ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೊಲೊಸ್ಸೆಯವರಿಗೆ 3:19
ಬೈಬಲ್ ವಚನ · IRV
ಕೊಲೊಸ್ಸೆಯವರಿಗೆ 3:19
ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
ಇಡೀ ಅಧ್ಯಾಯ ಓದಿ: ಕೊಲೊಸ್ಸೆಯವರಿಗೆ 3
ಸಂದರ್ಭದಲ್ಲಿ
16ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ.
17ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
18ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
19ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
21ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.
22ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.
ಇಂಗ್ಲಿಷ್ನಲ್ಲಿ
ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.“ಈಗ ಸರಿ, ಈಕೆಯು ನನ್ನ ಎಲುಬುಗಳಿಂದ ಬಂದ ಎಲುಬು, ನನ್ನ ಮಾಂಸದಿಂದ ಬಂದ ಮಾಂಸವೂ ಆಗಿದ್ದಾಳೆ. ಈಕೆಯು ಮನುಷ್ಯನಿಂದ ಉತ್ಪತ್ತಿಯಾದ ಕಾರಣ ನಾರೀ ಎನ್ನಿಸಿಕೊಳ್ಳುವಳು” ಅಂದನು. ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ. ಯಾರೂ ಎಂದೂ ಸ್ವಂತ ಶರೀರವನ್ನು ಹಗೆಮಾಡಿದ್ದಿಲ್ಲವಲ್ಲ, ಎಲ್ಲರೂ ತಮ್ಮ ಶರೀರಗಳನ್ನು ಪೋಷಿಸಿ ಪಾಲನೆ ಮಾಡುತ್ತಾರಷ್ಟೇ.ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು