ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೊಲೊಸ್ಸೆಯವರಿಗೆ 3:13
ಬೈಬಲ್ ವಚನ · IRV
ಕೊಲೊಸ್ಸೆಯವರಿಗೆ 3:13
ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.
ಇಡೀ ಅಧ್ಯಾಯ ಓದಿ: ಕೊಲೊಸ್ಸೆಯವರಿಗೆ 3
ಸಂದರ್ಭದಲ್ಲಿ
10ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.
11ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
12ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ.
13ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.
14ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
15ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
16ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
ಇಂಗ್ಲಿಷ್ನಲ್ಲಿ
Bear with one another and forgive any complaint you may have against someone else. Forgive as the Lord forgave you.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು. ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೂ, ಭಕ್ತಿವೃದ್ಧಿಯನ್ನೂ ಅಪೇಕ್ಷಿಸುವವನಾಗಿ ಅವನನ್ನು ಮೆಚ್ಚಿಸಬೇಕು.ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ. ನಿಮ್ಮ ತಂದೆಯು ಕರುಣೆಯುಳ್ಳವನಾಗಿರುವ ಪ್ರಕಾರವೇ ನೀವೂ ಕರುಣೆಯುಳ್ಳವರಾಗಿರಿ. “ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿನ್ನ ಸಹೋದರನು ತಪ್ಪುಮಾಡಿದರೆ ಅವನನ್ನು ಗದರಿಸು. ಅವನು ಪಶ್ಚಾತ್ತಾಪಪಟ್ಟರೆ ಅವನ ತಪ್ಪನ್ನು ಕ್ಷಮಿಸಿಬಿಡು. ಅವನು ದಿನಕ್ಕೆ ಏಳು ಸಾರಿ ನಿನಗೆ ತಪ್ಪುಮಾಡಿ ಏಳು ಸಾರಿಯೂ ನಿನ್ನ ಕಡೆಗೆ ತಿರುಗಿಕೊಂಡು, ‘ನಾನು ಪಶ್ಚಾತ್ತಾಪಪಡುತ್ತೇನೆ ನನ್ನನ್ನು ಕ್ಷಮಿಸು’ ಎಂದು ಕೇಳಿಕೊಂಡರೆ ಅವನನ್ನು ಕ್ಷಮಿಸು” ಎಂದು ಹೇಳಿದನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು