Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ವಿಮೋಚನಕಾಂಡ 20:12

ಬೈಬಲ್ ವಚನ · IRV

ವಿಮೋಚನಕಾಂಡ 20:12

“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.

ಇಡೀ ಅಧ್ಯಾಯ ಓದಿ: ವಿಮೋಚನಕಾಂಡ 20

ಸಂದರ್ಭದಲ್ಲಿ

9ಆರು ದಿನಗಳು ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಿಕೊಳ್ಳಬೇಕು.

10ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.

11ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.

12“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.

13“ಕೊಲೆ ಮಾಡಬಾರದು.

14“ವ್ಯಭಿಚಾರಮಾಡಬಾರದು.

15“ಕದಿಯಬಾರದು.

ವಿಮೋಚನಕಾಂಡ 20

ಇಂಗ್ಲಿಷ್‌ನಲ್ಲಿ

Berean Standard BibleExodus 20:12Honor your father and mother, so that your days may be long in the land that the LORD your God is giving you.

ಹೊಸ ಒಡಂಬಡಿಕೆಯಲ್ಲಿ ಉಲ್ಲೇಖಿತ

ಮತ್ತಾ 15:4ಹೇಗೆಂದರೆ ‘ತಂದೆತಾಯಿಗಳನ್ನು ಸನ್ಮಾನಿಸಬೇಕೆಂತಲೂ ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನು ಸಾಯಲೇಬೇಕೆಂತಲೂ’ ದೇವರು ಹೇಳಿದ್ದಾನೆ.
ಎಫೆ 6:2–3ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”
ಮತ್ತಾ 19:19ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಮತ್ತು ನಿನ್ನಂತೆಯೇ ನಿನ್ನ ನೆರೆಯವನನ್ನು ಪ್ರೀತಿಸಬೇಕು” ಇವುಗಳೇ ಅಂದನು.
ಮಾರ್ಕ 7:10‘ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಮತ್ತು ‘ತಂದೆಯನ್ನಾಗಲಿ ತಾಯಿಯನ್ನಾಗಲಿ ದೂಷಿಸುವವನಿಗೆ ಮರಣದಂಡನೆ ಆಗಬೇಕೆಂತಲೂ’ ಮೋಶೆಯು ಹೇಳಿದ್ದಾನೆ.
ಮಾರ್ಕ 10:19ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.
ಲೂಕ 18:20‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಎಫೆ 6:1–3ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು. ವಾಗ್ದಾನಸಹಿತವಾದ ಮೊದಲನೆಯ ಆಜ್ಞೆಯನ್ನು ಕೇಳಿರಿ, “ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು, ಗೌರವಿಸಿದರೆ ನಿನಗೆ ಶುಭವಾಗುವುದು, ನೀನು ಭೂಮಿಯ ಮೇಲೆ ಬಹುಕಾಲ ಬದುಕುವಿ.”
ಕೊಲೊ 3:20ಮಕ್ಕಳೇ, ಎಲ್ಲಾ ವಿಷಯಗಳಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಯಾಕೆಂದರೆ ಇದು ಕರ್ತನ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿದೆ.
ಧರ್ಮೋ 5:16“ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.
ಜ್ಞಾನೋ 23:22–25ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ. ಸತ್ಯವನ್ನು ಎಂದರೆ ಜ್ಞಾನ, ಸುಶಿಕ್ಷೆ, ವಿವೇಕಗಳನ್ನು ಕೊಂಡುಕೋ, ಮಾರಿ ಬಿಡಬೇಡ. ಧರ್ಮಿಯ ತಂದೆಯು ಅತಿ ಸಂತೋಷಪಡುವನು, ಜ್ಞಾನಿಯನ್ನು ಹೆತ್ತವನು ಅವನಲ್ಲಿ ಆನಂದಿಸುವನು. ನಿನ್ನ ತಂದೆತಾಯಿಗಳು ಉಲ್ಲಾಸಗೊಳ್ಳಲಿ, ನಿನ್ನನ್ನು ಹೆತ್ತವಳು ಆನಂದಪಡಲಿ.
ಯಾಜ 19:3“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.
ಜ್ಞಾನೋ 30:17ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.
ಜ್ಞಾನೋ 1:8–9ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ. ಅವು ನಿನ್ನ ತಲೆಗೆ ಸುಂದರವಾದ ಪುಷ್ಪಕಿರೀಟ, ಕೊರಳಿಗೆ ಹಾರದಂತಿರುವುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು