ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಕೊಲೊಸ್ಸೆಯವರಿಗೆ 3:8
ಬೈಬಲ್ ವಚನ · IRV
ಕೊಲೊಸ್ಸೆಯವರಿಗೆ 3:8
ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.
ಇಡೀ ಅಧ್ಯಾಯ ಓದಿ: ಕೊಲೊಸ್ಸೆಯವರಿಗೆ 3
ಸಂದರ್ಭದಲ್ಲಿ
5ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ.
6ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ.
7ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ.
8ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.
9ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.
10ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.
11ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.
ಇಂಗ್ಲಿಷ್ನಲ್ಲಿ
But now you must put aside all such things as these: anger, rage, malice, slander, and filthy language from your lips.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.ಯೇಸುವಿನಲ್ಲಿರುವ ಸತ್ಯೋಪದೇಶವು ಯಾವುದೆಂದರೆ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೇ ಪೂರ್ವಸ್ವಭಾವವನ್ನು ತೆಗೆದುಹಾಕಿಬಿಡಬೇಕು. ಅದು ಮೋಸಕರವಾದ ದುರಾಶೆಗಳಿಂದ ಕೆಟ್ಟುಹೋಗುವಂಥದ್ದು.ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ. ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು