ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಎಫೆಸದವರಿಗೆ 5:4
ಬೈಬಲ್ ವಚನ · IRV
ಎಫೆಸದವರಿಗೆ 5:4
ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
ಸಂದರ್ಭದಲ್ಲಿ
1ಆದುದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ.
2ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.
3ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು.
4ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ.
5ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ.
6ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.
7ಆದುದರಿಂದ ನೀವು ಅವರೊಂದಿಗೆ ಪಾಲುಗಾರರಾಗಿರಬೇಡಿರಿ.
ಇಂಗ್ಲಿಷ್ನಲ್ಲಿ
Nor should there be obscenity, foolish talk, or crude joking, which are out of character, but rather thanksgiving.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತು ಹೊರಡಬಾರದು. ಭಕ್ತಿಯನ್ನು ವೃದ್ಧಿ ಮಾಡುವಂತಹ ಸಮಯೋಚಿತವಾದ ಮಾತನ್ನು ಆಡಿದರೆ ಕೇಳುವವರಿಗೆ ಹಿತವಾಗಿ ತೋರುವುದು.ಎಲ್ಲಾದರಲ್ಲಿಯೂ ಕೃತಜ್ಞತಾಸ್ತುತಿಮಾಡಿರಿ ಇದೇ ನಿಮ್ಮ ವಿಷಯವಾಗಿ ಕ್ರಿಸ್ತ ಯೇಸುವಿನಲ್ಲಿ ತೋರಿಬಂದ ದೇವರ ಚಿತ್ತವಾಗಿದೆ.ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.ಹಡಗುಗಳನ್ನು ಸಹ ಗಮನಿಸಿರಿ. ಅವು ಬಹು ದೊಡ್ಡವುಗಳಾಗಿದ್ದರೂ ಬಲವಾದ ಗಾಳಿಯಿಂದ ದಿಕ್ಕು ತಪ್ಪುತ್ತದೆ. ಆದರೂ ನಾವಿಕನು ಬಹಳ ಸಣ್ಣ ಚುಕ್ಕಾಣಿಯಿಂದ ಅವುಗಳನ್ನು ತಾನು ಹೋಗ ಬೇಕಾದ ಕಡೆಗೆ ತಿರುಗಿಸಿಕೊಳ್ಳುತ್ತಾನೆ. ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಮಾಡುವ ಬಗ್ಗೆ ಕೊಚ್ಚಿಕೊಳ್ಳುತ್ತದೆ. ಬೆಂಕಿಯ ಸಣ್ಣ ಕಿಡಿ ದೊಡ್ಡ ಕಾಡನ್ನೂ ಸುಡುತ್ತದೆ. ನಾಲಿಗೆಯೂ ಸಹ ಬೆಂಕಿಯೇ. ನಾಲಿಗೆಯೂ ಅಧರ್ಮ ಲೋಕರೂಪವಾಗಿ ನಮ್ಮ ಅಂಗಗಳ ನಡುವೆ ಇಡಲ್ಪಟ್ಟಿದೆ. ಅದು ದೇಹವನ್ನೆಲ್ಲಾ ಕೆಡಿಸುತ್ತದೆ. ತಾನೇ ನರಕವೆಂಬ ಬೆಂಕಿ ಹೊತ್ತಿಸಿಕೊಳ್ಳುತ್ತಾ ಇಡೀ ಬಾಳಿಗೆ ಬೆಂಕಿ ಹಚ್ಚುತ್ತದೆ. ಸಕಲ ಜಾತಿಯ ಮೃಗ, ಪಕ್ಷಿ, ಹರಿದಾಡುವ ಜಂತು, ಜಲಚರಗಳನ್ನೂ ಮನುಷ್ಯರು ಹತೋಟಿಗೆ ತರುವುದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋಟಿಗೆ ತರಲಾರನು. ಅದು ಸುಮ್ಮನಿರಲಾರದ ಕೆಡುಕಾಗಿದೆ. ಮರಣಕರವಾದ ವಿಷದಿಂದ ತುಂಬಿದೆ.ಸರ್ಪ ಸಂತತಿಯವರೇ ನೀವು ಕೆಟ್ಟವರಾಗಿರಲಾಗಿ ಒಳ್ಳೆಯ ಮಾತುಗಳನ್ನಾಡುವುದಕ್ಕೆ ನಿಮ್ಮಿಂದ ಹೇಗಾದೀತು? ಹೃದಯದಲ್ಲಿ ತುಂಬಿರುವುದೇ ಬಾಯಿಂದ ಹೊರಡುವುದು. ಒಳ್ಳೆಯವನು ತನ್ನ ಹೃದಯವೆಂಬ ಒಳ್ಳೆಯ ಬೊಕ್ಕಸದೊಳಗಿನಿಂದ ಒಳ್ಳೆಯದನ್ನೇ ಹೊರಗೆ ತೆಗೆಯುತ್ತಾನೆ. ಕೆಟ್ಟವನು ತನ್ನ ಹೃದಯವೆಂಬ ಕೆಟ್ಟ ಬೊಕ್ಕಸದೊಳಗಿನಿಂದ ಕೆಟ್ಟವುಗಳನ್ನು ಹೊರಗೆ ತೆಗೆಯುತ್ತಾನೆ. ಇದಲ್ಲದೆ ನಾನು ನಿಮಗೆ ಹೇಳುವುದೇನಂದರೆ, ಮನುಷ್ಯರು ವ್ಯರ್ಥವಾಗಿ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿಯೂ ನ್ಯಾಯವಿಚಾರಣೆಯ ದಿನದಲ್ಲಿ ಲೆಕ್ಕ ಕೊಡಬೇಕು. ನಿನ್ನ ಮಾತುಗಳಿಂದಲೇ ನೀನು ನೀತಿವಂತನೆಂದು ತೀರ್ಪು ಹೊಂದುವಿ. ನಿನ್ನ ಮಾತುಗಳಿಂದಲೇ ನೀನು ಅಪರಾಧಿಯೆಂದು ತೀರ್ಪು ಹೊಂದುವಿ” ಅಂದನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು