ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಎಫೆಸದವರಿಗೆ 2:8–9
ಬೈಬಲ್ ವಚನ · IRV
ಎಫೆಸದವರಿಗೆ 2:8–9
8ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
9ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
ಸಂದರ್ಭದಲ್ಲಿ
5ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ.
6ಆತನು ಕ್ರಿಸ್ತ ಯೇಸುವಿನಲ್ಲಿ ನಮ್ಮೊಂದಿಗಿರುವ ದಯೆಯ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು
7ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.
8ನಂಬಿಕೆಯ ಮೂಲಕ ಕೃಪೆಯಿಂದಲೇ ನೀವು ರಕ್ಷಣೆ ಹೊಂದಿದವರಾಗಿದ್ದೀರಿ. ಈ ರಕ್ಷಣೆಯು ನಿಮ್ಮಿಂದುಂಟಾದದ್ದಲ್ಲ, ಅದು ದೇವರ ದಾನವೇ.
9ಈ ರಕ್ಷಣೆಯೂ ಪುಣ್ಯಕ್ರಿಯೆಗಳಿಂದ ಉಂಟಾದದ್ದಲ್ಲ, ಆದ್ದರಿಂದ ಹೊಗಳಿಕೊಳ್ಳುವುದಕ್ಕೆ ಯಾರಿಗೂ ಆಸ್ಪದವಿಲ್ಲ.
10ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.
11ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.
12ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.
ಇಂಗ್ಲಿಷ್ನಲ್ಲಿ
For it is by grace you have been saved through faith, and this not from yourselves; it is the gift of God, not by works, so that no one can boast.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ. ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ. ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು. ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು. ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.ಆದಕಾರಣ ಆ ಬಾಧ್ಯತೆಯು ಕೃಪೆಯಿಂದಲೇ ದೊರೆಯುವಂಥದ್ದಾಗಿದೆ, ಅದು ನಂಬಿಕೆಯ ಮೂಲಕವೇ ಸಿಕ್ಕುತ್ತದೆ, ಹೀಗೆ ಆ ವಾಗ್ದಾನವು ನಮ್ಮೆಲ್ಲರ ತಂದೆಯಾದಅಬ್ರಹಾಮನ ಸಂತತಿಯವರೆಲ್ಲರಿಗೂ, ಅಂದರೆ ಧರ್ಮಶಾಸ್ತ್ರವನ್ನು ಆಧಾರ ಮಾಡಿಕೊಂಡವರಿಗೆ ಮಾತ್ರವಲ್ಲದೆ, ಅಬ್ರಹಾಮನಂಥ ನಂಬಿಕೆ ಇರುವವರೆಲ್ಲರಿಗೂ ಸಹ ಸ್ಥಿರವಾಗಿದೆ.ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು.ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ. ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ. ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ. ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು