Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಎಫೆಸದವರಿಗೆ 5:25

ಬೈಬಲ್ ವಚನ · IRV

ಎಫೆಸದವರಿಗೆ 5:25

ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.

ಇಡೀ ಅಧ್ಯಾಯ ಓದಿ: ಎಫೆಸದವರಿಗೆ 5

ಸಂದರ್ಭದಲ್ಲಿ

22ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.

23ಕ್ರಿಸ್ತನು ಸಭೆಗೆ ತಲೆಯಾಗಿರುವ ಪ್ರಕಾರವೇ ಗಂಡನು ಹೆಂಡತಿಗೆ ತಲೆಯಾಗಿದ್ದಾನೆ. ಕ್ರಿಸ್ತನು ತಾನೇ ಸಭೆಯೆಂಬ ದೇಹಕ್ಕೆ ರಕ್ಷಕನಾಗಿದ್ದಾನೆ.

24ಸಭೆಯು ಕ್ರಿಸ್ತನಿಗೆ ಹೇಗೆ ಅಧೀನವಾಗಿದೆಯೋ ಹಾಗೆಯೇ ಸ್ತ್ರೀಯರು ತಮ್ಮ ಗಂಡಂದಿರಿಗೆ ಎಲ್ಲಾ ವಿಷಯಗಳಲ್ಲಿ ಅಧೀನರಾಗಿರಬೇಕು.

25ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.

26ಆತನು ಅದನ್ನು ಪಾವನಗೊಳಿಸುವುದಕ್ಕಾಗಿ ತನ್ನನ್ನು ತಾನೇ ಒಪ್ಪಿಸಿಕೊಟ್ಟನು.

27ಅದನ್ನು ಕಳಂಕ ಸುಕ್ಕು ಮುಂತಾದದ್ದೊಂದೂ ಇಲ್ಲದಂತೆ ಪರಿಶುದ್ಧವೂ, ನಿರ್ದೋಷವೂ, ಮಹಿಮೆಯುಳ್ಳದ್ದೂ ಆಗಿರುವ ಸಭೆಯನ್ನಾಗಿ ತನ್ನೆದುರಿನಲ್ಲಿ ನಿಲ್ಲಿಸಿಕೊಳ್ಳಬೇಕೆಂದು ವಾಕ್ಯೋಪದೇಶ ಸಹಿತವಾದ ಜಲಸ್ನಾನವನ್ನು ಮಾಡಿಸಿ ಶುದ್ಧಿಮಾಡಿದನು.

28ಹಾಗೆಯೇ ಗಂಡದಿರು ಸಹ ತಮ್ಮ ಸ್ವಂತ ಶರೀರವನ್ನು ಪ್ರೀತಿಸಿಕೊಳ್ಳುವ ಪ್ರಕಾರವೇ ತಮ್ಮ ಹೆಂಡತಿಯರನ್ನು ಪ್ರೀತಿಸುವ ಹಂಗಿನವರಾಗಿದ್ದಾರೆ. ತನ್ನ ಹೆಂಡತಿಯನ್ನು ಪ್ರೀತಿಸುವವನು ತನ್ನನ್ನೇ ಪ್ರೀತಿಸಿಕೊಳ್ಳುವವನಾಗಿದ್ದಾನೆ.

ಎಫೆಸದವರಿಗೆ 5

ಇಂಗ್ಲಿಷ್‌ನಲ್ಲಿ

Berean Standard BibleEphesians 5:25Husbands, love your wives, just as Christ loved the church and gave Himself up for her

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಪೇತ್ರ 3:7ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
ಕೊಲೊ 3:19ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.
ಆದಿ 2:24ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು. ಅವರಿಬ್ಬರು ಒಂದೇ ಶರೀರವಾಗಿರುವರು.
ಎಫೆ 5:33ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.
ಎಫೆ 5:2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು