ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೊಲೊಸ್ಸೆಯವರಿಗೆ 3:17
ಬೈಬಲ್ ವಚನ · IRV
ಕೊಲೊಸ್ಸೆಯವರಿಗೆ 3:17
ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
ಇಡೀ ಅಧ್ಯಾಯ ಓದಿ: ಕೊಲೊಸ್ಸೆಯವರಿಗೆ 3
ಸಂದರ್ಭದಲ್ಲಿ
14ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.
15ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.
16ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
17ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
18ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
19ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ಇಂಗ್ಲಿಷ್ನಲ್ಲಿ
And whatever you do, in word or deed, do it all in the name of the Lord Jesus, giving thanks to God the Father through Him.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಹೀಗಿರಲಾಗಿ ನೀವು ತಿಂದರೂ, ಕುಡಿದರೂ, ಇನ್ನೇನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿರಿ.ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.ಒಬ್ಬನು ಬೋಧಿಸುವವನಾದರೆ ದೈವೋಕ್ತಿಗಳನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರು ಕೊಡುವ ಶಕ್ತಿಗನುಗುಣವಾಗಿ ಮಾಡಲಿ. ಇವೆಲ್ಲವುಗಳಿಂದ ಯೇಸು ಕ್ರಿಸ್ತನ ಮೂಲಕ ದೇವರಿಗೆ ಸ್ತೋತ್ರ ಉಂಟಾಗುವುದು. ಯೇಸು ಕ್ರಿಸ್ತನಿಗೆ ಅಧಿಪತ್ಯವೂ ಮತ್ತು ಘನವೂ ಯುಗಯುಗಾಂತರಗಳಲ್ಲಿಯೂ ಇರುವವು ಆಮೆನ್.ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು