ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಎಫೆಸದವರಿಗೆ 5:18
ಬೈಬಲ್ ವಚನ · IRV
ಎಫೆಸದವರಿಗೆ 5:18
ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
ಸಂದರ್ಭದಲ್ಲಿ
15ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.
16ಈ ದಿನಗಳು ಕೆಡುಕಿನಿಂದ ಕೂಡಿದವುಗಳಾಗಿರುವುದ್ದರಿಂದ ಕಾಲವನ್ನು ಸದುಪಯೋಗಪಡಿಸಿಕೊಳ್ಳಿರಿ.
17ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬುದನ್ನು ತಿಳಿದುಕೊಳ್ಳಿರಿ.
18ಮದ್ಯಪಾನ ಮಾಡಿ ಮತ್ತರಾಗಬೇಡಿರಿ. ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು,
19ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ, ಆತ್ಮೀಕ ಹಾಡುಗಳಿಂದಲೂ ಒಬ್ಬರಿಗೊಬ್ಬರು ಮಾತನಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನನ್ನು ಹಾಡಿ ಕೊಂಡಾಡಿರಿ.
20ಯಾವಾಗಲೂ ಎಲ್ಲಾ ಕಾರ್ಯಗಳಿಗಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರವನ್ನು ಮಾಡಿರಿ.
21ಕ್ರಿಸ್ತನಿಗೆ ಭಯಪಡುವವರಾಗಿದ್ದು, ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ.
ಇಂಗ್ಲಿಷ್ನಲ್ಲಿ
Do not get drunk on wine, which leads to reckless indiscretion. Instead, be filled with the Spirit.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.ದ್ರಾಕ್ಷಾರಸವು ಪರಿಹಾಸ್ಯ, ಮದ್ಯವು ಕೂಗಾಟ, ಇವುಗಳಿಂದ ದಾರಿತಪ್ಪಿ ಹೋಗುವವನು ಜ್ಞಾನಿಯಲ್ಲ.ದುಂದೌತಣ ಕುಡಿಕತನಗಳಲ್ಲಾಗಲಿ, ಕಾಮವಿಲಾಸ, ನಿರ್ಲಜ್ಜಾಕೃತ್ಯಗಳಲ್ಲಿಯಾಗಲಿ ಜಗಳ ಹೊಟ್ಟೆಕಿಚ್ಚುಗಳಲ್ಲಿಯಾಗಲಿ ಕಾಲ ಕಳೆಯದೆ ಹಗಲಿನಲ್ಲಿರ ತಕ್ಕ ಹಾಗೆ ಮಾನಸ್ಥರಾಗಿ ನಡೆದುಕೊಳ್ಳೋಣ.ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ. ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ, ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ. ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ. ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.ಆದಕಾರಣ ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ನೋಡಿದಾಗ ಸಂತೋಷಪಟ್ಟು, ನೀವು ಪೂರ್ಣಮನಸ್ಸಿನಿಂದ ಕರ್ತನಲ್ಲಿ ನೆಲೆಗೊಂಡಿರಿ ಎಂದು ಅವರಿಗೆ ಬುದ್ಧಿಹೇಳಿದನು. ಆಗ ಬಹುಮಂದಿ ಕರ್ತನೊಂದಿಗೆ ಸೇರಿಕೊಂಡರು.ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ;ಆದರೆ ಕ್ರೈಸ್ತ ಸಹೋದರನೆನಿಸಿಕೊಂಡವನು ಜಾರನು, ಲೋಭಿಯು, ವಿಗ್ರಹಾರಾಧಕನು, ಜಗಳಗಂಟನೂ, ಕುಡುಕನು, ಸುಲುಕೊಳ್ಳುವವನೂ ಆಗಿದ್ದ ಪಕ್ಷದಲ್ಲಿ ಅವನ ಸಹವಾಸ ಮಾಡಬಾರದು. ಅಂಥವನ ಸಂಗಡ ಊಟ ಸಹ ಮಾಡಬಾರದು ಎಂದು ಬರೆದಿದ್ದೇನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು