Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೊಲೊಸ್ಸೆಯವರಿಗೆ 3:16

ಬೈಬಲ್ ವಚನ · IRV

ಕೊಲೊಸ್ಸೆಯವರಿಗೆ 3:16

ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

ಇಡೀ ಅಧ್ಯಾಯ ಓದಿ: ಕೊಲೊಸ್ಸೆಯವರಿಗೆ 3

ಸಂದರ್ಭದಲ್ಲಿ

13ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.

14ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.

15ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.

16ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.

17ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.

18ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.

19ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.

ಕೊಲೊಸ್ಸೆಯವರಿಗೆ 3

ಇಂಗ್ಲಿಷ್‌ನಲ್ಲಿ

Berean Standard BibleColossians 3:16Let the word of Christ richly dwell within you as you teach and admonish one another with all wisdom, and as you sing psalms, hymns, and spiritual songs with gratitude in your hearts to God.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೀರ್ತ 119:11ನಿನಗೆ ವಿರುದ್ಧವಾಗಿ ಪಾಪಮಾಡದಂತೆ, ನಿನ್ನ ನುಡಿಗಳನ್ನು ನನ್ನ ಹೃದಯದಲ್ಲಿ ಇಟ್ಟುಕೊಂಡಿದ್ದೇನೆ.
ಎಫೆ 5:19ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.
ಯೋಹಾ 15:7ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ನೀವು ಏನಾದರೂ ಬೇಡಿಕೊಳ್ಳಿರಿ ಅದು ನಿಮಗೆ ದೊರೆಯುವುದು.
ರೋಮಾ 10:17ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
ಯೆರೆ 15:16ನನಗೆ ದೊರೆತ ನಿನ್ನ ಮಾತುಗಳನ್ನು ಆಹಾರಮಾಡಿಕೊಂಡೆನು, ನಿನ್ನ ನುಡಿಗಳು ನನಗೆ ಹರ್ಷವೂ, ಹೃದಯಾನಂದವೂ ಆದವು. ಸೇನಾಧೀಶ್ವರನಾದ ದೇವರೇ, ಯೆಹೋವನೇ, ನಾನು ನಿನ್ನ ಹೆಸರಿನವನಲ್ಲವೇ!
1 ಯೋಹಾ 2:24ನೀವಂತೂ ಯಾವ ಬೋಧನೆಯನ್ನು ಮೊದಲಿನಿಂದ ಕೇಳಿದ್ದೀರೋ ಅದು ನಿಮ್ಮಲ್ಲಿ ನೆಲೆಗೊಂಡಿರಲಿ. ಮೊದಲಿನಿಂದ ನೀವು ಕೇಳಿದ್ದು ನಿಮ್ಮಲ್ಲಿ ನೆಲೆಗೊಂಡಿದ್ದರೆ ನೀವು ಸಹ ಮಗನಲ್ಲಿಯೂ ತಂದೆಯಾದ ದೇವರಲ್ಲಿಯೂ ನೆಲೆಗೊಂಡಿರುತ್ತೀರಿ.
ಇಬ್ರಿ 4:12–13ಏಕೆಂದರೆ ದೇವರ ವಾಕ್ಯವು ಸಜೀವವಾದದ್ದು, ಸಕ್ರಿಯವಾದದ್ದು ಮತ್ತು ಯಾವ ಇಬ್ಬಾಯಿ ಕತ್ತಿಗಿಂತಲೂ ಹರಿತವಾದದ್ದು ಆಗಿದ್ದು, ಪ್ರಾಣ ಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದಾಗಿದ್ದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದ್ದೂ ಆಗಿದೆ. ಆತನ ದೃಷ್ಟಿಗೆ ಮರೆಯಾಗಿರುವ ಒಂದು ಸೃಷ್ಟಿಯೂ ಇಲ್ಲ. ಆತನ ಕಣ್ಣಿಗೆ ಮರೆಯಾದದ್ದು ಒಂದೂ ಇಲ್ಲ ಎಲ್ಲವೂ ನಗ್ನವಾಗಿಯೂ ಬಟ್ಟಬಯಲಾಗಿಯೂ ಇದೆ. ಅಂಥವನಿಗೆ ನಾವು ಲೆಕ್ಕಕೊಡಬೇಕಾಗಿದೆ.
ಧರ್ಮೋ 6:6–9ನಾನು ಈಗ ನಿಮಗೆ ತಿಳಿಸುವ ಮಾತುಗಳು ನಿಮ್ಮ ಹೃದಯದಲ್ಲಿರಬೇಕು. ಇವುಗಳನ್ನು ನಿಮ್ಮ ಮಕ್ಕಳಿಗೆ ಅಭ್ಯಾಸಮಾಡಿಸಿ, ಮನೆಯಲ್ಲಿ ಕುಳಿತಿರುವಾಗಲೂ, ದಾರಿಯಲ್ಲಿ ನಡೆಯುವಾಗಲೂ, ಮಲಗುವಾಗಲೂ ಮತ್ತು ಏಳುವಾಗಲೂ ಇವುಗಳ ವಿಷಯದಲ್ಲಿ ಮಾತನಾಡಬೇಕು. ಇವುಗಳನ್ನು ಜ್ಞಾಪಕಾರ್ಥವಾಗಿ ಕೈಗೆ ಕಟ್ಟಿಕೊಳ್ಳಬೇಕು, ಇವು ಹಣೆಗೆ ಕಟ್ಟಿಕೊಳ್ಳುವ ಜ್ಞಾಪಕದ ಪಟ್ಟಿಯಂತೆ ಇರಬೇಕು. ನಿಮ್ಮ ಮನೆಬಾಗಿಲಿನ ನಿಲುವು ಪಟ್ಟಿಗಳಲ್ಲಿಯೂ ಮತ್ತು ದ್ವಾರಗಳ ಮೇಲೆಯೂ ಇವುಗಳನ್ನು ಬರೆಯಬೇಕು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು