Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ತಿಮೊಥೆಯನಿಗೆ 2:22

ಬೈಬಲ್ ವಚನ · IRV

2 ತಿಮೊಥೆಯನಿಗೆ 2:22

ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

ಇಡೀ ಅಧ್ಯಾಯ ಓದಿ: 2 ತಿಮೊಥೆಯನಿಗೆ 2

ಸಂದರ್ಭದಲ್ಲಿ

19ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ “ತನ್ನವರು ಯಾರೆಂಬುದನ್ನು ಕರ್ತನು ತಿಳಿದಿದ್ದಾನೆ” ಎಂತಲೂ “ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರು ದುರ್ಮಾರ್ಗತನವನ್ನು ಬಿಟ್ಟುಬಿಡಬೇಕು” ಎಂತಲೂ ಲಿಖಿತವಾಗಿದೆ.

20ದೊಡ್ಡ ಮನೆಯಲ್ಲಿ ಬೆಳ್ಳಿ ಬಂಗಾರದ ಪಾತ್ರೆಗಳಲ್ಲದೆ, ಮರದ ಪಾತ್ರೆಗಳೂ, ಮಣ್ಣಿನ ಪಾತ್ರೆಗಳೂ ಇರುತ್ತವೆ. ಅವುಗಳಲ್ಲಿ ಕೆಲವನ್ನು ಉತ್ತಮವಾದ ಬಳಕೆಗೂ ಕೆಲವನ್ನು ಹೀನವಾದ ಬಳಕೆಗೂ ಬಳಸಲಾಗುತ್ತದೆ.

21ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ, ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು. ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ, ಯಜಮಾನನಿಗೆ ಉಪಯುಕ್ತನಾಗಿಯೂ, ಸಕಲ ಸತ್ಕ್ರಿಯೆಗಳನ್ನು ಮಾಡುವುದಕ್ಕೆ ಸಿದ್ಧನಾಗಿಯೂ ಇರುವನು.

22ನೀನು ಯೌವನದ ಮೋಹಗಳಿಗೆ ದೂರವಾಗಿರು. ಶುದ್ಧಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳುವವರ ಸಂಗಡ ನೀತಿ, ನಂಬಿಕೆ, ಪ್ರೀತಿ ಮತ್ತು ಸಮಾಧಾನಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.

23ಮೂಢರ ಬುದ್ಧಿಹೀನರ ವಿಚಾರಗಳು ಜಗಳಗಳಿಗೆ ಕಾರಣವಾಗುತ್ತವೆಯೆಂದು ತಿಳಿದು ಅವುಗಳ ಗೊಡವೆಗೆ ಹೋಗಬೇಡ.

24ಕರ್ತನ ಸೇವಕನು ಜಗಳವಾಡದೆ, ಎಲ್ಲರ ವಿಷಯದಲ್ಲಿ ಸಾಧುವೂ, ಬೋಧಿಸುವುದರಲ್ಲಿ ಪ್ರವೀಣನ್ನೂ, ತಾಳ್ಮೆಯುಳ್ಳವನ್ನೂ

25ಎದುರಿಸುವವರನ್ನು ಸೌಮ್ಯತೆಯಿಂದ ತಿದ್ದುವವನೂ ಆಗಿರಬೇಕು. ಬಹುಶಃ ದೇವರು ಆ ಎದುರಿಸುವವರ ಮನಸ್ಸನ್ನು ತನ್ನ ಕಡೆಗೆ ತಿರುಗಿಸಿ ಸತ್ಯದ ಜ್ಞಾನವನ್ನು ಅವರಿಗೆ ಕೊಟ್ಟಾನು.

2 ತಿಮೊಥೆಯನಿಗೆ 2

ಇಂಗ್ಲಿಷ್‌ನಲ್ಲಿ

Berean Standard Bible2 Timothy 2:22Flee from youthful passions and pursue righteousness, faith, love, and peace, together with those who call on the Lord out of a pure heart.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಪೇತ್ರ 2:11ಪ್ರಿಯರೇ, ಪ್ರವಾಸಿಗಳು ಮತ್ತು ಪರದೇಶಸ್ಥರು ಆಗಿರುವ ನೀವು ನಿಮ್ಮ ಆತ್ಮದ ವಿರುದ್ಧವಾಗಿ ಯುದ್ಧ ಮಾಡುವ ಶಾರೀರಿಕ ದುರಾಶೆಗಳಿಗೆ ದೂರವಾಗಿರಬೇಕೆಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
1 ಪೇತ್ರ 3:11ಅವನು ಕೆಟ್ಟದ್ದನ್ನು ಬಿಟ್ಟು ಒಳ್ಳೆದನ್ನು ಮಾಡಲಿ. ಸಮಾಧಾನವನ್ನು ಹಾರೈಸಿ ಅದಕ್ಕೋಸ್ಕರ ಪ್ರಯತ್ನಪಡಲಿ.
1 ಕೊರಿ 6:18ಜಾರತ್ವವನ್ನು ಬಿಟ್ಟು ದೂರ ಓಡಿಹೋಗಿರಿ. “ಮನುಷ್ಯರು ಮಾಡುವ ಇತರ ಪಾಪಕೃತ್ಯಗಳು ದೇಹದ ಹೊರಗಿವೆ”, ಆದರೆ ಜಾರತ್ವ ಮಾಡುವವನು ತನ್ನ ಸ್ವಂತ ದೇಹಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
1 ತಿಮೊ 6:11ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
ಕೀರ್ತ 119:9ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.
ಇಬ್ರಿ 12:14ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.
1 ತಿಮೊ 4:12ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.
ಕೀರ್ತ 66:18–19ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ, ಸ್ವಾಮಿಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ. ಆದರೆ ದೇವರು ನನ್ನ ಮೊರೆಯನ್ನು ಲಕ್ಷಿಸಿ ಕೇಳಿದ್ದಾನಲ್ಲಾ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು