Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೊಲೊಸ್ಸೆಯವರಿಗೆ 3:23

ಬೈಬಲ್ ವಚನ · IRV

ಕೊಲೊಸ್ಸೆಯವರಿಗೆ 3:23

ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.

ಇಡೀ ಅಧ್ಯಾಯ ಓದಿ: ಕೊಲೊಸ್ಸೆಯವರಿಗೆ 3

ಸಂದರ್ಭದಲ್ಲಿ

20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.

21ತಂದೆಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಅವರನ್ನು ಮನಗುಂದಿಸಿಬೇಡಿರಿ.

22ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.

23ನೀವು ಯಾವ ಕೆಲಸವನ್ನು ಮಾಡಿದರೋ ಅದನ್ನು ಮನುಷ್ಯರಿಗೋಸ್ಕರವೆಂದು ಮಾಡದೇ ಕರ್ತನಿಗೋಸ್ಕರವೇ ಎಂದು ಮನಃಪೂರ್ವಕವಾಗಿ ಮಾಡಿರಿ.

24ಕರ್ತನಿಂದ ಬಾಧ್ಯತೆಯೆಂಬ ಪ್ರತಿಫಲವನ್ನು ಹೊಂದುವಿರೆಂದು ತಿಳಿದುಕೊಂಡು ಕರ್ತನಾದ ಕ್ರಿಸ್ತನನ್ನು ಸೇವಿಸುವವರಾಗಿರಿ.

25ಅನ್ಯಾಯಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ದಂಡನೆಯನ್ನು ಹೊಂದುವನಷ್ಟೆ ಮತ್ತು ಅದರಲ್ಲಿ ಪಕ್ಷಪಾತವಿರುವುದಿಲ್ಲ.

ಕೊಲೊಸ್ಸೆಯವರಿಗೆ 3

ಇಂಗ್ಲಿಷ್‌ನಲ್ಲಿ

Berean Standard BibleColossians 3:23Whatever you do, work at it with your whole being, for the Lord and not for men,

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೊಲೊ 3:17ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
ಎಫೆ 6:6–7ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ. ಮನುಷ್ಯರಿಗೋಸ್ಕರವಲ್ಲ, ಕರ್ತನಿಗೋಸ್ಕರ ಸೇವೆಮಾಡುತ್ತೇವೆಂದು ಮನಃಪೂರ್ವಕವಾಗಿ ಸೇವೆಮಾಡಿರಿ.
ರೋಮಾ 14:8ನಾವು ಬದುಕಿದರೆ ಕರ್ತನಿಗಾಗಿ ಬದುಕುತ್ತೇವೆ; ಸತ್ತರೆ ಕರ್ತನಿಗಾಗಿ ಸಾಯುತ್ತೇವೆ; ಬದುಕಿದರೂ ಸತ್ತರೂ ನಾವು ಕರ್ತನವರೇ.
2 ಪೂರ್ವ 31:21ಅವನು ತನ್ನ ದೇವರ ಒಲುಮೆಯನ್ನು ಪಡೆದುಕೊಳ್ಳುವುದಕ್ಕಾಗಿ ದೇವಾಲಯದ ಸೇವೆ ಮಾಡುವ, ಕಾರ್ಯದಲ್ಲಿಯೂ ಧರ್ಮಶಾಸ್ತ್ರವಿಧಿಗಳ ಸಂಬಂಧದಲ್ಲಿಯೂ, ತಾನು ಪ್ರಾರಂಭಿಸಿದ ಎಲ್ಲಾ ಕಾರ್ಯಗಳನ್ನು ಯಥಾರ್ಥಚಿತ್ತದಿಂದಲೂ ಪ್ರಾಮಾಣಿಕನಾಗಿಯೂ ನಡೆದುಕೊಂಡು ಕೃತಾರ್ಥನಾದನು.
ಪ್ರಸ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಪೂರ್ಣ ಶಕ್ತಿಯಿಂದ ಮಾಡು. ಏಕೆಂದರೆ ನೀನು ಸೇರಬೇಕಾದ ಸಮಾಧಿಯಲ್ಲಿ ಯಾವ ಕೆಲಸವೂ, ಯುಕ್ತಿಯೂ, ತಿಳಿವಳಿಕೆಯೂ, ಜ್ಞಾನವೂ ಇರುವುದಿಲ್ಲ.
1 ಪೇತ್ರ 2:15ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.
1 ಪೇತ್ರ 2:13ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ
ಕೀರ್ತ 119:10ನಾನು ಪೂರ್ಣಮನಸ್ಸಿನಿಂದ ನಿನ್ನನ್ನು ಹುಡುಕುತ್ತೇನೆ, ನಿನ್ನ ಆಜ್ಞೆಗಳಿಗೆ ತಪ್ಪಿಹೋಗದಂತೆ ನನ್ನನ್ನು ಕಾಪಾಡು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು