Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ತಿಮೊಥೆಯನಿಗೆ 1:7

ಬೈಬಲ್ ವಚನ · IRV

2 ತಿಮೊಥೆಯನಿಗೆ 1:7

ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.

ಇಡೀ ಅಧ್ಯಾಯ ಓದಿ: 2 ತಿಮೊಥೆಯನಿಗೆ 1

ಸಂದರ್ಭದಲ್ಲಿ

4ನಾನು ನಿನ್ನ ಕಣ್ಣೀರನ್ನು ನೆನಪಿಗೆ ತಂದು ನಿನ್ನನ್ನು ನೋಡಿ ಸಂತೋಷಭರಿತನಾಗಬೇಕೆಂದು ಬಯಸುತ್ತೇನೆ.

5ನಿನ್ನಲ್ಲಿರುವ ಯಥಾರ್ಥವಾದ ನಂಬಿಕೆಯು ನನ್ನ ನೆನಪಿಗೆ ಬಂದಿತು. ಆ ನಂಬಿಕೆಯು ನಿನ್ನ ಅಜ್ಜಿಯಾದ ಲೋವಿಯಳಲ್ಲಿಯೂ ನಿನ್ನ ತಾಯಿಯಾದ ಯೂನೀಕೆಯಲ್ಲಿಯೂ ವಾಸವಾಗಿತ್ತು. ಹಾಗೆಯೇ ಅದು ನಿನ್ನಲ್ಲಿಯೂ ವಾಸವಾಗಿದೆ ಎಂದು ದೃಢವಾಗಿ ನಂಬಿದ್ದೇನೆ.

6ಆದಕಾರಣ ನಾನು ನಿನ್ನ ತಲೆಯ ಮೇಲೆ ಹಸ್ತವನ್ನಿಟ್ಟದರ ಮೂಲಕ ನಿನಗೆ ದೊರಕಿದ ದೇವರ ಕೃಪಾವರವನ್ನು ಪ್ರಜ್ವಲಿಸುವಂತೆ ಮಾಡಬೇಕೆಂದು ನಿನ್ನನ್ನು ಜ್ಞಾಪಿಸುತ್ತಿದ್ದೇನೆ.

7ದೇವರು ನಮಗೆ ಕೊಟ್ಟಿರುವ ಆತ್ಮವು ಬಲ, ಪ್ರೀತಿ, ಸಂಯಮಗಳ ಆತ್ಮವೇ ಹೊರತು ಹೇಡಿತನದ ಆತ್ಮವಲ್ಲ.

8ಆದ್ದರಿಂದ ನೀನು ನಮ್ಮ ಕರ್ತನನ್ನು ಕುರಿತು ಹೇಳುವ ಸಾಕ್ಷಿಯ ವಿಷಯದಲ್ಲಾಗಲಿ ಆತನ ಸೆರೆಯವನಾದ ನನ್ನ ವಿಷಯದಲ್ಲಾಗಲಿ ನಾಚಿಕೆ ಪಡದೆ, ದೇವರ ಬಲವನ್ನು ಆಶ್ರಯಿಸಿ ನನ್ನೊಂದಿಗೆ ಸುವಾರ್ತೆಗೋಸ್ಕರ ಕಷ್ಟವನ್ನನುಭವಿಸು.

9ಆತನು ನಮ್ಮಲ್ಲಿರುವ ಸುಕೃತ್ಯಗಳನ್ನು ನೋಡಿದ್ದರಿಂದಲ್ಲ, ತನ್ನ ಸಂಕಲ್ಪವನ್ನು ಅನುಸರಿಸಿ ಕೃಪೆಯಿಂದಲೇ ನಮ್ಮನ್ನು ರಕ್ಷಿಸಿ ಪರಿಶುದ್ಧರಾಗುವುದಕ್ಕೆ ಕರೆದನು. ಆತನು ಅನಾದಿಕಾಲದಲ್ಲಿ ಆ ಕೃಪೆಯನ್ನು ಕ್ರಿಸ್ತ ಯೇಸುವಿನಲ್ಲಿ ನಮಗೆ ಅನುಗ್ರಹಿಸಿ,

10ಈಗ ನಮ್ಮ ರಕ್ಷಕನಾದ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯ ಮೂಲಕ ಅದನ್ನು ಪ್ರಕಟಪಡಿಸಿದ್ದಾನೆ. ಈತನು ಮರಣವನ್ನು ನಿರ್ಮೂಲಗೊಳಿಸಿ ಸುವಾರ್ತೆಯ ಮೂಲಕ ಜೀವವನ್ನೂ ಅಮರತ್ವವನ್ನೂ ಬೆಳಕಿಗೆ ತಂದಿದ್ದಾನೆ.

2 ತಿಮೊಥೆಯನಿಗೆ 1

ಇಂಗ್ಲಿಷ್‌ನಲ್ಲಿ

Berean Standard Bible2 Timothy 1:7For God has not given us a spirit of fear, but of power, love, and self-control.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ರೋಮಾ 8:15ನೀವು ತಿರುಗಿ ಭಯದಲ್ಲಿ ಬೀಳುವ ಹಾಗೆ ದಾಸತ್ವದ ಆತ್ಮನನ್ನು ಹೊಂದಿದವರಲ್ಲ. ಅದರ ಬದಲಾಗಿ, ನಿಮ್ಮವು ದೇವರನ್ನು, “ಅಪ್ಪಾ, ತಂದೆಯೇ,” ಎಂದು ಕರೆಯುವ ಮಕ್ಕಳ ಆತ್ಮವನ್ನು ಹೊಂದಿದ್ದೀರಿ.
1 ಯೋಹಾ 4:18ಪ್ರೀತಿ ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯಿರುವಲ್ಲಿ ಯಾತನೆಗಳಿರುವವು. ಆದರೆ ಪೂರ್ಣಪ್ರೀತಿಯು ಹೆದರಿಕೆಯನ್ನು ಹೊಡೆದೊಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಪೂರ್ಣಗೊಂಡವನಲ್ಲ.
ಯೋಹಾ 14:27“ನಾನು ನನ್ನ ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.
ಗಲಾ 5:22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
ಲೂಕ 10:19ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
ಅ. ಕೃ 1:8ಆದರೆ ಪವಿತ್ರಾತ್ಮನು ನಿಮ್ಮ ಮೇಲೆ ಬರಲು ನೀವು ಶಕ್ತಿಯನ್ನು ಹೊಂದಿದವರಾಗಿ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸ್ಥಳದಲ್ಲಿಯು, ಸಮಾರ್ಯ ಸೀಮೆಗಳಲ್ಲಿಯೂ, ಭೂಲೋಕದ ಕಟ್ಟಕಡೆಯವರೆಗೂ ನನಗೆ ಸಾಕ್ಷಿಗಳಾಗಿರುವಿರಿ” ಅಂದನು.
ಜೆಕ 4:6ಆಗ ಅವನು ನನಗೆ ಪ್ರತ್ಯುತ್ತರವಾಗಿ ಹೀಗೆ ಹೇಳಿದನು, “ಪರಾಕ್ರಮದಿಂದಲ್ಲ, ಬಲದಿಂದಲ್ಲ. ನನ್ನ ಆತ್ಮದಿಂದಲೇ ಎಂಬುದು ಸೇನಾಧೀಶ್ವರನಾದ ಯೆಹೋವನ ನುಡಿ” ಎಂಬ ಈ ಮಾತುಗಳನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ.
ಜ್ಞಾನೋ 2:7ಆತನು ಯಥಾರ್ಥಚಿತ್ತರಿಗಾಗಿ ಸುಜ್ಞಾನವನ್ನು ಕೂಡಿಸಿಡುವನು. ದೋಷವಿಲ್ಲದೆ ನಡೆಯುವವರಿಗೆ ಗುರಾಣಿಯಾಗಿದ್ದು,

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು