ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಎಫೆಸದವರಿಗೆ 6:12
ಬೈಬಲ್ ವಚನ · IRV
ಎಫೆಸದವರಿಗೆ 6:12
ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
ಸಂದರ್ಭದಲ್ಲಿ
9ಯಜಮಾನರೇ, ನಿಮ್ಮ ದಾಸರ ವಿಷಯದಲ್ಲಿ ಅದೇ ರೀತಿಯಾಗಿ ನಡೆದುಕೊಳ್ಳಿರಿ. ಪರಲೋಕದಲ್ಲಿ ನಿಮಗೂ ಅವರಿಗೂ ಯಜಮಾನನಾಗಿರುವಾತನು ಇದ್ದಾನೆಂತಲೂ ಆತನಲ್ಲಿ ಪಕ್ಷಪಾತವಿಲ್ಲವೆಂತಲೂ ತಿಳಿದು ನಿಮ್ಮ ದಾಸರನ್ನು ಬೆದರಿಸುವ ಪದ್ಧತಿಯನ್ನು ಬಿಟ್ಟುಬಿಡಿರಿ.
10ಕಡೆಯದಾಗಿ, ನೀವು ಕರ್ತನಲ್ಲಿಯೂ ಆತನ ಅತ್ಯಧಿಕವಾದ ಶಕ್ತಿಯಲ್ಲಿಯೂ ಬಲಗೊಳ್ಳಿರಿ.
11ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
12ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
13ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
14ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,
15ಸಮಾಧಾನದ ಸುವಾರ್ತೆಯನ್ನು ಪ್ರಚುರಪಡಿಸುವುದಕ್ಕೆ ಸಿದ್ಧ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.
ಇಂಗ್ಲಿಷ್ನಲ್ಲಿ
For our struggle is not against flesh and blood, but against the rulers, against the authorities, against the powers of this world’s darkness, and against the spiritual forces of evil in the heavenly realms.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.ಇವರಲ್ಲಿ ದೇವರ ಪ್ರತಿರೂಪವಾಗಿರುವ ಕ್ರಿಸ್ತನ ತೇಜಸ್ಸನ್ನು ತೋರಿಸುವ ಸುವಾರ್ತೆಯ ಬೆಳಕನ್ನು ನೋಡಬಾರದೆಂದು ಈ ಲೋಕದ ದೇವರು ನಂಬಿಕೆಯಿಲ್ಲದವರ ಮನಸ್ಸನ್ನು ಕುರುಡು ಮಾಡಿದ್ದಾನೆ.ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.ಆತನು ದೊರೆತನಗಳನ್ನೂ ಮತ್ತು ಅಧಿಕಾರಗಳನ್ನೂ ನಿರಾಯುಧರನ್ನಾಗಿ ಮಾಡಿ, ತನ್ನ ಶಿಲುಬೆಯ ಮೂಲಕ ಅವುಗಳನ್ನು ಜಯಿಸಿ ಬಹಿರಂಗಪಡಿಸಿದನು.ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’ ಅಂದನು.ಈ ಲೋಕದಲ್ಲಿ ಮಾತ್ರವಲ್ಲದೆ ಮುಂಬರುವ ಲೋಕದಲ್ಲಿಯೂ ಹೆಸರುಗೊಂಡವರೆಲ್ಲರ ಎಲ್ಲಾ ನಾಮಗಳ ಮೇಲೆಯೂ ಪರಲೋಕದಲ್ಲಿ ಆತನನ್ನು ತನ್ನ ಬಲಗಡೆಯಲ್ಲಿ ಕುಳ್ಳಿರಿಸಿಕೊಂಡನು.ಹೇಗೆಂದರೆ ಮರಣವಾಗಲಿ, ಜೀವವಾಗಲಿ, ದೇವದೂತರಾಗಲಿ, ದುರಾತ್ಮಗಳಾಗಲಿ, ಈಗಿನ ಸಂಗತಿಗಳಾಗಲಿ, ಮುಂದಣ ಸಂಗತಿಗಳಾಗಲಿ,ಪ್ರತಿಯೊಬ್ಬ ಕ್ರೀಡಾಪಟುವು ತನ್ನ ತರಬೇತಿಯ ಎಲ್ಲಾ ವಿಷಯಗಳಲ್ಲಿ ಶಮೆದಮೆಯುಳ್ಳವನಾಗಿರುತ್ತಾನೆ. ಅವರು ಬಾಡಿ ಹೋಗುವ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುತ್ತಾರೆ; ನಾವಾದರೋ ಬಾಡಿಹೋಗದ ಜಯಮಾಲೆಯನ್ನು ಹೊಂದುವುದಕ್ಕೆ ಸಾಧನೆ ಮಾಡುವವರಾಗಿದ್ದೇವೆ. ಆದ್ದರಿಂದ ನಾನು ಸಹ ಗೊತ್ತುಗುರಿಯಿಲ್ಲದವನಂತೆ ಓಡುವುದಿಲ್ಲ; ಗಾಳಿಯೊಂದಿಗೆ ಗುದ್ದಾಡುವವನಂತೆ ಹೋರಾಡುವುದಿಲ್ಲ. ಇತರರಿಗೆ ಬೋಧಿಸಿದ ಮೇಲೆ ನಾನೇ ಅಯೋಗ್ಯನಾಗದಂತೆ, ನನ್ನ ದೇಹವನ್ನು ದಂಡಿಸಿ ಸ್ವಾಧಿನದಲ್ಲಿಟ್ಟುಕೊಳ್ಳುತ್ತೇನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು