Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಎಫೆಸದವರಿಗೆ 5:15–17

ಬೈಬಲ್ ವಚನ · IRV

ಎಫೆಸದವರಿಗೆ 5:15–17

15ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.

16ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.

17ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.

ಇಡೀ ಅಧ್ಯಾಯ ಓದಿ: ಎಫೆಸದವರಿಗೆ 5

ಸಂದರ್ಭದಲ್ಲಿ

12ಆ ಜನರು ರಹಸ್ಯವಾಗಿ ನಡಿಸುವ ಕೆಲಸಗಳನ್ನು ಕುರಿತು ಹೇಳುವುದಕ್ಕೂ ಅವಮಾನಕರವಾಗಿದೆ.

13ಬೆಳಕಿನಿಂದ ಎಲ್ಲಾ ಕೃತ್ಯಗಳ ನಿಜಗುಣ ಬಹಿರಂಗವಾಗುತ್ತದೆ. ಯಾಕೆಂದರೆ ಎಲ್ಲಾವನ್ನೂ ಬಹಿರಂಗಪಡಿಸುವಂಥದ್ದು ಬೆಳಕೇ.

14ಆದ್ದರಿಂದ, “ನಿದ್ರೆ ಮಾಡುವವನೇ, ಎಚ್ಚರವಾಗು! ಸತ್ತವರನ್ನು ಬಿಟ್ಟು ಏಳು! ಆಗ ಕ್ರಿಸ್ತನು ನಿನ್ನಲ್ಲಿ ಪ್ರಕಾಶಿಸುವನು” ಎಂದು ಹೇಳಿಯದೆಯಲ್ಲಾ.

15ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.

16ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.

17ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.

18ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,

19ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.

20ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.

ಎಫೆಸದವರಿಗೆ 5

ಇಂಗ್ಲಿಷ್‌ನಲ್ಲಿ

Berean Standard BibleEphesians 5:15–17Pay careful attention, then, to how you walk, not as unwise but as wise, redeeming the time, because the days are evil. Therefore do not be foolish, but understand what the Lord’s will is.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೊಲೊ 4:5ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.
ರೋಮಾ 12:2ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.
ಯಾಕೋ 3:13ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
ಆಮೋ 5:13ಇಂಥ ಕಾಲದಲ್ಲಿ ವಿವೇಕಿಯು ಸುಮ್ಮನಿರುವನು, ಇದು ದುಷ್ಟ ಕಾಲವೇ ಸರಿ.
ಯೋಹಾ 12:35ಆಗ ಯೇಸು ಅವರಿಗೆ, “ಇನ್ನು ಸ್ವಲ್ಪ ಕಾಲವೇ ಬೆಳಕು ನಿಮ್ಮಲ್ಲಿ ಇರುತ್ತದೆ. ಕತ್ತಲೆಯು ನಿಮ್ಮನ್ನು ಮುಸುಕಿಕೊಳ್ಳದಂತೆ ಬೆಳಕು ಇರುವಾಗಲೇ ನಡೆಯಿರಿ. ಕತ್ತಲಿನಲ್ಲಿ ಒಬ್ಬನು ತಾನು ಎಲ್ಲಿಗೆ ಹೋಗುತ್ತಾನೆಂದು ತಿಳಿಯನು.
ಫಿಲಿಪ್ಪಿ 1:27ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.
1 ಕೊರಿ 14:20ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.
1 ಥೆಸ 5:18ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು