ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ತಿಮೊಥೆಯನಿಗೆ 2:15
ಬೈಬಲ್ ವಚನ · IRV
2 ತಿಮೊಥೆಯನಿಗೆ 2:15
ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
ಇಡೀ ಅಧ್ಯಾಯ ಓದಿ: 2 ತಿಮೊಥೆಯನಿಗೆ 2
ಸಂದರ್ಭದಲ್ಲಿ
12ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು. ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.
13ನಾವು ಅಪನಂಬಿಗಸ್ತರಾಗಿದ್ದರೂ ಆತನು ನಂಬಿಗಸ್ತನಾಗಿಯೇ ಇರುವನು. ಆತನು ತನ್ನ ಸ್ವಭಾವವನ್ನು ನಿರಾಕರಿಸಲು ಆಗುವುದಿಲ್ಲ.”
14ಈ ಸಂಗತಿಗಳನ್ನು ಸಭೆಯವರ ಜ್ಞಾಪಕಕ್ಕೆ ತರಬೇಕು. ಕೇಳುವವರಿಗೆ ಕೇಡನ್ನುಂಟುಮಾಡುವುದಲ್ಲದೇ, ಯಾವ ಪ್ರಯೋಜನಕ್ಕೂ ಬಾರದ ತರ್ಕ ವಾಗ್ವಾದಗಳನ್ನು ಮಾಡಬಾರದೆಂದು, ಅವರಿಗೆ ದೇವರ ಸನ್ನಿಧಿಯಲ್ಲಿ ಖಂಡಿತವಾಗಿ ಹೇಳು.
15ನೀನು ದೇವರಿಗೆ ಯೋಗ್ಯನಾಗಿ ಕಾಣಿಸಿಕೊಳ್ಳುವುದಕ್ಕೆ ಪ್ರಯಾಸಪಡು. ಅವಮಾನಕ್ಕೆ ಗುರಿಯಾಗದ ಕೆಲಸದವನೂ ಸತ್ಯವಾಕ್ಯವನ್ನು ಸರಿಯಾಗಿ ಉಪದೇಶಿಸುವವನೂ ಆಗಿರು.
16ಪ್ರಾಪಂಚಿಕವಾದ ವ್ಯರ್ಥ ಹರಟೆ ಮಾತುಗಳಿಂದ ದೂರವಾಗಿರು, ಅವುಗಳಿಗೆ ಮನಸ್ಸುಕೊಡುವವರು ಹೆಚ್ಚೆಚ್ಚಾಗಿ ಭಕ್ತಿಹೀನರಾಗುವರು.
17ಅವರ ಮಾತು ಹುಣ್ಣುವ್ಯಾಧಿಯಂತೆ ಹರಡಿಕೊಳ್ಳುವುದು. ಅವರಲ್ಲಿ ಹುಮೆನಾಯನೂ ಪಿಲೇತನೂ ಇದ್ದಾರೆ.
18ಅವರು ಸತ್ಯಭ್ರಷ್ಟರಾಗಿ ಪುನರುತ್ಥಾನವು ಆಗಿಹೋಯಿತೆಂದು ಹೇಳುತ್ತಾ ಹಲವರ ನಂಬಿಕೆಯನ್ನು ಕೆಡಿಸುವವರಾಗಿದ್ದಾರೆ.
ಇಂಗ್ಲಿಷ್ನಲ್ಲಿ
Make every effort to present yourself approved to God, an unashamed workman who accurately handles the word of truth.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.ಆದ್ದರಿಂದ ಸಹೋದರರೇ, ದೇವರಲ್ಲಿ ನಿಮ್ಮ ಕರೆಯುವಿಕೆಯನ್ನೂ, ಆಯ್ಕೆಯನ್ನೂ ದೃಢಪಡಿಸಿಕೊಳ್ಳುವುದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಏಕೆಂದರೆ ನೀವು ಹೀಗೆ ಮಾಡುವುದಾದರೆ ಎಂದಿಗೂ ಎಡುವುದಿಲ್ಲ.ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.ತನ್ನನ್ನು ತಾನೇ ಹೊಗಳಿಕೊಳ್ಳುವವನು ಯೋಗ್ಯನಲ್ಲ. ಕರ್ತನು ಯಾರನ್ನು ಹೊಗಳುತ್ತಾನೋ ಅವನೇ ಯೋಗ್ಯನು.ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ.ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು. ನಾನು ಬರುವ ತನಕ ವೇದವಾಕ್ಯವನ್ನು ಓದಿ ಹೇಳುವುದರಲ್ಲಿಯೂ, ಪ್ರಬೋಧಿಸುವುದರಲ್ಲಿಯೂ, ಉಪದೇಶಿಸುವುದರಲ್ಲಿಯೂ ಆಸಕ್ತನಾಗಿರು. ನಿನ್ನಲ್ಲಿರುವ ಕೃಪಾವರವನ್ನು ಅಲಕ್ಷ್ಯಮಾಡಬೇಡ, ಆ ವರವು ಸಭೆಯ ಹಿರಿಯರು ಪ್ರವಾದನೆಯ ಸಹಿತವಾಗಿ ನಿನ್ನ ಮೇಲೆ ಹಸ್ತಗಳನ್ನಿಟ್ಟಾಗ, ಅದು ನಿನಗೆ ಕೊಡಲ್ಪಟ್ಟಿತಲ್ಲಾ. ಈ ಕಾರ್ಯಗಳನ್ನು ಸಾಧಿಸುತ್ತಾ, ಅವುಗಳಲ್ಲಿ ಮಗ್ನನಾಗಿರು. ಇದರಿಂದ ನಿನ್ನ ಅಭಿವೃದ್ಧಿಯು ಎಲ್ಲರಿಗೂ ಪ್ರಸಿದ್ಧವಾಗುವುದು. ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರುನೋಡುವವರಾಗಿರುವುದರಿಂದ ಆತನೊಂದಿಗೆ ಸಮಾಧಾನದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಪ್ರಯತ್ನಿಸಿರಿ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು