ಮುಖಪುಟ › ಜನಪ್ರಿಯ ಬೈಬಲ್ ವಚನಗಳು › 3 ಯೋಹಾನನು 1:2
ಬೈಬಲ್ ವಚನ · IRV
3 ಯೋಹಾನನು 1:2
ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
ಸಂದರ್ಭದಲ್ಲಿ
1ಸಭೆಯ ಹಿರಿಯನಾದ ನಾನು, ಪೂರ್ಣಹೃದಯದಿಂದ ಪ್ರೀತಿಸುವ ಪ್ರಿಯ ಗಾಯನಿಗೆ ಬರೆಯುವುದೇನಂದರೆ;
2ಪ್ರಿಯನೇ, ನೀನು, ನಿನ್ನ ಆತ್ಮ ವಿಷಯದಲ್ಲಿ ಅಭಿವೃದ್ಧಿ ಹೊಂದಿರುವ ಪ್ರಕಾರವೇ, ಎಲ್ಲಾ ವಿಷಯಗಳಲ್ಲಿಯೂ ಅಭಿವೃದ್ಧಿಹೊಂದಿ, ಸುಕ್ಷೇಮವಾಗಿ ಇರಬೇಕೆಂದು ನಾನು ಪ್ರಾರ್ಥಿಸುತ್ತೇನೆ.
3ಸಹೋದರರು ಆಗಾಗ್ಗೆ ನನ್ನ ಬಳಿಗೆ ಬಂದು, ನಿನ್ನಲ್ಲಿರುವ ಸತ್ಯವನ್ನು ಕುರಿತು ಮತ್ತು ನೀನು ಸತ್ಯವಂತನಾಗಿ ಜೀವಿಸುವವನು ಎಂದು ಹೇಳುವುದನ್ನು ಕೇಳುವಾಗ, ನಾನು ಬಹಳ ಸಂತೋಷಪಟ್ಟೆನು.
4ನನ್ನ ಮಕ್ಕಳು ಸತ್ಯವನ್ನನುಸರಿಸಿ ಜೀವಿಸುವವರಾಗಿದ್ದಾರೆಂಬುದನ್ನು ಕೇಳಿಸಿಕೊಳ್ಳುವುದಕ್ಕಿಂತ ಹೆಚ್ಚಾದ ಸಂತೋಷವು ನನಗಿಲ್ಲ.
5ಪ್ರಿಯನೇ, ನೀನು ಸಹೋದರರಿಗೂ ಅದಕ್ಕಿಂತಲೂ ಹೆಚ್ಚಾಗಿ ಅತಿಥಿಗಳನ್ನು ಸತ್ಕಾರ ಮಾಡುವುದರಲ್ಲಿ ನಂಬಿಗಸ್ತನಾಗಿ ನಡೆಯುತ್ತಿರುವಿ.
ಇಂಗ್ಲಿಷ್ನಲ್ಲಿ
Beloved, I pray that in every way you may prosper and enjoy good health, as your soul also prospers.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.ನೀವು ಕ್ರಿಸ್ತ ಯೇಸುವಿನಲ್ಲಿ ಇಟ್ಟಿರುವ ನಂಬಿಕೆ ಹಾಗು ದೇವಜನರೆಲ್ಲರಲ್ಲಿ ನೀವು ಇಟ್ಟಿರುವ ಪ್ರೀತಿಯ ಬಗ್ಗೆ ನಾವು ಕೇಳಿದ್ದೇವೆ. ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ. ನೀವು ಸತ್ಯದಲ್ಲಿ ದೇವರ ಕೃಪೆಯನ್ನು ಕೇಳಿ ತಿಳಿದುಕೊಂಡ ದಿನದಿಂದ ನಿಮ್ಮ ಬಳಿಗೆ ಬಂದ ಆ ಸುವಾರ್ತೆಯು ನಿಮ್ಮಲ್ಲಿ ಫಲಕೊಟ್ಟಂತೆ ಲೋಕದಲ್ಲೆಲ್ಲಾ ಫಲಕೊಟ್ಟು ವೃದ್ಧಿಯಾಗುತ್ತಿದೆ.ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.ಹೀಗಿರಲಾಗಿ ನೀವು ದೇವರ ವಾಕ್ಯವನ್ನು ನಮ್ಮಿಂದ ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತಾಸ್ತುತಿ ಮಾಡುತ್ತೇವೆ. ಅದು ಸತ್ಯವಾಗಿ ದೇವರ ವಾಕ್ಯವೇ. ಆ ವಾಕ್ಯವು, ನಂಬುವವರಾದ ನಿಮ್ಮೊಳಗೆ ಕೆಲಸ ಮಾಡುತ್ತದೆ. ಹೌದು, ಸಹೋದರರೇ, ನೀವು ಯೂದಾಯದಲ್ಲಿ ಕ್ರಿಸ್ತ ಯೇಸುವಿನಲ್ಲಿರುವ ದೇವರ ಸಭೆಗಳನ್ನು ಅನುಸರಿಸುವವರಾಗಿದ್ದಿರಿ. ಅವರು ಯೆಹೂದ್ಯರಿಂದ ಅನುಭವಿಸಿದಂಥ ಕಷ್ಟಗಳನ್ನು ನೀವೂ ನಿಮ್ಮ ಸ್ವದೇಶದವರಿಂದ ಅನುಭವಿಸಿದಿರಿ.ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ದಾವೀದನ ಕೀರ್ತನೆ. ಇಕ್ಕಟ್ಟಿನಲ್ಲಿ ಯೆಹೋವನು ನಿನ್ನ ಪ್ರಾರ್ಥನೆಯನ್ನು ಕೇಳಲಿ; ಯಾಕೋಬನ ದೇವರ ನಾಮವು ನಿನ್ನನ್ನು ಉದ್ಧಾರ ಮಾಡಲಿ. ಆತನು ತನ್ನ ಪರಿಶುದ್ಧ ನಿವಾಸದಿಂದ ನಿನಗೆ ಸಹಾಯಮಾಡಲಿ; ಚೀಯೋನಿನಿಂದ ನಿನಗೆ ಆಧಾರ ದಯಪಾಲಿಸಲಿ. ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ. ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.ಸಹೋದರರೇ, ನಾವು ಯಾವಾಗಲೂ ನಿಮ್ಮನ್ನು ಕುರಿತು ದೇವರಿಗೆ ಕೃತಜ್ಞತಾಸ್ತುತಿ ಮಾಡುವುದಕ್ಕೆ ಬದ್ಧರಾಗಿದ್ದೇವೆ, ಹಾಗೆ ಮಾಡುವುದು ಯೋಗ್ಯವಾಗಿದೆ. ಏಕೆಂದರೆ ನೀವು ನಂಬಿಕೆಯಲ್ಲಿ ಬಹಳ ಅಭಿವೃದ್ಧಿ ಹೊಂದುತ್ತಾ, ಪರಸ್ಪರವಾದ ಪ್ರೀತಿ ನಿಮ್ಮೆಲ್ಲರಲ್ಲಿಯೂ ಹೆಚ್ಚಾಗುತ್ತಿದೆ.ನನ್ನ ಪ್ರಾರ್ಥನೆಗಳಲ್ಲಿ ಯಾವಾಗಲೂ ನಿನ್ನನ್ನು ನೆನಪು ಮಾಡಿಕೊಂಡು ನಾನು ದೇವರಿಗೆ ಸ್ತೋತ್ರವನ್ನು ಸಲ್ಲಿಸುತ್ತೇನೆ, ನಿನಗಾಗಿ ವಿಜ್ಞಾಪನೆ ಮಾಡುತ್ತೇನೆ. ಕ್ರಿಸ್ತನಲ್ಲಿ ನಮಗೆ ದೊರಕಿರುವ ಎಲ್ಲಾ ಸುವರಗಳನ್ನು ಕುರಿತು ನೀನು ತಿಳಿವಳಿಕೆಯನ್ನು ಹೊಂದುತ್ತಿರುವೆ. ಕ್ರಿಸ್ತ ನಂಬಿಕೆಯಲ್ಲಿರುವ ನಿನ್ನ ಅನ್ಯೋನ್ಯತೆಯೂ ಕ್ರಿಸ್ತನಿಗೆ ಅತಿಯಾದ ಮಹಿಮೆಯನ್ನು ಉಂಟುಮಾಡಬೇಕೆಂದು ಪ್ರಾರ್ಥಿಸುತ್ತೇನೆ. ಸಹೋದರನೇ, ನಿನ್ನ ಮೂಲಕ ದೇವಜನರ ಹೃದಯಗಳಿಗೆ ಪ್ರೋತ್ಸಾಹವೂ, ಪ್ರೇರಣೆಯೂ ಉಂಟಾದುದರಿಂದ ಅವರ ಬಗ್ಗೆ ಇರುವ ಪ್ರೀತಿಯಿಂದ ನನಗೆ ಬಹಳ ಆನಂದವೂ, ಸಮಾಧಾನವೂ ಉಂಟಾಯಿತು.ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು