ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಎಫೆಸದವರಿಗೆ 4:26–27
ಬೈಬಲ್ ವಚನ · IRV
ಎಫೆಸದವರಿಗೆ 4:26–27
26“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.
27ಸೈತಾನನಿಗೆ ಅವಕಾಶಕೊಡಬೇಡಿರಿ.
ಸಂದರ್ಭದಲ್ಲಿ
23ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.
24ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.
25ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು “ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ನುಡಿಯಲಿ.” ಏಕೆಂದರೆ ನಾವು ಪ್ರತಿಯೊಬ್ಬರೂ ಒಂದೇ ದೇಹದ ಅಂಗಗಳಾಗಿದ್ದೇವಲ್ಲಾ.
26“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.
27ಸೈತಾನನಿಗೆ ಅವಕಾಶಕೊಡಬೇಡಿರಿ.
28ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.
29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.
30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
ಇಂಗ್ಲಿಷ್ನಲ್ಲಿ
“Be angry, yet do not sin.” Do not let the sun set upon your anger, and do not give the devil a foothold.ಹಳೆಯ ಒಡಂಬಡಿಕೆಯಿಂದ ಉಲ್ಲೇಖ
ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.ಕೋಪವನ್ನು ಅಡಗಿಸಿಕೋ; ರೋಷವನ್ನು ಬಿಡು. ತಳಮಳಗೊಳ್ಳಬೇಡ; ಕೆಡುಕಿಗೆ ಕಾರಣವಾದೀತು.ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ. ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.ಹೀಗಿರಲಾಗಿ ದೇವರಿಗೆ ಅಧೀನರಾಗಿದ್ದು ಸೈತಾನನನ್ನು ಎದುರಿಸಿರಿ, ಆಗ ಅವನು ನಿಮ್ಮನ್ನು ಬಿಟ್ಟು ಓಡಿ ಹೋಗುವನು.ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು.ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು