Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಗಲಾತ್ಯದವರಿಗೆ 1:10

ಬೈಬಲ್ ವಚನ · IRV

ಗಲಾತ್ಯದವರಿಗೆ 1:10

ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.

ಇಡೀ ಅಧ್ಯಾಯ ಓದಿ: ಗಲಾತ್ಯದವರಿಗೆ 1

ಸಂದರ್ಭದಲ್ಲಿ

7ವಾಸ್ತವವಾಗಿ ಬೇರೊಂದು ಸುವಾರ್ತೆ ಇಲ್ಲ, ಆದರೆ ಕೆಲವರು ನಿಮ್ಮಲ್ಲಿ ಬೇಧವನ್ನು ಹುಟ್ಟಿಸುತ್ತಾ ಕ್ರಿಸ್ತನ ಸುವಾರ್ತೆಯನ್ನು ಮಾರ್ಪಡಿಸುವುದಕ್ಕೆ ಪ್ರಯತ್ನಿಸುತ್ತಿದ್ದಾರೆ.

8ಆದರೂ ನಾವು ನಿಮಗೆ ಸಾರಿದ ಸುವಾರ್ತೆಗೆ ವಿರುದ್ಧವಾದದ್ದನ್ನು, ನಾವೇ ಆಗಲಿ ಅಥವಾ ಪರಲೋಕದಿಂದ ಬಂದ ದೇವದೂತನೇ ಆಗಲಿ, ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗಲಿ.

9ನಾವು ಮೊದಲು ಹೇಳಿದಂತೆಯೇ ಈಗಲೂ ನಾನು ತಿರುಗಿ ಹೇಳುತ್ತೇನೆ. ನೀವು ಸ್ವೀಕರಿಸಿದ ಸುವಾರ್ತೆಗೆ ವಿರುದ್ಧವಾದದ್ದನ್ನು ಯಾವನಾದರೂ ನಿಮಗೆ ಸಾರಿದರೆ ಅವನು ಶಾಪಗ್ರಸ್ತನಾಗುವನು.

10ನಾನೀಗ ಯಾರನ್ನು ಒಲಿಸಿಕೊಳ್ಳುತ್ತಾ ಇದ್ದೇನೆ? ಮನುಷ್ಯರನ್ನೋ? ದೇವರನ್ನೋ? ನಾನು ಮನುಷ್ಯರನ್ನು ಮೆಚ್ಚಿಸುವುದಕ್ಕೆ ಪ್ರಯತ್ನಿಸುತ್ತಾ ಇದ್ದೇನೋ? ಇನ್ನೂ ಮನುಷ್ಯರನ್ನು ಮೆಚ್ಚಿಸುವವನಾಗಿದ್ದರೆ ನಾನು ಕ್ರಿಸ್ತನ ಸೇವಕನಲ್ಲ.

11ಸಹೋದರರೇ, ನಾನು ಸಾರಿದ ಸುವಾರ್ತೆಯಂತೂ ಕೇವಲ ಮನುಷ್ಯನಿಂದ ಬಂದದ್ದಲ್ಲವೆಂದು ನೀವು ತಿಳಿದುಕೊಳ್ಳಬೇಕೆಂದು ನಾನು ಬಯಸುತ್ತೇನೆ.

12ನಾನು ಅದನ್ನು ಮನುಷ್ಯನಿಂದ ಹೊಂದಲಿಲ್ಲ, ನನಗೆ ಯಾರೂ ಉಪದೇಶಿಸಲಿಲ್ಲ, ಬದಲಾಗಿ ಯೇಸು ಕ್ರಿಸ್ತನೇ ಅದನ್ನು ನನಗೆ ಪ್ರಕಟಪಡಿಸಿದನು.

13ಹಿಂದೆ ನಾನು ಯೆಹೂದ್ಯ ಮತದಲ್ಲಿದ್ದಾಗ ನನ್ನ ನಡತೆ ಎಂಥದ್ದೆಂದು ನೀವು ಕೇಳಿದ್ದೀರಿ. ನಾನು ದೇವರ ಸಭೆಯನ್ನು ಬಹಳವಾಗಿ ಹಿಂಸೆಪಡಿಸಿ ಹಾಳುಮಾಡುತ್ತಿದ್ದೆನು.

ಗಲಾತ್ಯದವರಿಗೆ 1

ಇಂಗ್ಲಿಷ್‌ನಲ್ಲಿ

Berean Standard BibleGalatians 1:10Am I now seeking the approval of men, or of God? Or am I striving to please men? If I were still trying to please men, I would not be a servant of Christ.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಥೆಸ 2:4ದೇವರು ನಮ್ಮನ್ನು ಯೋಗ್ಯರೆಂದೆಣಿಸಿ, ಸುವಾರ್ತೆಯನ್ನು ನಮ್ಮ ವಶಕ್ಕೆ ಒಪ್ಪಿಸಿದನು. ಆದುದರಿಂದ ಮನುಷ್ಯರನ್ನು ಮೆಚ್ಚಿಸುವುದಕ್ಕಾಗಿಯಲ್ಲ ಹೃದಯವನ್ನು ಪರಿಶೋಧಿಸುವ ದೇವರನ್ನೇ ಮೆಚ್ಚಿಸಬೇಕೆಂದು ಮಾತನಾಡುತ್ತಿದ್ದೇವೆ.
ಅ. ಕೃ 5:29ಪೇತ್ರನೂ ಉಳಿದ ಅಪೊಸ್ತಲರೂ ಅವರಿಗೆ, “ನಾವು ಮನುಷ್ಯರಿಗಿಂತಲೂ ದೇವರಿಗೆ ಹೆಚ್ಚಾಗಿ ವಿಧೇಯರಾಗಿರಬೇಕಲ್ಲಾ.
ಎಫೆ 6:6ಮನುಷ್ಯರನ್ನು ಮೆಚ್ಚಿಸುವವರಂತೆ ತೋರಿಕೆಗೆ ಯಜಮಾನರು ನೋಡುತ್ತಿರುವಾಗ ಮಾತ್ರ ಸೇವೆಮಾಡದೇ, ಕ್ರಿಸ್ತನ ದಾಸರಿಗೆ ತಕ್ಕ ಹಾಗೆ ದೇವರ ಚಿತ್ತವನ್ನು ಮನಃಪೂರ್ವಕವಾಗಿ ನಡಿಸಿರಿ.
ಯಾಕೋ 4:4ವ್ಯಭಿಚಾರಿಗಳೇ, ಇಹಲೋಕದ ಗೆಳೆತನವು ದೇವರಿಗೆ ಹಗೆತನವೆಂದು ನಿಮಗೆ ತಿಳಿಯದೋ? ಆದ್ದರಿಂದ ಲೋಕಕ್ಕೆ ಸ್ನೇಹಿತನಾಗಿರಬೇಕೆಂದಿರುವವನು ತನ್ನನ್ನು ದೇವರಿಗೆ ವಿರೋಧಿಯನ್ನಾಗಿ ಮಾಡಿಕೊಳ್ಳುತ್ತಾನೆ.
ಮತ್ತಾ 22:16ಆತನ ಬಳಿಗೆ ತಮ್ಮ ಶಿಷ್ಯರನ್ನು ಹೆರೋದ್ಯರ ಜೊತೆಮಾಡಿ ಕಳುಹಿಸಿದರು. ಇವರು ಯೇಸುವಿಗೆ, “ಗುರುವೇ, ನೀನು ಸತ್ಯವಂತನು, ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನು, ಯಾರಿಗೂ ಹೆದರದವನು; ನೀನು ಜನರ ದಾಕ್ಷಿಣ್ಯಕ್ಕೆ ತಕ್ಕಂತೆ ಮಾತನಾಡುವವನಲ್ಲ ಎಂದು ಬಲ್ಲೆವು.
ಕೊಲೊ 3:22ದಾಸರೇ, ಈ ಲೋಕದಲ್ಲಿರುವ ನಿಮ್ಮ ಯಜಮಾನರಿಗೆ ಎಲ್ಲಾ ವಿಷಯಗಳಲ್ಲಿ ವಿಧೇಯರಾಗಿರಿ, ಮನುಷ್ಯರನ್ನು ಮೆಚ್ಚಿಸುವವರು ಮಾಡುವ ಹಾಗೆ ನಿಮ್ಮ ಯಜಮಾನರು ನೋಡುತ್ತಿರುವಾಗ ಮಾತ್ರ ಕೆಲಸಮಾಡದೆ, ಕರ್ತನಿಗೆ ಭಯಪಡುವ ಪ್ರಾಮಾಣಿಕವಾದ ಹೃದಯದಿಂದ ಕೆಲಸ ಮಾಡಿರಿ.
2 ಕೊರಿ 5:9–11ಆದ್ದರಿಂದ ನಾವು ದೇಹವೆಂಬ ಮನೆಯಲ್ಲಿದ್ದರೂ ಸರಿಯೇ ಅಥವಾ ಅದನ್ನು ಬಿಟ್ಟಿದ್ದರೂ ಸರಿಯೇ, ಕರ್ತನನ್ನು ಮೆಚ್ಚಿಸುವವರಾಗಿರಬೇಕೆಂಬುದೇ ನಮ್ಮ ಗುರಿಯಾಗಿದೆ. ಯಾಕೆಂದರೆ ಪ್ರತಿಯೊಬ್ಬನು ತನ್ನ ದೇಹದ ಮೂಲಕ ನಡೆಸಿದ ಒಳ್ಳೆಯ ಅಥವಾ ಕೆಟ್ಟ ಕಾರ್ಯಕ್ಕೆ ತಕ್ಕ ಪ್ರತಿಫಲವನ್ನು ಹೊಂದುವುದಕ್ಕೋಸ್ಕರ ಕ್ರಿಸ್ತನ ನ್ಯಾಯಾಸನದ ಮುಂದೆ ಯಥಾಸ್ಥಿತಿಯಲ್ಲಿ ಕಾಣಿಸಿಕೊಳ್ಳಬೇಕಾಗಿದೆ. ಆದ್ದರಿಂದ, ಕರ್ತನಲ್ಲಿ ಭಯವುಳ್ಳವರಾಗಿರಬೇಕೆಂದು ನಾವು, ಮನುಷ್ಯರನ್ನು ಒಡಂಬಡಿಸುತ್ತೇವೆ. ನಾವು ಎಂಥವರೆಂದು ದೇವರಿಗೆ ಪ್ರಕಟವಾಗಿದ್ದೇವೆ. ಅದು ನಿಮ್ಮ ಮನಸ್ಸಾಕ್ಷಿಗೆ ಕೂಡಾ ಗೊತ್ತಾಗಿದೆ ಎಂದು ನಂಬಿಕೊಂಡಿದ್ದೇನೆ.
ರೋಮಾ 2:29ಆದರೆ ಆಂತರಿಕವಾಗಿ ಯೆಹೂದ್ಯನಾಗಿರುವವನೇ ಯೆಹೂದ್ಯನು; ಮತ್ತು ಸುನ್ನತಿಯನ್ನು ಹೃದಯದಲ್ಲಿ ಹೊಂದಿರುವವನೇ ಸುನ್ನತಿಯುಳ್ಳವನು. ಇದು ಬಾಹ್ಯಾಚಾರಕ್ಕೆ ಸಂಬಂಧಪಟ್ಟದ್ದಲ್ಲ, ಆತ್ಮಸಂಬಂಧಪಟ್ಟದ್ದೇ; ಇಂಥ ಮನುಷ್ಯನಿಗೆ ಬರುವ ಪ್ರಶಂಸೆಯು, ದೇವರಿಂದಲೇ ಹೊರತು ಮನುಷ್ಯರಿಂದ ಬರುವುದಿಲ್ಲ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು