Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೊಲೊಸ್ಸೆಯವರಿಗೆ 2:8

ಬೈಬಲ್ ವಚನ · IRV

ಕೊಲೊಸ್ಸೆಯವರಿಗೆ 2:8

ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.

ಇಡೀ ಅಧ್ಯಾಯ ಓದಿ: ಕೊಲೊಸ್ಸೆಯವರಿಗೆ 2

ಸಂದರ್ಭದಲ್ಲಿ

5ನಾನು ಶರೀರದಿಂದ ನಿಮ್ಮ ಬಳಿಯಲ್ಲಿ ಇಲ್ಲದಿದ್ದರೂ ಆತ್ಮನಿಂದ ನಿಮ್ಮೊಂದಿಗಿದ್ದು ನೀವು ಕ್ರಮಬದ್ಧವಾಗಿ ನಡೆಯುವುದನ್ನು ಮತ್ತು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗಿ ನಿಂತಿರುವುದನ್ನೂ ನೋಡಿ ಸಂತೋಷಪಡುತ್ತೇನೆ.

6ನೀವು ಕರ್ತನಾದ ಯೇಸು ಕ್ರಿಸ್ತನನ್ನು ಸ್ವೀಕರಿಸಿದಂತೆಯೇ ಆತನಲ್ಲಿದ್ದವರಾಗಿ ಬಾಳಿರಿ.

7ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.

8ಮೋಸಕರವಾದ ಮತ್ತು ವ್ಯರ್ಥವಾದ ತತ್ವಜ್ಞಾನ ಬೋಧನೆಯಿಂದ ಯಾರೂ ನಿಮ್ಮನ್ನು ವಶಮಾಡಿಕೊಳ್ಳದಂತೆ ಎಚ್ಚರಿಕೆಯಾಗಿರಿ. ಇವುಗಳು ಮನುಷ್ಯರ ಸಂಪ್ರದಾಯಗಳಿಗೆ ಮತ್ತು ಪ್ರಾಪಂಚಿಕ ಮೂಲ ಬೋಧನೆಗಳಿಗೆ ಸಂಬಂಧಿಸಿದವುಗಳೇ ಹೊರತು ಕ್ರಿಸ್ತನಿಗಲ್ಲ.

9ದೇವರ ಸರ್ವಸಂಪೂರ್ಣತೆಯು ಕ್ರಿಸ್ತನ ದೇಹದಲ್ಲಿ ವಾಸಮಾಡುತ್ತಿದೆ,

10ಆತನು ಎಲ್ಲಾ ದೊರೆತನಗಳಿಗೂ ಹಾಗೂ ಅಧಿಕಾರಿಗಳಿಗೂ ತಲೆಯಾಗಿರುವುದರಿಂದ ಆತನಲ್ಲಿದ್ದುಕೊಂಡೇ ನೀವು ಪರಿಪೂರ್ಣತೆಯನ್ನು ಹೊಂದಿದವರಾಗಿದ್ದೀರಿ.

11ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.

ಕೊಲೊಸ್ಸೆಯವರಿಗೆ 2

ಇಂಗ್ಲಿಷ್‌ನಲ್ಲಿ

Berean Standard BibleColossians 2:8See to it that no one takes you captive through philosophy and empty deception, which are based on human tradition and the spiritual forces of the world rather than on Christ.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ತಿಮೊ 6:20ಎಲೈ ತಿಮೊಥೆಯನೇ, ಜ್ಞಾನೋಪದೇಶವೆಂದು ಸುಳ್ಳಾಗಿ ಹೇಳಿಕೊಳ್ಳುವ ಬೋಧನೆಗೆ ಸಂಬಂಧಪಟ್ಟ, ಪ್ರಾಪಂಚಿಕವಾದ ಆ ಹರಟೆ ಮಾತುಗಳಿಗೂ, ವಿವಾದಗಳಿಗೂ ನೀನು ದೂರವಾಗಿದ್ದು ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡಿಕೋ.
ಎಫೆ 5:6ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
ಮತ್ತಾ 7:15“ಕುರಿವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುವ ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರಿ; ನಿಜವಾಗಿಯೂ ಅವರು ಕಿತ್ತುತಿನ್ನುವ ತೋಳಗಳೇ.
ಗಲಾ 4:9ಈಗಲಾದರೋ ನೀವು ದೇವರನ್ನು ತಿಳಿದುಕೊಂಡಿದ್ದೀರಿ, ಅಥವಾ ದೇವರು ನಿಮ್ಮನ್ನು ತಿಳಿದುಕೊಂಡಿದ್ದಾನೆ. ಹೀಗಿರಲಾಗಿ ನೀವು ಬಲವಿಲ್ಲದ, ಕೆಲಸಕ್ಕೆ ಬಾರದ, ದರಿದ್ರವಾದ ಮೂಲತತ್ವಗಳಿಗೆ ಹಿಂತಿರುಗಿ ಅದಕ್ಕೆ ದಾಸರಾಗುವುದಕ್ಕೆ ಏಕೆ ಬಯಸುತ್ತೀರಿ?
1 ಕೊರಿ 3:18–19ಯಾವನೂ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳದಿರಲಿ ನಿಮ್ಮಲ್ಲಿ ಯಾವನಾದರೂ ಲೋಕಸಂಬಂಧವಾಗಿ ಜ್ಞಾನಿಯಾಗಿದ್ದೇನೆಂದು ಭಾವಿಸಿಕೊಳ್ಳುವುದಾದರೆ ಅವನು ಜ್ಞಾನಿಯಾಗುವುದಕ್ಕಾಗಿ “ಮೂರ್ಖನಾಗಲಿ” ಯಾಕೆಂದರೆ ಇಹಲೋಕದ ಜ್ಞಾನವು ದೇವರ ಮುಂದೆ ಮೂರ್ಖತನವಾಗಿದೆ. “ಆತನು ಜ್ಞಾನಿಗಳನ್ನು ಅವರ ತಂತ್ರಗಳಲ್ಲಿಯೆ ಹಿಡಿದುಕೊಳ್ಳುತ್ತಾನೆಂತಲೂ,”
ರೋಮಾ 1:21–22ಯಾಕೆಂದರೆ ದೇವರ ವಿಷಯವಾಗಿ ಅವರಿಗೆ ತಿಳಿವಳಿಕೆಯಿದ್ದರೂ ಅವರು ಆತನನ್ನು ದೇವರೆಂದು ಮಹಿಮೆಪಡಿಸಲಿಲ್ಲ. ಆತನ ಉಪಕಾರಗಳನ್ನು ನೆನಸಿ ಆತನನ್ನು ಸ್ತುತಿಸಲಿಲ್ಲ. ಅವರು ಎಷ್ಟೇ ವಿಚಾರ ಮಾಡಿದರೂ ಫಲ ಕಾಣಲಿಲ್ಲ. ವಿವೇಕವಿಲ್ಲದ ಅವರ ಮನಸ್ಸು ಕತ್ತಲಾಗಿಬಿಟ್ಟಿದೆ. ತಾವು ಜ್ಞಾನಿಗಳೆಂದು ಹೇಳಿಕೊಂಡು ಹುಚ್ಚರಾದರು.
ಕೊಲೊ 2:20ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,
2 ತಿಮೊ 3:13ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು