Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಅಪೊಸ್ತಲರ ಕೃತ್ಯಗಳು 20:35

ಬೈಬಲ್ ವಚನ · IRV

ಅಪೊಸ್ತಲರ ಕೃತ್ಯಗಳು 20:35

ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.

ಇಡೀ ಅಧ್ಯಾಯ ಓದಿ: ಅಪೊಸ್ತಲರ ಕೃತ್ಯಗಳು 20

ಸಂದರ್ಭದಲ್ಲಿ

32ನಾನೀಗ ನಿಮ್ಮನ್ನು ದೇವರಿಗೂ, ಆತನ ಕೃಪಾವಾಕ್ಯಕ್ಕೂ ಒಪ್ಪಿಸಿಕೊಡುತ್ತೇನೆ. ಆತನು ನಿಮ್ಮಲ್ಲಿ ಭಕ್ತಿವೃದ್ಧಿಯನ್ನುಂಟುಮಾಡುವುದಕ್ಕೂ, ಪರಿಶುದ್ಧರೊಂದಿಗೆ ನಿಮಗೆ ಹಕ್ಕನ್ನು ಅನುಗ್ರಹಿಸುವುದಕ್ಕೆ ಶಕ್ತನಾಗಿದ್ದಾನೆ.

33ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.

34ಈ ಕೈಗಳಿಂದಲೇ ಕೆಲಸಮಾಡಿ, ನನ್ನ ಕೊರತೆಗಳನ್ನೂ, ನನ್ನ ಜೊತೆಯಲ್ಲಿದ್ದವರ ಕೊರತೆಗಳನ್ನು ನೀಗಿಸಿದ್ದನ್ನು ನೀವೇ ಬಲ್ಲಿರಿ.

35ಎಲ್ಲಾ ವಿಷಯಗಳಲ್ಲಿ ನಾನು ನಿಮಗೆ ಮಾದರಿ ತೋರಿಸಿದ್ದೇನೆ. ನೀವು ಹಾಗೆಯೇ ದುಡಿದು ಬಲವಿಲ್ಲದವರಿಗೆ ಉಪಕಾರಮಾಡಬೇಕು; ಮತ್ತು; ‘ತೆಗೆದುಕೊಳ್ಳುವುದಕ್ಕಿಂತ ಕೊಡುವುದೇ ಹೆಚ್ಚಿನ ಭಾಗ್ಯವೆಂಬುದಾಗಿ’ ಕರ್ತನಾದ ಯೇಸು ತಾನೇ ಹೇಳಿದ ಮಾತುಗಳನ್ನು ನೆನಪಿನಲ್ಲಿಟ್ಟುಕೊಂಡಿರಬೇಕು” ಅಂದನು.

36ಈ ಮಾತುಗಳನ್ನು ಅವನು ಹೇಳಿದ ಮೇಲೆ ಮೊಣಕಾಲೂರಿಕೊಂಡು ಅವರೆಲ್ಲರ ಸಂಗಡ ಪ್ರಾರ್ಥನೆಮಾಡಿದನು.

37ಬಳಿಕ ಪೌಲನು; “ನೀವು ನನ್ನ ಮುಖವನ್ನು ಇನ್ನೆಂದೂ ಕಾಣಲಾರಿರಿ” ಅನ್ನಲು, ಅವರೆಲ್ಲರು ವ್ಯಥೆಪಟ್ಟು, ದುಃಖದಿಂದ ಅಳುತ್ತಾ, ಅವನ ಕೊರಳನ್ನು ತಬ್ಬಿಕೊಂಡು ಅವನಿಗೆ ಮುದ್ದಿಟ್ಟರು.

38ತರುವಾಯ ಅವರು ಹಡಗಿನವರೆಗೆ ಅವನ ಸಂಗಡ ಹೋಗಿ ಅವನನ್ನು ಬೀಳ್ಕೊಟ್ಟರು.

ಅಪೊಸ್ತಲರ ಕೃತ್ಯಗಳು 20

ಇಂಗ್ಲಿಷ್‌ನಲ್ಲಿ

Berean Standard BibleActs 20:35In everything, I showed you that by this kind of hard work we must help the weak, remembering the words of the Lord Jesus Himself: ‘It is more blessed to give than to receive.’”

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಇಬ್ರಿ 13:16ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
ಜ್ಞಾನೋ 19:17ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
ಲೂಕ 14:12–14ಆತನು ತನ್ನನ್ನು ಊಟಕ್ಕೆ ಕರೆದವನಿಗೆ ಸಹ ಒಂದು ಮಾತು ಹೇಳಿದನು; ಅದೇನೆಂದರೆ, “ನೀನು ಮಧ್ಯಾಹ್ನದ ಊಟಕ್ಕೆ ಅಥವಾ ಸಾಯಂಕಾಲದ ಊಟಕ್ಕೆ ನಿನ್ನ ಸ್ನೇಹಿತರನ್ನಾಗಲಿ, ನಿನ್ನ ಅಣ್ಣತಮ್ಮಂದಿರನ್ನಾಗಲಿ, ನಿನ್ನ ಬಂಧುಬಾಂಧವರನ್ನಾಗಲಿ, ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ. ಒಂದು ವೇಳೆ ಅವರು ಸಹ ಪ್ರತಿಯಾಗಿ ನಿನ್ನನ್ನು ಕರೆದಾರು, ಮತ್ತು ನಿನಗೆ ಮುಯ್ಯಿಗೆಮುಯ್ಯಾಗುವುದು. ಆದರೆ ನೀನು ಔತಣ ಮಾಡಿಸುವಾಗ ಬಡವರು, ಅಂಗಹೀನವಾದವರು, ಕುಂಟರು, ಕುರುಡರು ಇಂಥವರನ್ನು ಕರೆ, ಆಗ ನೀನು ಧನ್ಯನಾಗುವಿ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ನೀತಿವಂತರು ಪುನರುತ್ಥಾನ ಹೊಂದುವಾಗ ನಿನಗೆ ಪ್ರತಿಫಲ ದೊರಕುವುದು.”
ಮತ್ತಾ 10:8ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠರೋಗಿಗಳನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ.
2 ಕೊರಿ 8:9ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.
1 ಥೆಸ 5:14ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.
ಯೆಶಾ 58:7–12ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ. ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು. ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು, ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು. ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ. ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; “ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” ಎಂಬ ಬಿರುದುಗಳು ನಿಮಗುಂಟಾಗುವವು.
ರೋಮಾ 15:1ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು