Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಎಫೆಸದವರಿಗೆ 5:33

ಬೈಬಲ್ ವಚನ · IRV

ಎಫೆಸದವರಿಗೆ 5:33

ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.

ಇಡೀ ಅಧ್ಯಾಯ ಓದಿ: ಎಫೆಸದವರಿಗೆ 5

ಸಂದರ್ಭದಲ್ಲಿ

30ಸಭೆಯೆಂಬ ದೇಹಕ್ಕೆ ನಾವು ಅಂಗಗಳಾಗಿದ್ದೇವೆ ಸಭೆಯೆಂಬ ಈ ದೇಹವನ್ನು ಕ್ರಿಸ್ತನು ಹಾಗೆಯೇ ಪೋಷಿಸಿ ಪಾಲನೆ ಮಾಡುತ್ತಾ ಬಂದಿದ್ದಾನೆ.

31“ಈ ಕಾರಣದಿಂದ ಪುರುಷನು ತಂದೆತಾಯಿಗಳನ್ನು ಬಿಟ್ಟು ತನ್ನ ಹೆಂಡತಿಯನ್ನು ಸೇರಿಕೊಳ್ಳುವನು, ಅವರಿಬ್ಬರೂ ಒಂದೇ ಶರೀರವಾಗಿರುವರು.” ಎಂದು ಬರೆದದೆಯಲ್ಲಾ.

32ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.

33ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.

ಎಫೆಸದವರಿಗೆ 5

ಇಂಗ್ಲಿಷ್‌ನಲ್ಲಿ

Berean Standard BibleEphesians 5:33Nevertheless, each one of you also must love his wife as he loves himself, and the wife must respect her husband.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಪೇತ್ರ 3:3–7ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು. ಆದರೆ ದೇವರ ದೃಷ್ಟಿಯಲ್ಲಿ ಅಮೂಲ್ಯವಾದದ್ದೂ ಮತ್ತು ಶಾಶ್ವತವಾದದ್ದೂ ಆಗಿರುವ ಸಾತ್ವಿಕತೆ ಮತ್ತು ಶಾಂತಮನಸ್ಸು ಎಂಬ ಆಂತರ್ಯದ ಭೂಷಣವೇ ನಿಮ್ಮ ಅಲಂಕಾರವಾಗಿರಲಿ. ಪೂರ್ವ ಕಾಲದಲ್ಲಿ ದೇವರ ಮೇಲೆ ನಿರೀಕ್ಷೆಯನ್ನಿಟ್ಟಿದ್ದ ಭಕ್ತೆಯರಾದ ಸ್ತ್ರೀಯರೂ ಸಹ ಹೀಗೆಯೇ ತಮ್ಮನ್ನು ಅಲಂಕರಿಸಿಕೊಂಡಿದ್ದರು. ಅವರು ತಮ್ಮ ತಮ್ಮ ಗಂಡಂದಿರಿಗೆ ಅಧೀನರಾಗಿದ್ದರು. ಸಾರಳು ಹಾಗೆಯೇ ಅಬ್ರಹಾಮನಿಗೆ ವಿಧೇಯಳಾಗಿದ್ದು ಅವನನ್ನು ಯಜಮಾನ ಎಂದು ಕರೆದಳು. ನೀವು ಒಳ್ಳೆಯದನ್ನು ಮಾಡುತ್ತಾ ಯಾವ ಭೀತಿಗೂ ಭಯಪಡುವುದಿಲ್ಲವಾದರೆ ನೀವು ಆಕೆಯ ಕುವರಿಯರೇ ಆಗುವಿರಿ. ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.
ಎಸ್ತೇ 1:20ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.
ಎಫೆ 5:22ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.
ಎಫೆ 5:25ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು