ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಧರ್ಮೋಪದೇಶಕಾಂಡ 18:10–12
ಬೈಬಲ್ ವಚನ · IRV
ಧರ್ಮೋಪದೇಶಕಾಂಡ 18:10–12
10ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
11ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.
12ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.
ಇಡೀ ಅಧ್ಯಾಯ ಓದಿ: ಧರ್ಮೋಪದೇಶಕಾಂಡ 18
ಸಂದರ್ಭದಲ್ಲಿ
7ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಸೇವೆಮಾಡುವ ತನ್ನ ಸ್ವಕುಲದವರಂತೆ ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ತಾನೂ ಸೇವೆ ನಡಿಸಿದರೆ,
8ಅವನ ಕೈಯಲ್ಲಿ ಪಿತ್ರಾರ್ಜಿತ ಸೊತ್ತನ್ನು ಮಾರಿದ ಹಣವಿದ್ದರೂ, ಇತರ ಲೇವಿಯರೊಂದಿಗೆ ಸಮವಾಗಿ ಭೋಗಿಸುವುದಕ್ಕೆ ಬಾಧ್ಯನಾಗಿರುವನು.
9ನಿಮ್ಮ ದೇವರಾದ ಯೆಹೋವನು ನಿಮಗೆ ಕೊಡುವ ದೇಶದಲ್ಲಿ ನೀವು ಸೇರಿದಾಗ ಅಲ್ಲಿರುವ ಜನಗಳು ಮಾಡುವ ಅಸಹ್ಯವಾದ ಕೆಲಸಗಳನ್ನು ನೀವು ಅನುಸರಿಸಲೇಬಾರದು.
10ಮಕ್ಕಳನ್ನು ಬಲಿಕೊಡುವವರು, ಕಣಿಹೇಳುವವರು, ಶಕುನನೋಡುವವರು, ಯಂತ್ರ ಮಂತ್ರಗಳನ್ನು ಮಾಡುವವರು,
11ಮಾಟಗಾರರು, ತಂತ್ರಗಾರರು, ಸತ್ತವರಲ್ಲಿ ವಿಚಾರಿಸುವವರು, ಬೇತಾಳ, ಪ್ರೇತ, ಭೂತ ಎಂದು ಪೂಜಿಸುವವರು ಯಾರೂ ನಿಮ್ಮಲ್ಲಿ ಇರಬಾರದು.
12ಇಂಥ ಕೆಲಸಗಳನ್ನು ನಡಿಸುವವರನ್ನು ಯೆಹೋವನು ಸಹಿಸುವುದಿಲ್ಲ; ನಿಮ್ಮ ದೇವರಾದ ಯೆಹೋವನು ಇಂಥ ಹೇಯಕೃತ್ಯಗಳನ್ನು ಮಾಡುವ ಆ ಜನಾಂಗಗಳನ್ನು ನಿಮ್ಮಿಂದ ಹೊರ ಹೋಗುವಂತೆ ಮಾಡಿದ್ದಾನೆ.
13ನೀವು ನಿಮ್ಮ ದೇವರಾದ ಯೆಹೋವನ ಮುಂದೆ ನಿರ್ದೊಷಿಗಳಾಗಿರಬೇಕು.
14ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ಶಕುನಗಳನ್ನು ನೋಡುತ್ತಾರೆ ಮತ್ತು ಯಂತ್ರ ಮಂತ್ರಗಳನ್ನು ಮಾಡುತ್ತಾರೆ. ನೀವಾದರೋ ಹಾಗೆ ಮಾಡುವುದಕ್ಕೆ ನಿಮ್ಮ ದೇವರಾದ ಯೆಹೋವನಿಂದ ಅಪ್ಪಣೆಹೊಂದಲಿಲ್ಲ.
15ನಿಮ್ಮ ದೇವರಾದ ಯೆಹೋವನು ನಿಮ್ಮ ಸಹೋದರರಲ್ಲಿ ನನ್ನಂಥ ಪ್ರವಾದಿಯನ್ನು ನಿಮಗೆ ಏರ್ಪಡಿಸುವನು; ಅವನಿಗೆ ನೀವು ಕಿವಿಗೊಡಬೇಕು.
ಇಂಗ್ಲಿಷ್ನಲ್ಲಿ
Let no one be found among you who sacrifices his son or daughter in the fire, practices divination or conjury, interprets omens, practices sorcery, casts spells, consults a medium or spiritist, or inquires of the dead. For whoever does these things is detestable to the LORD. And because of these detestable things, the LORD your God is driving out the nations before you.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
“‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು