ ತನ್ನ ಮೇಲೆ ನಂಬಿಕೆಯಿಡುವವರಿಗೆ, ತನ್ನ ದೀರ್ಘಶಾಂತಿಯ ದೃಷ್ಟಾಂತವಿರಬೇಕೆಂದು ಕ್ರಿಸ್ತ ಯೇಸುವು ಪಾಪಿಗಳಲ್ಲಿ ಪ್ರಮುಖನಾಗಿದ್ದ ನನ್ನನ್ನು ಕರುಣಿಸಿ, ನನ್ನಲ್ಲಿ ತನ್ನ ಪೂರ್ಣ ದೀರ್ಘಶಾಂತಿಯನ್ನು ತೋರ್ಪಡಿಸಿದನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು