ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಪ್ರಸಂಗಿ 4:9–12
ಬೈಬಲ್ ವಚನ · IRV
ಪ್ರಸಂಗಿ 4:9–12
9ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.
10ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ.
11ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ?
12ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.
ಸಂದರ್ಭದಲ್ಲಿ
6ಗಾಳಿಯನ್ನು ಹಿಂದಟ್ಟುವ ಹಾಗೆಯೇ ಪ್ರಯಾಸದಿಂದ ತುಂಬಿದ ಎರಡು ಕೈಗಳಿಂದ ಮಾಡಿದ ಕೆಲಸಕ್ಕಿಂತ ನೆಮ್ಮದಿಯಾಗಿ ಒಂದು ಕೈಯಿಂದ ಮಾಡಿದ ಕೆಲಸವೇ ಲೇಸು.
7ಆಗ ನಾನು ಲೋಕದಲ್ಲಿ ಮತ್ತೊಂದು ವ್ಯರ್ಥ ವಿಷಯವನ್ನು ಕಂಡೆನು.
8ಒಬ್ಬಂಟಿಗನಾದ ಒಬ್ಬ ಮನುಷ್ಯನಿದ್ದಾನೆ. ಅವನಿಗೆ ಅಣ್ಣತಮ್ಮಂದಿರು ಇಲ್ಲ, ಮಕ್ಕಳೂ ಇಲ್ಲ. ಆದರೂ ಅವನ ಪ್ರಯಾಸಕ್ಕೆ ಅಂತ್ಯವಿಲ್ಲ, ಐಶ್ವರ್ಯದಿಂದ ಅವನ ಕಣ್ಣಿಗೆ ತೃಪ್ತಿಯಿಲ್ಲ. ಅವನು, “ನಾನು ಸುಖವನ್ನು ತೊರೆದು ಯಾರಿಗೋಸ್ಕರ ಪ್ರಯಾಸಪಡುತ್ತಾ ಇದ್ದೇನೆ?” ಅಂದುಕೊಳ್ಳುವನು. ಇದೂ ಸಹ ವ್ಯರ್ಥವೇ. ಕೇವಲ ಪ್ರಯಾಸದ ಕೆಲಸವೇ ಸರಿ.
9ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು.
10ಒಬ್ಬನು ಬಿದ್ದರೆ, ಇನ್ನೊಬ್ಬನು ತನ್ನ ಸ್ನೇಹಿತನನ್ನು ಮೇಲಕ್ಕೆ ಎಬ್ಬಿಸುವನು. ಒಬ್ಬನು ಒಬ್ಬಂಟ್ಟಿಗನಾಗಿ ಬಿದ್ದರೆ, ಅವನನ್ನು ಮೇಲಕ್ಕೆ ಎಬ್ಬಿಸುವವನು ಯಾರೂ ಇಲ್ಲ, ಅವನ ಗತಿ ದುರ್ಗತಿಯೇ.
11ಮತ್ತು ಇಬ್ಬರು ಜೊತೆಯಲ್ಲಿ ಮಲಗಿಕೊಂಡರೆ ಅವರಿಗೆ ಬೆಚ್ಚಗಾಗುತ್ತದೆ, ಆದರೆ ಒಬ್ಬನು ಹೇಗೆ ಬೆಚ್ಚಗಿರುತ್ತಾನೆ?
12ಒಬ್ಬನನ್ನು ಮತ್ತೊಬ್ಬನು ಜಯಿಸಬಹುದು, ಆದರೆ ಗೆದ್ದವನನ್ನು ಇಬ್ಬರು ಎದುರಿಸಿ ನಿಲ್ಲಿಸಬಹುದು. ಮೂರು ಹುರಿಯ ಹಗ್ಗ ಬೇಗನೆ ಕಿತ್ತುಹೋಗುವುದಿಲ್ಲ.
13ಎಚ್ಚರಿಕೆಯ ಮಾತಿಗೆ ಕಿವಿಗೊಡದ ಮುದಕನೂ, ಮೂಢನೂ ಆದ ಅರಸನಿಗಿಂತ ಜ್ಞಾನಿಯಾದ ಬಡ ಯುವಕನೇ ಮೇಲು.
14ಇಂಥ ಯುವಕನೊಬ್ಬನು ರಾಜನಾಗಲು ಸೆರೆಮನೆಯಿಂದ ಬಂದಿರಬಹುದು ಅಥವಾ ತನ್ನ ರಾಜ್ಯದಲ್ಲಿ ಬಡ ಪ್ರಜೆಯಾಗಿ ಹುಟ್ಟಿರಬಹುದು.
15ಸೂರ್ಯನ ಕೆಳಗೆ ಜೀವಿಸಿ ಮತ್ತು ನಡೆದಾಡಿದವರೆಲ್ಲರೂ ಅರಸನ ಉತ್ತರಾಧಿಕಾರಿಯಾದ ಯುವಕನ ಪಕ್ಷವಹಿಸುವುದನ್ನು ನಾನು ನೋಡಿದೆನು.
ಇಂಗ್ಲಿಷ್ನಲ್ಲಿ
Two are better than one, because they have a good return for their labor. For if one falls down, his companion can lift him up; but pity the one who falls without another to help him up! Again, if two lie down together, they will keep warm; but how can one keep warm alone? And though one may be overpowered, two can resist. Moreover, a cord of three strands is not quickly broken.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಕಬ್ಬಿಣವು ಕಬ್ಬಿಣವನ್ನು ಹೇಗೆ ಹರಿತಮಾಡುವುದೋ, ಮಿತ್ರನು ಮಿತ್ರನ ಬುದ್ಧಿಯನ್ನು ಹಾಗೆಯೇ ಹರಿತಮಾಡುವನು.ಅನಂತರ ಯೆಹೋವನಾದ ದೇವರು, “ಮನುಷ್ಯನು ಒಂಟಿಯಾಗಿರುವುದು ಒಳ್ಳೆಯದಲ್ಲ. ಅವನಿಗೆ ಸರಿಯಾದ ಸಹಕಾರಿಯನ್ನು ಉಂಟುಮಾಡುವೆನು” ಅಂದನು.ಆದರೆ ದೇವರು ಆ ಅಂಗಗಳಲ್ಲಿ ಪ್ರತಿಯೊಂದನ್ನು ತನಗೆ ಸರಿಯಾಗಿ ತೋಚಿದ ಪ್ರಕಾರ ದೇಹದೊಳಗೆ ಇಟ್ಟಿದ್ದಾನೆ. ಅವೆಲ್ಲವೂ ಒಂದೇ ಅಂಗವಾಗಿದ್ದರೆ ದೇಹವೆಲ್ಲಿರುವುದು? ಆದರೆ ಅಂಗಗಳು ಅನೇಕವಾಗಿದೆ ಆದರೆ ದೇಹವು ಒಂದೇ. ಕಣ್ಣು ಕೈಗೆ, “ನೀನು ನನಗೆ ಅವಶ್ಯವಿಲ್ಲವೆಂದೂ,” ತಲೆಯು “ಪಾದಗಳಿಗೆ ನೀವು ನನಗೆ ಅವಶ್ಯವಿಲ್ಲವೆಂದೂ” ಹೇಳುವುದಕ್ಕಾಗುವುದಿಲ್ಲ.ತಾನು ಆಯ್ಕೆಮಾಡಿಕೊಂಡ ಹನ್ನೆರಡು ಮಂದಿ ಶಿಷ್ಯರನ್ನು ಹತ್ತಿರಕ್ಕೆ ಕರೆದು ಅವರನ್ನು ಇಬ್ಬಿಬ್ಬರನ್ನಾಗಿ ಕಳುಹಿಸಿದನು. ಕಳುಹಿಸುವಾಗ ಆತನು ಅವರಿಗೆ ದೆವ್ವಗಳ ಮೇಲೆ ಅಧಿಕಾರ ಕೊಟ್ಟು,ಇಷ್ಟು ಜನರ ಹೊಣೆಯನ್ನು ನಾನೊಬ್ಬನೇ ಹೊರುವುದು ಅಸಾಧ್ಯ; ಅದು ನನ್ನ ಶಕ್ತಿಗೆ ಮೀರಿದ ಕೆಲಸ.ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.ಕೊಯ್ಯುವವನಿಗೆ ಈಗಲೇ ಕೂಲಿ ದೊರೆಯುತ್ತದೆ. ಅವನು ನಿತ್ಯಜೀವಕ್ಕೆ ಫಲವನ್ನು ಕೂಡಿಸಿಡುತ್ತಾನೆ. ಹೀಗೆ ಬಿತ್ತುವವನಿಗೂ ಮತ್ತು ಕೊಯ್ಯುವವನಿಗೂ ಒಟ್ಟಿಗೆ ಸಂತೋಷವಾಗುವುದು.ನೀನು ಮಾಡಿದ್ದ ಎಲ್ಲಾ ಒಳ್ಳೆಯಕಾರ್ಯದ ಪ್ರತಿಫಲವಾಗಿ ಯೆಹೋವನು ನಿನಗೆ ಒಳ್ಳೆಯ ಫಲವನ್ನು ಕೊಡಲಿ; ನೀನು ಯಾವ ದೇವರ ಕೃಪಾಶಿರ್ವಾದದ ಆಶ್ರಯ ಹೊಂದಲು ಬಂದಿರುವೆಯೋ ಆ ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಉತ್ತಮವಾದ ಆಶ್ರಯವನ್ನು ಪ್ರತಿಫಲವನ್ನು ಅನುಗ್ರಹಿಸಲಿ” ಎಂದು ಉತ್ತರ ಕೊಟ್ಟನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು