Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಎಫೆಸದವರಿಗೆ 5:11

ಬೈಬಲ್ ವಚನ · IRV

ಎಫೆಸದವರಿಗೆ 5:11

ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.

ಇಡೀ ಅಧ್ಯಾಯ ಓದಿ: ಎಫೆಸದವರಿಗೆ 5

ಸಂದರ್ಭದಲ್ಲಿ

8ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.

9ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.

10ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.

11ನಿಷ್ಪ್ರಯೋಜಕವಾದ ಕತ್ತಲೆಯ ಕೃತ್ಯಗಳಲ್ಲಿ ಪಾಲುಗಾರರಾಗಿರದೆ ಅವುಗಳನ್ನು ಬಯಲಿಗೆಳೆದು ಖಂಡಿಸಿರಿ.

12ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.

13ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.

14ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.

ಎಫೆಸದವರಿಗೆ 5

ಇಂಗ್ಲಿಷ್‌ನಲ್ಲಿ

Berean Standard BibleEphesians 5:11Have no fellowship with the fruitless deeds of darkness, but rather expose them.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ರೋಮಾ 13:12ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.
1 ತಿಮೊ 5:20ಪಾಪದಲ್ಲಿ ನಡೆಯುವವರನ್ನು ಎಲ್ಲರ ಮುಂದೆಯೇ ಗದರಿಸು. ಇವರಿಂದ ಉಳಿದವರಿಗೂ ಭಯವುಂಟಾಗುವುದು.
2 ಥೆಸ 3:6ಸಹೋದರರೇ, ನಾವು ಬೋಧಿಸಿದ ಸಂಪ್ರದಾಯವನ್ನು ಅನುಸರಿಸದೆ ಸೋಮಾರಿಯಾಗಿ ಜೀವಿಸುವ ಪ್ರತಿಯೊಬ್ಬ ಸಹೋದರನಿಂದ ನೀವು ದೂರವಾಗಿರಬೇಕೆಂದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಿಮಗೆ ಆಜ್ಞಾಪಿಸುತ್ತೇವೆ.
2 ಯೋಹಾ 1:10–11ಈ ಉಪದೇಶವನ್ನು ಮೀರಿದ ಯಾವನಾದರೂ ನಿಮ್ಮ ಬಳಿಗೆ ಬಂದರೆ ಅವನನ್ನು ಮನೆಯೊಳಗೆ ಸೇರಿಸಿಕೊಳ್ಳಬೇಡಿರಿ. ಅವನಿಗೆ ಶುಭವಾಗಲಿ ಎಂದು ಹೇಳಬೇಡಿರಿ. ಏಕೆಂದರೆ, ಅವನಿಗೆ ಶುಭವಾಗಲಿ ಎಂದು ಹರಸುವವನು ಅವನ ದುಷ್ಕೃತ್ಯಗಳಲ್ಲಿ ಪಾಲುಗಾರನಾಗುತ್ತಾನೆ.
ರೋಮಾ 16:17ಪ್ರಿಯರೇ, ನೀವು ಹೊಂದಿದ ಉಪದೇಶಕ್ಕೆ ವಿರುದ್ಧವಾಗಿ ಭೇದಗಳನ್ನೂ, ವಿಘ್ನಗಳನ್ನೂ ನಿಮ್ಮಲ್ಲಿ ಉಂಟುಮಾಡುವವರನ್ನು ಗುರುತಿಸಿ ಅವರನ್ನು ಬಿಟ್ಟು ದೂರ ಹೋಗಿರಿ ಎಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ.
2 ಥೆಸ 3:14ಈ ಪತ್ರಿಕೆಯ ಮೂಲಕವಾಗಿ ಹೇಳಿರುವ ನಮ್ಮ ಮಾತಿಗೆ ಯಾವನಾದರೂ ಒಳಗಾಗದಿದ್ದರೆ ಅವನನ್ನು ಗುರುತಿಸಿ ಅವನಿಗೆ ನಾಚಿಕೆಯಾಗುವಂತೆ ಅವನ ಸಹವಾಸದಲ್ಲಿ ಸೇರಬೇಡಿರಿ.
ಕೀರ್ತ 1:1–2ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ, ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.
ಪ್ರಕ 18:4ಪರಲೋಕದಿಂದ ಹೇಳುವ ಮತ್ತೊಂದು ಧ್ವನಿಯನ್ನು ಕೇಳಿದೆನು, “ನನ್ನ ಜನರೇ, ಅವಳನ್ನು ಬಿಟ್ಟು ಬನ್ನಿರಿ, ಏಕೆಂದರೆ ಅವಳ ಪಾಪಗಳಲ್ಲಿ ನೀವೂ ಪಾಲುಗಾರರಾಗಬಾರದು. ಅವಳಿಗೆ ಆಗುವ ಉಪದ್ರವಗಳು ನಿಮ್ಮನ್ನು ಬಾಧಿಸಬಾರದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು