ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 2 ತಿಮೊಥೆಯನಿಗೆ 4:3
ಬೈಬಲ್ ವಚನ · IRV
2 ತಿಮೊಥೆಯನಿಗೆ 4:3
ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
ಇಡೀ ಅಧ್ಯಾಯ ಓದಿ: 2 ತಿಮೊಥೆಯನಿಗೆ 4
ಸಂದರ್ಭದಲ್ಲಿ
1ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,
2ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.
3ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
4ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.
5ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.
6ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.
ಇಂಗ್ಲಿಷ್ನಲ್ಲಿ
For the time will come when men will not tolerate sound doctrine, but with itching ears they will gather around themselves teachers to suit their own desires.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು. ಅವರ ದುಷ್ಕರ್ಮಗಳ ಮಾರ್ಗವನ್ನು ಅನೇಕರು ಅನುಸರಿಸುವರು. ಅವರ ನಿಮಿತ್ತ ಸತ್ಯಮಾರ್ಗಕ್ಕೆ ದೂಷಣೆ ಉಂಟಾಗುವುದು. ಅವರು ದ್ರವ್ಯಾಶೆಯುಳ್ಳವರಾಗಿ ಕಲ್ಪಿತ ಮಾತುಗಳನ್ನಾಡುತ್ತಾ ನಿಮ್ಮನ್ನು ಮಾರಾಟಮಾಡಿ ಲಾಭವನ್ನು ಸಂಪಾದಿಸಬೇಕೆಂದಿರುವರು. ಧೀರ್ಘಕಾಲದಿಂದ ಅಂಥವರಿಗಿರುವಂಥ ದಂಡನೆಯ ತೀರ್ಪು ತಪ್ಪದೆ ಬರುತ್ತಿರುವುದು. ಅವರಿಗೆ ಬರುವ ನಾಶವು ತೂಕಡಿಸುವುದಿಲ್ಲ.ಆದರೆ ಕಡೆ ದಿನಗಳಲ್ಲಿ ಕಠಿಣಕಾಲಗಳು ಬರುವವೆಂಬುದನ್ನು ತಿಳಿದುಕೋ. ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ, ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ, ದ್ರೋಹಿಗಳೂ, ದುಡುಕುವವರೂ, ದುರಹಂಕಾರವುಳ್ಳವರೂ, ದೇವರನ್ನು ಪ್ರೀತಿಸುವುದಕ್ಕಿಂತ ಅಧಿಕವಾಗಿ ಭೋಗವನ್ನೇ ಪ್ರೀತಿಸುವವರೂ, ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು. ಅವರಲ್ಲಿ ಕೆಲವರು ಮನೆಗಳಲ್ಲಿ ನುಸುಳಿ, ಪಾಪಗಳಿಂದ ತುಂಬಿದವರೂ, ನಾನಾ ವಿಧವಾದ ಆಸೆಗಳಿಂದ ಪ್ರೇರಿತರೂ ಆಗಿರುವ ಅವಿವೇಕಿಗಳಾದ ಸ್ತ್ರೀಯರನ್ನು ವಶಮಾಡಿಕೊಳ್ಳುವವರು ಆಗಿರುತ್ತಾರೆ.ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ. ಕಪಟದಿಂದ ಸುಳ್ಳಾಡುವವರು, ಸ್ವಂತ ಮನಸ್ಸಾಕ್ಷಿಯ ಮೇಲೆ ಬರೆಹಾಕಲ್ಪಟ್ಟವರಾಗಿದ್ದು, ಅವರು ವಿಶ್ವಾಸಿಗಳಿಗೆ ಮದುವೆಯಾಗಬಾರದೆಂತಲೂ, ಯಾರು ನಂಬುವವರಾಗಿದ್ದು ಸತ್ಯವನ್ನು ಗ್ರಹಿಸಿದ್ದಾರೋ, ಅವರು ಕೃತಜ್ಞತಾಸ್ತುತಿಮಾಡಿ, ತಿನ್ನುವುದಕ್ಕೋಸ್ಕರ ದೇವರು ಉಂಟುಮಾಡಿದ ಆಹಾರವನ್ನು ತಿನ್ನಬಾರದೆಂತಲೂ ಹೇಳುವರು.ಜಾರರು, ಸಲಿಂಗಕಾಮಿಗಳು, ನರಚೋರರು, ಸುಳ್ಳುಗಾರರು, ಅಸತ್ಯವಾದಿಗಳು, ಸ್ವಸ್ಥಬೋಧನೆಗೆ ವಿರುದ್ಧವಾಗಿರುವಂಥವುಗಳನ್ನು ಮಾಡುವವರು, ಈ ಮೊದಲಾದ ಅನೀತಿವಂತರಿಗಾಗಿ ನೇಮಕವಾಗಿದೆ ಎಂದು ನಮಗೆ ತಿಳಿದಿದೆ.ಹೀಗಿರಲಾಗಿ ನಾನು ನಿಮಗೆ ಸತ್ಯವನ್ನು ಹೇಳುವುದರಿಂದ ನಿಮಗೆ ಶತ್ರುವಾಗಿದ್ದೇನೋ?ಆ ತೀರ್ಪು ಏನೆಂದರೆ ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವುದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಪ್ರೀತಿಸಿದರು. ಕೆಟ್ಟದ್ದನ್ನು ಮಾಡುವವರು ತಮ್ಮ ದುಷ್ಕೃತ್ಯಗಳು ಬಹಿರಂಗವಾಗಬಾರದೆಂದು ಬೆಳಕಿಗೆ ಬರುವುದಿಲ್ಲ ಮತ್ತು ಬೆಳಕನ್ನು ದ್ವೇಷಿಸುತ್ತಾರೆ. ಆದರೆ ಸತ್ಯವನ್ನು ಅನುಸರಿಸಿ ನಡೆಯುವವನು ತಾನು ದೇವರಿಂದ ನಡಿಸಿಕೊಂಡು ಬಂದವನಾಗಿ ತನ್ನ ಕೃತ್ಯಗಳನ್ನು ಪ್ರಕಟಪಡಿಸುವುದಕ್ಕಾಗಿ ಬೆಳಕಿಗೆ ಬರುತ್ತಾನೆ.”ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ. ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ. ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು. ‘ತುತ್ತೂರಿಯ ಶಬ್ದವನ್ನು ಕೇಳಿರಿ’ ಎಂದು ನಾನು ಅವರ ಮೇಲೆ ಕಾವಲುಗಾರರನ್ನು ನೇಮಿಸಲು, ‘ನಾವು ಕೇಳುವುದಿಲ್ಲ’ ಎಂದು ಹೇಳಿದರು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು