ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಪ್ರಸಂಗಿ 3:1–8
ಬೈಬಲ್ ವಚನ · IRV
ಪ್ರಸಂಗಿ 3:1–8
1ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.
2ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ,
3ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,
4ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,
5ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪಿಕೊಳ್ಳುವ ಸಮಯ ಅಪ್ಪಿಕೊಳ್ಳದಿರುವ ಸಮಯ,
6ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,
7ಹರಿಯುವ ಸಮಯ, ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತನಾಡುವ ಸಮಯ,
8ಪ್ರೀತಿಸುವ ಸಮಯ, ದ್ವೇಷಿಸುವ ಸಮಯ, ಯುದ್ಧದ ಸಮಯ, ಸಮಾಧಾನದ ಸಮಯ.
ಸಂದರ್ಭದಲ್ಲಿ
1ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು.
2ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ,
3ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ,
4ಅಳುವ ಸಮಯ, ನಗುವ ಸಮಯ, ಗೋಳಾಡುವ ಸಮಯ, ಕುಣಿದಾಡುವ ಸಮಯ,
5ಕಲ್ಲುಗಳನ್ನು ಚೆಲ್ಲುವ ಸಮಯ, ಕಲ್ಲುಗಳನ್ನು ಕೂಡಿಸುವ ಸಮಯ, ಅಪ್ಪಿಕೊಳ್ಳುವ ಸಮಯ ಅಪ್ಪಿಕೊಳ್ಳದಿರುವ ಸಮಯ,
6ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ,
7ಹರಿಯುವ ಸಮಯ, ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತನಾಡುವ ಸಮಯ,
8ಪ್ರೀತಿಸುವ ಸಮಯ, ದ್ವೇಷಿಸುವ ಸಮಯ, ಯುದ್ಧದ ಸಮಯ, ಸಮಾಧಾನದ ಸಮಯ.
9ದುಡಿಯುವವನಿಗೆ ಅವನ ಪ್ರಯಾಸದಿಂದ ಲಾಭವೇನು?
10ಮನುಷ್ಯನಿಗೆ ಕರ್ತವ್ಯವೆಂದು ದೇವರು ನೇಮಿಸಿರುವ ಪ್ರಯಾಸವನ್ನು ನೋಡಿದ್ದೇನೆ.
11ಒಂದೊಂದು ವಸ್ತುವನ್ನು ಸಮಯಕ್ಕೆ ತಕ್ಕ ಹಾಗೆ ಅಂದವಾಗಿ ನಿರ್ಮಿಸಿದ್ದಾನೆ. ಇದಲ್ಲದೆ ಮನುಷ್ಯರ ಹೃದಯದಲ್ಲಿ ಅನಂತಕಾಲದ ಯೋಚನೆಯನ್ನು ಇಟ್ಟಿದ್ದಾನೆ. ಆದರೂ ದೇವರು ನಡೆಸುತ್ತಿರುವ ಕೆಲಸವನ್ನು ಅವರು ಗ್ರಹಿಸಲಾರದಂತೆ ಮಾಡಿದ್ದಾನೆ.
ಇಂಗ್ಲಿಷ್ನಲ್ಲಿ
To everything there is a season, and a time for every purpose under heaven: a time to be born and a time to die, a time to plant and a time to uproot, a time to kill and a time to heal, a time to break down and a time to build, a time to weep and a time to laugh, a time to mourn and a time to dance, a time to cast away stones and a time to gather stones together, a time to embrace and a time to refrain from embracing, a time to search and a time to count as lost, a time to keep and a time to discard, a time to tear and a time to mend, a time to be silent and a time to speak, a time to love and a time to hate, a time for war and a time for peace.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಆಗ ನಾನು ಮನಸ್ಸಿನಲ್ಲಿ, “ದೇವರು ನೀತಿವಂತನಿಗೂ, ಅನೀತಿವಂತನಿಗೂ ನ್ಯಾಯತೀರಿಸುವನು. ಆತನ ನ್ಯಾಯಕ್ರಮಗಳಿಗೂ, ಎಲ್ಲಾ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟು” ಎಂದು ಅಂದುಕೊಂಡೆನು.ಬೆಳಗ್ಗೆ, ‘ಆಕಾಶವು ಮೋಡ ಕವಿದುಕೊಂಡು ಕೆಂಪಾಗಿದ್ದರೆ ಈಹೊತ್ತು ಗಾಳಿ ಮಳೆ ಬರುತ್ತದೆ’ ಅನ್ನುತ್ತೀರಿ. ಆಕಾಶದಲ್ಲಿ ಕಾಣುವ ಸೂಚನೆಗಳನ್ನು ತಿಳಿದುಕೊಳ್ಳಬಲ್ಲವರಾಗಿದ್ದೀರಿ, ಆದರೆ ಈ ಕಾಲದ ಸೂಚನೆಗಳನ್ನು ತಿಳಿದುಕೊಳ್ಳಲು ನಿಮಗೆ ಸಾಧ್ಯವಿಲ್ಲವೋ?ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ. ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲ ಮತ್ತು ಒಂದು ಕ್ರಮ ಇರುತ್ತದೆಯಲ್ಲವೇ, ಮನುಷ್ಯನು ಪಡುವ ಕಷ್ಟವು ಅವನಿಗೆ ಘೋರವಾಗಿದೆ.ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ.ಆಗ ಎಲೀಷನು ಗೇಹಜಿಗೆ, “ಒಬ್ಬನು ರಥದಿಂದ ಇಳಿದು ಬಂದು, ನಿನ್ನನ್ನು ಎದುರುಗೊಂಡದ್ದು ನನ್ನ ಜ್ಞಾನದೃಷ್ಟಿಗೆ ಕಾಣಲಿಲ್ಲವೆಂದು ತಿಳಿದಿರುವೆಯಾ? ದ್ರವ್ಯ, ಬಟ್ಟೆಗಳು, ಎಣ್ಣೇ ಮರದ ತೋಪುಗಳು, ದ್ರಾಕ್ಷಿತೋಟಗಳು, ಕುರಿದನಗಳು, ದಾಸದಾಸಿಯರು, ಜನರೂ ಇವುಗಳನ್ನು ಸಂಪಾದಿಸುವುದಕ್ಕೆ ಇದು ಸಮಯವೋ?ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!ಆದರೆ ಆ ಕಷ್ಟದಲ್ಲಿ ಮನಸ್ಸೆಯು ತನ್ನ ದೇವರಾದ ಯೆಹೋವನ ಪ್ರಸನ್ನತೆಯನ್ನು ಬೇಡಿಕೊಂಡನು. ಅವನು ತನ್ನ ಪೂರ್ವಿಕರ ದೇವರ ಮುಂದೆ ತನ್ನನ್ನು ಬಹಳವಾಗಿ ತಗ್ಗಿಸಿಕೊಂಡು ಆತನನ್ನು ಪ್ರಾರ್ಥಿಸಲುಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು