ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಧರ್ಮೋಪದೇಶಕಾಂಡ 31:6
ಬೈಬಲ್ ವಚನ · IRV
ಧರ್ಮೋಪದೇಶಕಾಂಡ 31:6
ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
ಇಡೀ ಅಧ್ಯಾಯ ಓದಿ: ಧರ್ಮೋಪದೇಶಕಾಂಡ 31
ಸಂದರ್ಭದಲ್ಲಿ
3ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಮುಂದೆ ಹೋಗುವನು; ಆತನು ಆ ಜನಾಂಗಗಳನ್ನು ನಿಮ್ಮ ಎದುರಿನಲ್ಲಿ ನಿಲ್ಲದಂತೆ ನಾಶಮಾಡುವುದರಿಂದ ನೀವು ಅವರ ದೇಶವನ್ನು ಸ್ವಾಧೀನಮಾಡಿಕೊಳ್ಳುವಿರಿ. ಯೆಹೋವನು ಆಜ್ಞಾಪಿಸಿದಂತೆ ಯೆಹೋಶುವನು ನಿಮ್ಮ ನಾಯಕನಾಗಿ ನದಿಯನ್ನು ದಾಟಿಹೋಗುವನು.
4ಯೆಹೋವನು ಅಮೋರಿಯರ ಅರಸನಾದ ಸೀಹೋನ್ ಮತ್ತು ಓಗರನ್ನು ನಾಶಮಾಡಿ, ಅವರ ದೇಶವನ್ನು ನಿಮಗೆ ಸ್ವಾಧೀನಪಡಿಸಿದಂತೆ ಆ ಜನಾಂಗಗಳನ್ನೂ ನಾಶಮಾಡಿ ಅವರ ದೇಶವನ್ನು ನಿಮಗೆ ವಶಪಡಿಸುವನು.
5ಯೆಹೋವನು ಅವರನ್ನು ನಿಮ್ಮಿಂದ ಪರಾಜಯಪಡಿಸಿದಾಗ ನೀವು ಅವರ ವಿಷಯದಲ್ಲಿ ನನ್ನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದುಕೊಳ್ಳಬೇಕು.
6ನೀವು ಶೂರರಾಗಿ ಧೈರ್ಯದಿಂದ ಇರಿ; ಅವರಿಗೆ ಅಂಜಬೇಡಿರಿ, ಕಳವಳಪಡಬೇಡಿರಿ. ನಿಮ್ಮ ದೇವರಾದ ಯೆಹೋವನೇ ನಿಮ್ಮ ಸಂಗಡ ಇರುತ್ತಾನಲ್ಲಾ; ಆತನು ನಿಮ್ಮನ್ನು ಕೈಬಿಡುವುದಿಲ್ಲ, ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ” ಎಂದು ಹೇಳಿದನು.
7ಆಗ ಮೋಶೆ ಯೆಹೋಶುವನನ್ನು ಕರೆದು ಇಸ್ರಾಯೇಲರ ಮುಂದೆ ಅವನಿಗೆ, “ಯೆಹೋವನು ಇವರ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶಕ್ಕೆ ನೀನೇ ಇವರೊಡನೆ ಹೋಗಿ ಅದನ್ನು ಅವರಿಗೆ ಸ್ವಾಧೀನಪಡಿಸಬೇಕು. ಆದುದರಿಂದ ಶೂರನಾಗಿ ಧೈರ್ಯದಿಂದಿರು;
8ಯೆಹೋವನು ತಾನೇ ನಿನ್ನ ಮುಂದೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವುದೇ ಇಲ್ಲ, ಕೈಬಿಡುವುದಿಲ್ಲ; ಅಂಜಬೇಡ, ಧೈರ್ಯದಿಂದಿರು” ಎಂದು ಹೇಳಿದನು.
9ಮೋಶೆ ಈ ಧರ್ಮಶಾಸ್ತ್ರವನ್ನು ಬರೆದು ಯೆಹೋವನ ಆಜ್ಞಾಶಾಸನಗಳ ಮಂಜೂಷವನ್ನು ಹೊರುವ ಲೇವಿಯರಾದ ಯಾಜಕರ ಮತ್ತು ಇಸ್ರಾಯೇಲರ ಹಿರಿಯರ ವಶಕ್ಕೆ ಕೊಟ್ಟನು.
ಇಂಗ್ಲಿಷ್‌ನಲ್ಲಿ
Be strong and courageous; do not be afraid or terrified of them, for it is the LORD your God who goes with you; He will never leave you nor forsake you.”ಹೊಸ ಒಡಂಬಡಿಕೆಯಲ್ಲಿ ಉಲ್ಲೇಖಿತ
ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನಾನು ನಿನಗೆ ಆಜ್ಞಾಪಿಸಿದಂತೆ ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಅಂಜಬೇಡ, ಕಳವಳಗೊಳ್ಳಬೇಡ. ನೀನು ಹೋಗುವಲ್ಲೆಲ್ಲಾ ನಿನ್ನ ದೇವರಾದ ಯೆಹೋವನು ನಿನ್ನ ಸಂಗಡ ಇರುವನು” ಎಂದು ಹೇಳಿದನು.ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.ಯೆಹೋವನನ್ನು ನಿರೀಕ್ಷಿಸಿಕೊಂಡಿರು, ದೃಢವಾಗಿರು; ನಿನ್ನ ಹೃದಯವು ಧೈರ್ಯದಿಂದಿರಲಿ; ಯೆಹೋವನನ್ನು ನಿರೀಕ್ಷಿಸಿಕೊಂಡೇ ಇರು.ಆ ಮೇಲೆ ದಾವೀದನು ತನ್ನ ಮಗನಾದ ಸೊಲೊಮೋನನಿಗೆ, “ಸ್ಥಿರಚಿತ್ತನಾಗಿರು, ಧೈರ್ಯದಿಂದಿರು, ಕೆಲಸಕ್ಕೆ ಕೈಹಾಕು, ಅಂಜಬೇಡ, ಕಳವಳಗೊಳ್ಳಬೇಡ, ನನ್ನ ದೇವರಾದ ಯೆಹೋವ ದೇವರು ನಿನ್ನ ಸಂಗಡ ಇರುತ್ತಾನೆ. ಆತನು ತನ್ನ ಆಲಯದ ಎಲ್ಲಾ ಕೆಲಸಗಳು ತೀರುವವರೆಗೂ ನಿನ್ನನ್ನು ಕೈಬಿಡುವುದಿಲ್ಲ ತೊರೆಯುವುದಿಲ್ಲ.ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ.ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.ನನ್ನ ಮಗನೇ, ನೀನು ಕ್ರಿಸ್ತ ಯೇಸುವಿನಲ್ಲಿರುವ ಕೃಪೆಯಿಂದ ಬಲಹೊಂದಿದವನಾಗು.ದಾವೀದನ ಕೀರ್ತನೆ. ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು