ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಅಪೊಸ್ತಲರ ಕೃತ್ಯಗಳು 20:28
ಬೈಬಲ್ ವಚನ · IRV
ಅಪೊಸ್ತಲರ ಕೃತ್ಯಗಳು 20:28
ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
ಇಡೀ ಅಧ್ಯಾಯ ಓದಿ: ಅಪೊಸ್ತಲರ ಕೃತ್ಯಗಳು 20
ಸಂದರ್ಭದಲ್ಲಿ
25ಇಗೋ, ಇಷ್ಟು ದಿನ ನಿಮ್ಮಲ್ಲಿ ಸಂಚಾರಮಾಡಿ ದೇವರ ರಾಜ್ಯವನ್ನು ಸಾರಿದವನಾದ ನನ್ನ ಮುಖವನ್ನು ಇನ್ನು ಮೇಲೆ ನಿಮ್ಮಲ್ಲಿ ಒಬ್ಬರೂ ನೋಡುವುದಿಲ್ಲವೆಂದು ಬಲ್ಲೆನು.
26ಆದಕಾರಣ ನಾನು ಈ ಹೊತ್ತು ಖಂಡಿತವಾಗಿ ಹೇಳುತ್ತೇನೆ, ನಿಮ್ಮಲ್ಲಿ ಯಾರಾದರೂ ನಾಶವಾದರೆ ಅದು ನನ್ನ ತಪ್ಪಿನಿಂದಲ್ಲ.
27ಏಕೆಂದರೆ ಒಂದನ್ನೂ ಮರೆಮಾಡದೆ ದೇವರ ಸಂಕಲ್ಪವನ್ನೆಲ್ಲಾ ನಿಮಗೆ ತಿಳಿಸಿದ್ದೇನೆ.
28ಕರ್ತನು ತನ್ನ ಸ್ವಂತ ರಕ್ತದಿಂದ ಸಂಪಾದಿಸಿಕೊಂಡ ದೇವರ ಸಭೆಯನ್ನು ಪರಿಪಾಲಿಸುವುದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಗುಂಪಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವುದರಿಂದ ನಿಮ್ಮ ವಿಷಯದಲ್ಲಿಯೂ, ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ.
29ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.
30ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
31ಆದಕಾರಣ ನಾನು ಕಣ್ಣೀರು ಸುರಿಸುತ್ತಾ ಮೂರು ವರ್ಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬನಿಗೆ ಬುದ್ಧಿ ಹೇಳಿದೆನೆಂಬುದನ್ನು ನೀವು ನೆನಪಿಸಿಕೊಂಡು ಎಚ್ಚರವಾಗಿರಿ.
ಇಂಗ್ಲಿಷ್ನಲ್ಲಿ
Keep watch over yourselves and the entire flock of which the Holy Spirit has made you overseers. Be shepherds of the church of God, which He purchased with His own blood.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನಿಮ್ಮ ಮೇಲ್ವಿಚಾರಣೆಯಲ್ಲಿರುವ ದೇವರ ಮಂದೆಯನ್ನು ಕಾಯಿರಿ. ಬಲವಂತದಿಂದಲ್ಲ ದೇವರ ಚಿತ್ತಾನುಸಾರ ಇಷ್ಟಪೂರ್ವಕವಾಗಿ, ನೀಚವಾದ ದ್ರವ್ಯಾಶೆಯಿಂದಲ್ಲ, ಸಿದ್ಧ ಮನಸ್ಸಿನಿಂದಲೇ ಮೇಲ್ವಿಚಾರಣೆ ಮಾಡಿರಿ. ನಿಮ್ಮ ವಶಕ್ಕೆ ಒಪ್ಪಿಸಿಕೊಟ್ಟಿರುವವರ ಮೇಲೆ ದೊರೆತನಮಾಡುವವರಂತೆ ನಡೆಯದೆ ಮಂದೆಗೆ ಮಾದರಿಯಾಗಿಯೇ ನಡೆದುಕೊಳ್ಳಿರಿ.ನಿನ್ನ ವಿಷಯದಲ್ಲಿಯೂ ನಿನ್ನ ಉಪದೇಶದ ವಿಷಯದಲ್ಲಿಯೂ ಎಚ್ಚರಿಕೆಯಾಗಿರು. ನೀನು ಈ ಕಾರ್ಯಗಳಲ್ಲಿ ನಿರತನಾಗಿರು, ಆಗ ನೀನು ನಿನ್ನನ್ನೂ ಮತ್ತು ನಿನ್ನ ಉಪದೇಶ ಕೇಳುವವರನ್ನೂ ರಕ್ಷಿಸುವಿ.ನಿಮ್ಮ ಪೂರ್ವಿಕರಿಂದ ಬಂದಿರುವ ವ್ಯರ್ಥವಾದ ಸಂಪ್ರದಾಯಗಳ ನಡವಳಿಕೆಗಳಿಂದ ನಿಮಗೆ ಬಿಡುಗಡೆಯನ್ನುಂಟುಮಾಡಿದ್ದು ಬೆಳ್ಳಿ, ಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ. ಯೇಸು ಕ್ರಿಸ್ತನೆಂಬ ನಿಷ್ಕಳಂಕವೂ, ನಿರ್ಮಲವೂ ಆದ ಕುರಿಮರಿಯ ಅಮೂಲ್ಯವಾದ ರಕ್ತದಿಂದಲೇ ಎಂದು ನೀವು ಬಲ್ಲಿರಲ್ಲವೇ.ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.ಇದಲ್ಲದೆ ನನ್ನ ಮನಸ್ಸು ಒಪ್ಪುವ ಪಾಲಕರನ್ನು ನಿಮಗೆ ದಯಪಾಲಿಸುವೆನು; ಅವರು ನಿಮ್ಮನ್ನು ಜ್ಞಾನ ಮತ್ತು ವಿವೇಕಗಳಿಂದ ಪೋಷಿಸುವರು.ಯೆಹೂದ್ಯರಿಗಾಗಲಿ ಗ್ರೀಕರಿಗಾಗಲಿ ದೇವರ ಸಭೆಗಾಗಲಿ ವಿಘ್ನವಾಗಬೇಡಿರಿ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು