ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ತಿಮೊಥೆಯನಿಗೆ 3:16
ಬೈಬಲ್ ವಚನ · IRV
2 ತಿಮೊಥೆಯನಿಗೆ 3:16
ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.
ಇಡೀ ಅಧ್ಯಾಯ ಓದಿ: 2 ತಿಮೊಥೆಯನಿಗೆ 3
ಸಂದರ್ಭದಲ್ಲಿ
13ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
14ನೀನಾದರೋ ಕಲಿತು ದೃಢವಾಗಿ ನಂಬಿದ ಬೋಧನೆಗಳಲ್ಲಿ ನೆಲೆಯಾಗಿರು. ಕಲಿಸಿಕೊಟ್ಟವರು ಯಾರೆಂಬುದನ್ನು ಆಲೋಚಿಸು.
15ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.
16ದೈವ ಪ್ರೇರಿತವಾದ ಪ್ರತಿಯೊಂದು ಶಾಸ್ತ್ರವು ಉಪದೇಶಕ್ಕೂ, ಖಂಡನೆಗೂ, ತಿದ್ದುಪಡಿಗೂ, ನೀತಿಶಿಕ್ಷೆಗೂ ಉಪಯುಕ್ತವಾಗಿದೆ.
17ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.
ಇಂಗ್ಲಿಷ್ನಲ್ಲಿ
All Scripture is God-breathed and is useful for instruction, for conviction, for correction, and for training in righteousness,ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ.ಇದಲ್ಲದೆ ಪ್ರವಾದನವಾಕ್ಯವು ನಮಗೆ ಬಹುದೃಢವಾಗಿ ದೊರೆತಿದೆ. ಆ ದಿನವು ಅರುಣೋದಯವಾಗುವರೆಗೆ ಮತ್ತು ಉದಯ ನಕ್ಷತ್ರವು ನಿಮ್ಮ ಹೃದಯಗಳಲ್ಲಿ ಮೂಡುವತನಕ ಅದನ್ನು ಕತ್ತಲೆಯಾದ ಸ್ಥಳದಲ್ಲಿ ಪ್ರಕಾಶಿಸುವ ದೀಪವೆಂದೆಣಿಸಿ ಅದಕ್ಕೆ ಲಕ್ಷ್ಯಕೊಟ್ಟರೆ ಒಳ್ಳೆಯದು. ಯಾವ ಪ್ರವಾದನಾ ವಾಕ್ಯವೂ ಕೇವಲ ಮನುಷ್ಯನ ಸ್ವಬುದ್ಧಿಯಿಂದ ವಿವರಿಸತಕ್ಕಂಥದ್ದಲ್ಲವೆಂಬುದನ್ನು ಮುಖ್ಯವಾಗಿ ಮೊದಲು ತಿಳಿದುಕೊಳ್ಳಿರಿ. ಏಕೆಂದರೆ ಯಾವ ಪ್ರವಾದನೆಯೂ ಎಂದೂ ಮನುಷ್ಯರ ಚಿತ್ತದಿಂದ ಉಂಟಾಗಲಿಲ್ಲ. ಆದರೆ ಮನುಷ್ಯರು ಪವಿತ್ರಾತ್ಮಪ್ರೇರಿತರಾಗಿ ದೇವರಿಂದ ಹೊಂದಿದ್ದನ್ನೇ ಮಾತನಾಡಿರುವುದು.ಅದಕ್ಕೆ ಯೇಸು, “ನೀವು ಶಾಸ್ತ್ರವಚನಗಳನ್ನಾದರೂ, ದೇವರ ಶಕ್ತಿಯನ್ನಾದರೂ ತಿಳಿಯದೆ ಇರುವುದರಿಂದಲೇ ತಪ್ಪುವವರಾಗಿದ್ದೀರಿ?ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ. ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ. ಯೆಹೋವನ ಭಯ ಪರಿಶುದ್ಧವಾಗಿದೆ; ಅದು ಶಾಶ್ವತವಾದದ್ದೇ. ಯೆಹೋವನ ಕಟ್ಟಳೆಗಳು ಯಥಾರ್ಥವಾದವುಗಳು; ಅವು ಕೇವಲ ನ್ಯಾಯವಾಗಿವೆ. ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ. ಅವುಗಳ ಮೂಲಕ ನಿನ್ನ ದಾಸನಿಗೆ ವಿವೇಚನೆ ಉಂಟಾಗುತ್ತದೆ; ಅವುಗಳನ್ನು ಕೈಕೊಳ್ಳುವುದರಿಂದ ಬಹಳ ಫಲ ದೊರೆಯುತ್ತದೆ.ಆಜ್ಞೆಯೇ ದೀಪ, ಉಪದೇಶವೇ ಬೆಳಕು, ಶಿಕ್ಷಣಪೂರ್ವಕವಾದ ಬೋಧನೆಯೇ ಜೀವದ ಮಾರ್ಗ.ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವುದು ಯಾವುದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವುದರಿಂದಲೇ.ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು