Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೊಲೊಸ್ಸೆಯವರಿಗೆ 3:21

ಬೈಬಲ್ ವಚನ · IRV

ಕೊಲೊಸ್ಸೆಯವರಿಗೆ 3:21

ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.

ಇಡೀ ಅಧ್ಯಾಯ ಓದಿ: ಕೊಲೊಸ್ಸೆಯವರಿಗೆ 3

ಸಂದರ್ಭದಲ್ಲಿ

18ಸತಿಯರೇ, ಕರ್ತನಿಗೆ ಯೋಗ್ಯವಾದ ರೀತಿಯಲ್ಲಿ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.

19ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.

20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.

21ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.

22ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.

23ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.

24ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.

ಕೊಲೊಸ್ಸೆಯವರಿಗೆ 3

ಇಂಗ್ಲಿಷ್‌ನಲ್ಲಿ

Berean Standard BibleColossians 3:21Fathers, do not provoke your children, so they will not become discouraged.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಜ್ಞಾನೋ 4:1–4ಮಕ್ಕಳೇ, ತಂದೆಯ ಉಪದೇಶವನ್ನು ಕೇಳಿರಿ, ವಿವೇಕವನ್ನು ಗ್ರಹಿಸುವಂತೆ ಕಿವಿಗೊಡಿರಿ. ನಾನು ನಿಮಗೆ ಸುಬೋಧೆಯನ್ನು ಮಾಡುವೆನು, ನನ್ನ ಉಪದೇಶವನ್ನು ಬಿಡಬೇಡಿರಿ. ನಾನೂ ನನ್ನ ತಂದೆಗೆ ಅಧೀನನಾದ ಮಗನೂ, ತಾಯಿಯ ದೃಷ್ಟಿಗೆ ಕೋಮಲನಾದ ಏಕಪುತ್ರನೂ ಆಗಿದ್ದೆನು. ಆಗ ತಂದೆಯು ನನಗೆ ಬೋಧಕನಾಗಿ ಹೀಗೆಂದನು, “ನಿನ್ನ ಮನಸ್ಸು ನನ್ನ ಮಾತುಗಳನ್ನು ಹಿಡಿದುಕೊಳ್ಳಲಿ, ನನ್ನ ಆಜ್ಞೆಯನ್ನು ಕೈಕೊಂಡು ಸುಖವಾಗಿ ಬಾಳು.
ಎಫೆ 6:4ತಂದೆಗಳೇ, ನಿಮ್ಮ ಮಕ್ಕಳಿಗೆ ಕೋಪವನ್ನೆಬ್ಬಿಸದೆ, ಕರ್ತನಿಗೆ ಮೆಚ್ಚಿಗೆಯಾಗುವ ರೀತಿಯಲ್ಲಿ ಅವರನ್ನು ಶಿಸ್ತಿನಲ್ಲಿಯೂ ಉಪದೇಶದಲ್ಲಿಯೂ ಸಾಕಿ ಸಲಹಿರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು