Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಎಫೆಸದವರಿಗೆ 4:29

ಬೈಬಲ್ ವಚನ · IRV

ಎಫೆಸದವರಿಗೆ 4:29

ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.

ಇಡೀ ಅಧ್ಯಾಯ ಓದಿ: ಎಫೆಸದವರಿಗೆ 4

ಸಂದರ್ಭದಲ್ಲಿ

26“ಕೋಪಗೊಳ್ಳಬೇಕಾಗಿ ಬಂದರೂ ಪಾಪಮಾಡಬೇಡಿರಿ,” ಸೂರ್ಯನು ಮುಳುಗುವುದಕ್ಕಿಂತ ಮೊದಲೇ ನಿಮ್ಮ ಸಿಟ್ಟು ತೀರಿಹೋಗಲಿ.

27ಸೈತಾನನಿಗೆ ಅವಕಾಶಕೊಡಬೇಡಿರಿ.

28ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.

29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.

30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.

31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.

32ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.

ಎಫೆಸದವರಿಗೆ 4

ಇಂಗ್ಲಿಷ್‌ನಲ್ಲಿ

Berean Standard BibleEphesians 4:29Let no unwholesome talk come out of your mouths, but only what is helpful for building up the one in need and bringing grace to those who listen.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೊಲೊ 4:6ನಿಮ್ಮ ಸಂಭಾಷಣೆಯು ಯಾವಾಗಲೂ ಕೃಪೆಯುಳ್ಳದ್ದಾಗಿಯೂ, ಉಪ್ಪಿನಂತೆ ರುಚಿಕರವಾಗಿಯೂ ಇರಲಿ. ಹೀಗೆ ನೀವು ಪ್ರತಿಯೊಬ್ಬರಿಗೂ ಯಾವಾವ ರೀತಿಯಲ್ಲಿ ಉತ್ತರಹೇಳಬೇಕು ಎಂಬುದನ್ನು ತಿಳಿದುಕೊಳ್ಳುವಿರಿ.
1 ಥೆಸ 5:11ಆದ್ದರಿಂದ ನೀವು ಈಗ ಮಾಡುತ್ತಿರುವ ಪ್ರಕಾರವೇ ಒಬ್ಬರನ್ನೊಬ್ಬರು ಪ್ರೋತ್ಸಾಹಿಸುತ್ತಾ ಒಬ್ಬರ ಭಕ್ತಿಯನ್ನೊಬ್ಬರು ವೃದ್ಧಿಪಡಿಸುತ್ತಾ ಇರಿ.
ಪ್ರಸ 10:12ಜ್ಞಾನಿಯ ಮಾತು ಹಿತ. ಅಜ್ಞಾನಿಯ ಬಾಯಿ ತನ್ನನ್ನೇ ನುಂಗಿಬಿಡುವುದು.
ಜ್ಞಾನೋ 15:7ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.
ಕೊಲೊ 3:8–9ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ. ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ, ಯಾಕೆಂದರೆ ನೀವು ಹಿಂದಿನಸ್ವಭಾವವನ್ನು ಅದರ ಕೃತ್ಯಗಳೊಂದಿಗೆ ತೆಗೆದುಹಾಕಿ ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.
ಮತ್ತಾ 12:34–37ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು. ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ. ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು. ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.
ಜ್ಞಾನೋ 25:11–12ಸಮಯೋಚಿತವಾದ ಮಾತುಗಳು ಬೆಳ್ಳಿಯ ಕಟ್ಟಿನಲ್ಲಿ ಖಚಿತವಾದ ಬಂಗಾರದ ಹಣ್ಣುಗಳಿಗೆ ಸಮಾನ. ಕೇಳುವ ಕಿವಿಗೆ ಮುಟ್ಟುವ ಬುದ್ಧಿವಾದವು ಹೊನ್ನಿನ ಮುರುವಿಗೂ, ಅಪರಂಜಿಯ ಆಭರಣಕ್ಕೂ ಸಮಾನ.
ಕೀರ್ತ 37:30–31ನೀತಿವಂತನ ಬಾಯಿಯು ಸುಜ್ಞಾನವನ್ನು ನುಡಿಯುತ್ತದೆ, ಅವನ ನಾಲಿಗೆ ನ್ಯಾಯವನ್ನೇ ಹೇಳುತ್ತದೆ. ದೇವರ ಧರ್ಮೋಪದೇಶವು ಅವನ ಹೃದಯದಲ್ಲಿರುವುದು; ಅವನು ಜಾರುವುದೇ ಇಲ್ಲ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು