ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಎಫೆಸದವರಿಗೆ 4:32
ಬೈಬಲ್ ವಚನ · IRV
ಎಫೆಸದವರಿಗೆ 4:32
ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಸಂದರ್ಭದಲ್ಲಿ
29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.
30ದೇವರ ಪವಿತ್ರಾತ್ಮನನ್ನು ದುಃಖಪಡಿಸಬೇಡಿರಿ. ಆತನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.
31ಎಲ್ಲಾ ದ್ವೇಷ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಸಕಲ ವಿಧವಾದ ದುಷ್ಟತನಗಳನ್ನೂ ನಿಮ್ಮಿಂದ ದೂರ ಮಾಡಿರಿ.
32ಒಬ್ಬರಿಗೊಬ್ಬರು ದಯೆಯುಳ್ಳವರಾಗಿಯೂ, ಕರುಣೆಯುಳ್ಳವರಾಗಿಯೂ ಇರಿ. ದೇವರು ನಿಮ್ಮನ್ನು ಕ್ರಿಸ್ತನಲ್ಲಿ ಕ್ಷಮಿಸಿದಂತೆ ನೀವು ಒಬ್ಬರನ್ನೊಬ್ಬರು ಕ್ಷಮಿಸಿರಿ.
ಇಂಗ್ಲಿಷ್ನಲ್ಲಿ
Be kind and tenderhearted to one another, forgiving each other just as in Christ God forgave you.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ.ನೀವು ಜನರ ತಪ್ಪುಗಳನ್ನು ಕ್ಷಮಿಸಿದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ನಿಮ್ಮ ತಪ್ಪುಗಳನ್ನೂ ಕ್ಷಮಿಸುವನು. ಆದರೆ ನೀವು ಜನರ ತಪ್ಪುಗಳನ್ನು ಕ್ಷಮಿಸದೇ ಹೋದರೆ ನಿಮ್ಮ ತಂದೆ ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವುದಿಲ್ಲ.ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.ಕಡೆಗೆ ನೀವೆಲ್ಲರೂ ಏಕಮನಸ್ಸುಳ್ಳವರಾಗಿರಿ, ಪರಸ್ಪರ ಅನುಕಂಪವುಳ್ಳವರಾಗಿರಿ, ಅಣ್ಣತಮ್ಮಂದಿರಂತೆ ಒಬ್ಬರನ್ನೊಬ್ಬರು ಪ್ರೀತಿಸಿರಿ, ಕರುಣೆಯೂ, ದೀನಭಾವವೂ ಉಳ್ಳವರಾಗಿರಿ. ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.ನೀವು ಯಾರನ್ನು ಕ್ಷಮಿಸುತ್ತೀರೋ ನಾನು ಸಹ ಅವನನ್ನು ಕ್ಷಮಿಸುತ್ತೇನೆ. ನಿಮಗೋಸ್ಕರವೇ ಅವನನ್ನು ಕ್ರಿಸ್ತನ ಸನ್ನಿಧಾನದಲ್ಲಿ ಕ್ಷಮಿಸಿದ್ದೇನೆ.ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.ನೀವಾದರೋ ನಿಮ್ಮ ವೈರಿಗಳನ್ನು ಪ್ರೀತಿಸಿ ಅವರಿಗೆ ಉಪಕಾರಮಾಡಿರಿ. ಏನನ್ನೂ ನಿರೀಕ್ಷಿಸದೆ ಸಾಲಕೊಡಿರಿ. ಹೀಗೇ ಮಾಡಿದರೆ, ನಿಮಗೆ ಬಹಳ ಫಲಸಿಕ್ಕುವುದು ಮತ್ತು ನೀವು ಪರಾತ್ಪರನಾದ ದೇವರ ಮಕ್ಕಳಾಗುವಿರಿ. ದೇವರು ಉಪಕಾರನೆನಸದವರಿಗೂ ಕೆಟ್ಟವರಿಗೂ ಉಪಕಾರಿಯಾಗಿದ್ದಾನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು