ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ವಿಮೋಚನಕಾಂಡ 20:13
ಬೈಬಲ್ ವಚನ · IRV
ವಿಮೋಚನಕಾಂಡ 20:13
“ಕೊಲೆ ಮಾಡಬಾರದು.
ಸಂದರ್ಭದಲ್ಲಿ
10ಆದರೆ ಏಳನೆಯ ದಿನವು ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿಯ ಸಬ್ಬತ್ ದಿನವಾಗಿದೆ. ಆ ದಿನದಲ್ಲಿ ನೀನು ಯಾವ ಕೆಲಸವನ್ನು ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಪಶುಪ್ರಾಣಿಗಳು ನಿನ್ನ ಊರಿನಲ್ಲಿರುವ ಅನ್ಯದೇಶದವನು ಸಹ ಯಾವ ಕೆಲಸವನ್ನೂ ಮಾಡಬಾರದು.
11ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.
12“ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು, ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಬದುಕುವಿ.
13“ಕೊಲೆ ಮಾಡಬಾರದು.
14“ವ್ಯಭಿಚಾರಮಾಡಬಾರದು.
15“ಕದಿಯಬಾರದು.
16“ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.
ಇಂಗ್ಲಿಷ್ನಲ್ಲಿ
ಹೊಸ ಒಡಂಬಡಿಕೆಯಲ್ಲಿ ಉಲ್ಲೇಖಿತ
“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ.ಅದಕ್ಕೆ ಅವನು, “ಅವು ಯಾವುವು?” ಎಂದು ಕೇಳಲು ಯೇಸು, “ನರಹತ್ಯ ಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳು ಸಾಕ್ಷಿ ಹೇಳಬಾರದು.ನರಹತ್ಯಮಾಡಬಾರದು, ವ್ಯಭಿಚಾರ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು. ಮೋಸಮಾಡಬಾರದು, ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.‘ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಸುಳ್ಳುಸಾಕ್ಷಿ ಹೇಳಬಾರದು, ನಿನ್ನ ತಂದೆತಾಯಿಗಳನ್ನು ಗೌರವಿಸಬೇಕು’ ಎಂಬ ದೇವರಾಜ್ಞೆಗಳು ನಿನಗೆ ಗೊತ್ತಿವೆಯಷ್ಟೆ” ಎಂದು ಹೇಳಿದನು.ಹೇಗೆಂದರೆ “ವ್ಯಭಿಚಾರ ಮಾಡಬಾರದು, ನರಹತ್ಯ ಮಾಡಬಾರದು, ಕದಿಯಬಾರದು, ಪರರ ಸೊತ್ತನ್ನು ಆಶಿಸಬಾರದು.” ಈ ಮೊದಲಾದ ಎಲ್ಲಾ ಕಟ್ಟಳೆಗಳು “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ಒಂದೇ ಮಾತಿನಲ್ಲಿ ಅಡಕವಾಗಿದೆ.ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
“ನರಹತ್ಯ ಮಾಡಬಾರದು.ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ? ದೇವರು ಮನುಷ್ಯರನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದ್ದರಿಂದ ಯಾರು ಮನುಷ್ಯನ ರಕ್ತವನ್ನು ಸುರಿಸುತ್ತಾನೋ ಅವನ ರಕ್ತವನ್ನು ಮನುಷ್ಯನೇ ಸುರಿಸುವನು.ಆದರೆ ಒಬ್ಬನು ತನ್ನ ನೆರೆಯವನನ್ನು ಕೊಲ್ಲಬೇಕೆಂಬ ಉದ್ದೇಶದಿಂದಲೇ ಅವನನ್ನು ಮೋಸದಿಂದ ಕೊಂದರೆ, ಅವನು ಸಾಯುವಂತೆ ನೀನು ಅವನನ್ನು ನನ್ನ ಯಜ್ಞವೇದಿಯ ಬಳಿಯಿಂದ ಕರೆದುಕೊಂಡು ಹೋಗಿ ಕೊಂದುಹಾಕಬೇಕು.“‘ನರಹತ್ಯ ಮಾಡಬಾರದು; ನರಹತ್ಯ ಮಾಡುವವನು ನ್ಯಾಯತೀರ್ಪಿಗೆ ಗುರಿಯಾಗುವನೆಂದು’ ಹಿರಿಯರಿಗೆ ಹೇಳಿಯದೆ ಎಂದು ಕೇಳಿದ್ದೀರಿ. ಆದರೆ ನಾನು ನಿಮಗೆ ಹೇಳುವುದೇನಂದರೆ, ತನ್ನ ಸಹೋದರನ ಮೇಲೆ ಸಿಟ್ಟುಗೊಳ್ಳುವ ಪ್ರತಿಯೊಬ್ಬ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು; ತನ್ನ ಸಹೋದರನನ್ನು ನೋಡಿ, ‘ಎಲೈ ಮೂರ್ಖನೇ’ ಎಂದು ಅನ್ನುವವನು ನ್ಯಾಯ ಸಭೆಯ ವಿಚಾರಣೆಗೆ ಒಳಗಾಗುವನು; ‘ಎಲೈ ನೀಚನೇ’ ಎಂದು ಅನ್ನುವವನು, ಅಗ್ನಿ ನರಕಕ್ಕೆ ಗುರಿಯಾಗುವನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು