ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಎಫೆಸದವರಿಗೆ 2:10
ಬೈಬಲ್ ವಚನ · IRV
ಎಫೆಸದವರಿಗೆ 2:10
ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
ಸಂದರ್ಭದಲ್ಲಿ
7ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.
8ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
9ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
10ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
11ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.
12ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
13ಈಗಲಾದರೋ, ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವಿನಲ್ಲಿ ಆತನ ರಕ್ತದ ಮೂಲಕ ಸಮೀಪಸ್ಥರಾಗಿದ್ದೀರಿ.
ಇಂಗ್ಲಿಷ್‌ನಲ್ಲಿ
For we are God’s workmanship, created in Christ Jesus to do good works, which God prepared in advance as our way of life.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.ದೇವರು ಸಕಲ ವಿಧವಾದ ದಾನಗಳನ್ನು ನಿಮಗೆ ಧಾರಾಳವಾಗಿ ಅನುಗ್ರಹಿಸುವುದಕ್ಕೆ ಶಕ್ತನಾದ್ದರಿಂದ, ನೀವೂ ಯಾವಾಗಲೂ ಎಲ್ಲಾ ವಿಷಯಗಳಲ್ಲಿ ಪರಿಪೂರ್ಣತೆಯುಳ್ಳವರಾಗಿ ಸಕಲ ಸತ್ಕಾರ್ಯಗಳನ್ನು ಹೇರಳವಾಗಿ ಮಾಡುವವರಾಗಿರಬೇಕು.ಈ ಒಳ್ಳೆಯ ಕೆಲಸವನ್ನು ನಿಮ್ಮಲ್ಲಿ ಪ್ರಾರಂಭಿಸಿದಾತನು ಅದನ್ನು ನಡಿಸಿಕೊಂಡು ಯೇಸು ಕ್ರಿಸ್ತನು ಬರುವ ದಿನದೊಳಗಾಗಿ ಪೂರ್ಣತೆಗೆ ತರುವನೆಂದು ನನಗೆ ಭರವಸವುಂಟು.ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.ಆದ್ದರಿಂದ ದೇವರ ಮನುಷ್ಯನು ಎಲ್ಲವನ್ನೂ ಬಲ್ಲವನಾಗಿದ್ದು ಸಕಲಸತ್ಕಾರ್ಯಗಳಿಗೆ ಸನ್ನದ್ಧನಾಗುವನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು