ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ಥೆಸಲೋನಿಕದವರಿಗೆ 3:10
ಬೈಬಲ್ ವಚನ · IRV
2 ಥೆಸಲೋನಿಕದವರಿಗೆ 3:10
ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
ಇಡೀ ಅಧ್ಯಾಯ ಓದಿ: 2 ಥೆಸಲೋನಿಕದವರಿಗೆ 3
ಸಂದರ್ಭದಲ್ಲಿ
7ನೀವು ನಮ್ಮನ್ನು ಅನುಸರಿಸಿ ಹೇಗೆ ನಡೆಯಬೇಕೆಂಬುದನ್ನು ನೀವೇ ಬಲ್ಲಿರಿ, ನಾವು ನಿಮ್ಮಲ್ಲಿ ಸೋಮಾರಿಯಾಗಿ ನಡೆಯಲಿಲ್ಲ.
8ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.
9ನಿಮ್ಮಿಂದ ಪೋಷಣೆ ಹೊಂದುವುದಕ್ಕೆ ನಮಗೆ ಹಕ್ಕಿಲ್ಲವೆಂದು ಹಾಗೆ ಮಾಡಲಿಲ್ಲ, ನೀವು ನಮ್ಮನ್ನು ಅನುಸರಿಸುವುದಕ್ಕಾಗಿ ನಿಮಗೆ ಮಾದರಿಯಾಗಿರಬೇಕೆಂದೇ ಹಾಗೆ ಮಾಡಿದೆವು.
10ಇದಲ್ಲದೆ ನಾವು ನಿಮ್ಮ ಸಂಗಡ ಇದ್ದಾಗ, “ಕೆಲಸ ಮಾಡಲೊಲ್ಲದವನು ಊಟಮಾಡಬಾರದು” ಎಂದು ನಿಮಗೆ ಆಜ್ಞಾಪಿಸಿದೆವಷ್ಟೆ.
11ಆದರೆ ನಿಮ್ಮಲ್ಲಿ ಕೆಲವರು ಯಾವ ಕೆಲಸವನ್ನೂ ಮಾಡದೆ, ಇತರರ ವಿಷಯದಲ್ಲಿ ಮಾತ್ರ ತಲೆ ಹಾಕಿ ಸೋಮಾರಿಯಾಗಿ ನಡೆಯುತ್ತಾರೆಂಬ ಸುದ್ದಿಯನ್ನು ಕೇಳಿದ್ದೇವೆ.
12ಇಂಥವರು ತಮ್ಮ ಕೆಲಸಕಾರ್ಯಗಳನ್ನು ನೋಡುತ್ತಾ ತಾವೇ ಸಂಪಾದಿಸಿದ್ದನ್ನು ಊಟಮಾಡಬೇಕೆಂದು ಕರ್ತನಾದ ಯೇಸು ಕ್ರಿಸ್ತನಲ್ಲಿ ನಾವು ಆಜ್ಞಾಪಿಸಿ ಬುದ್ಧಿ ಹೇಳುತ್ತೇವೆ.
13ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.
ಇಂಗ್ಲಿಷ್ನಲ್ಲಿ
For even while we were with you, we gave you this command: “If anyone is unwilling to work, he shall not eat.”ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.ಇದಲ್ಲದೆ ನಾವು ನಿಮಗೆ ಆಜ್ಞೆ ಕೊಟ್ಟಿರುವ ಪ್ರಕಾರ ನೀವು ಮತ್ತೊಬ್ಬರ ವಿಷಯದಲ್ಲಿ ತಲೆಹಾಕದೆ ಸುಮ್ಮಗಿದ್ದು, ಸ್ವಂತ ಕಾರ್ಯಗಳನ್ನೇ ನೋಡಿಕೊಳ್ಳುತ್ತಾ, ಕೈಯಾರೆ ಕೆಲಸಮಾಡಿ ದುಡಿಯಿರಿ.ಸೋಮಾರಿಯ ಆಶೆಯು ವ್ಯರ್ಥ, ಉದ್ಯೋಗಿಯ ಆತ್ಮಕ್ಕೆ ಪುಷ್ಟಿ.ಮೈಗಳ್ಳನು ಮಳೆಗಾಲದಲ್ಲಿ ಉಳುವುದಿಲ್ಲ, ಸುಗ್ಗೀಕಾಲದಲ್ಲಿ ಅಪೇಕ್ಷಿಸಲು ಏನು ಸಿಕ್ಕೀತು?ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು. ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು. ಆಗ ನಾನು ನೋಡಿ ಆಲೋಚಿಸಿದೆನು, ದೃಷ್ಟಿಸಿ ಶಿಕ್ಷಿತನಾದೆನು. ಇನ್ನು ಸ್ವಲ್ಪ ನಿದ್ದೆ, ಇನ್ನು ತುಸ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ? ಬಡತನವು ದಾರಿಗಳ್ಳನ ಹಾಗೂ, ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು