ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಗಲಾತ್ಯದವರಿಗೆ 2:20
ಬೈಬಲ್ ವಚನ · IRV
ಗಲಾತ್ಯದವರಿಗೆ 2:20
ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
ಇಡೀ ಅಧ್ಯಾಯ ಓದಿ: ಗಲಾತ್ಯದವರಿಗೆ 2
ಸಂದರ್ಭದಲ್ಲಿ
17ಆದರೆ ನಾವು ಕ್ರಿಸ್ತನ ಮೂಲಕ ನೀತಿವಂತರೆಂಬ ನಿರ್ಣಯ ಹೊಂದುವುದಕ್ಕೆ ಪ್ರಯತ್ನಿಸುತ್ತಿರುವಾಗ, ನಾವೂ ಪಾಪಿಗಳಾಗಿ ತೋರಿಬಂದರೆ ಕ್ರಿಸ್ತನು ಪಾಪಕ್ಕೆ ಸಹಾಯಕನಾಗಿರುವನೋ? ಎಂದಿಗೂ ಇಲ್ಲ.
18ನಾನು ಕೆಡವಿದ್ದನ್ನೇ ತಿರುಗಿ ಕಟ್ಟಿದರೆ ನನ್ನನ್ನು ನಾನೇ ಅಪರಾಧಿ ಎಂದು ತೋರಿಸಿಕೊಳ್ಳುತ್ತೇನಲ್ಲಾ.
19ನಾನಂತೂ ದೇವರಿಗಾಗಿ ಜೀವಿಸುವುದಕ್ಕೋಸ್ಕರ ಧರ್ಮಶಾಸ್ತ್ರದ ಮೂಲಕವಾಗಿ ಧರ್ಮಶಾಸ್ತ್ರದ ಪಾಲಿಗೆ ಸತ್ತವನಾಗಿದ್ದೇನೆ.
20ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.
21ನಾನು ದೇವರ ಕೃಪೆಯನ್ನು ತಿರಸ್ಕರಿಸುವುದಿಲ್ಲ. ಧರ್ಮಶಾಸ್ತ್ರದ ಮೂಲಕ ನೀತಿವಂತರಾಗಬಹುದಾದರೆ ಕ್ರಿಸ್ತನು ಮರಣಕ್ಕೀಡಾದುದು ನಿರರ್ಥಕವೇ ಸರಿ.
ಇಂಗ್ಲಿಷ್ನಲ್ಲಿ
I have been crucified with Christ, and I no longer live, but Christ lives in me. The life I live in the body, I live by faith in the Son of God, who loved me and gave Himself up for me.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.ಕ್ರಿಸ್ತನು ಎಲ್ಲರಿಗೋಸ್ಕರ ಸತ್ತದ್ದರಿಂದಾಗಿ ಜೀವಿಸುವವರು ಇನ್ನು ಮೇಲೆ ತಮಗಾಗಿ ಜೀವಿಸದೇ ತಮಗೋಸ್ಕರ ಸತ್ತು ಎದ್ದು ಬಂದಾತನಿಗಾಗಿ ಜೀವಿಸಬೇಕು.ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು. ಹೇಗೆಂದರೆ ನಾವು ಆತನ ಮರಣಕ್ಕೆ ಸದೃಶ್ಯವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. ನಮಗೆ ತಿಳಿದಿರುವಂತೆ, ನಮ್ಮ ಪಾಪಾಧೀನಸ್ವಭಾವವು ನಾಶವಾಗಿ, ನಾವು ಇನ್ನೂ ಪಾಪದ ವಶದಲ್ಲಿರದಂತೆ ನಮ್ಮ ಪೂರ್ವಸ್ವಭಾವವು ಕ್ರಿಸ್ತನ ಕೂಡ ಶಿಲುಬೆಗೆ ಹಾಕಲ್ಪಟ್ಟಿದೆ.ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ. ನಿಮಗೆ ಜೀವವಾಗಿರುವ ಕ್ರಿಸ್ತನು ಪ್ರತ್ಯಕ್ಷನಾಗುವಾಗ ನೀವು ಸಹ ಆತನೊಂದಿಗೆ ಮಹಿಮೆಯಲ್ಲಿ ಪ್ರತ್ಯಕ್ಷರಾಗುವಿರಿ.ಯೇಸುವಿನ ಜೀವವು ನಮ್ಮ ದೇಹದಲ್ಲಿ ಉಂಟೆಂದು ಪ್ರಕಟಪಡಿಸುವುದಕ್ಕಾಗಿ ಯೇಸುವಿನ ಮರಣಾವಸ್ಥೆಯನ್ನು ನಾವು ಯಾವಾಗಲೂ ದೇಹದಲ್ಲಿ ಅನುಭವಿಸುವವರಾಗಿದ್ದೇವೆ. ಯೇಸುವಿನ ಜೀವವು ನಮ್ಮ ಮರ್ತ್ಯ ಶರೀರದಲ್ಲಿ ಉಂಟೆಂದು ತೋರಿಬರುವುದಕ್ಕಾಗಿ ಬದುಕಿರುವ ನಾವು ಯೇಸುವಿನ ನಿಮಿತ್ತ ಯಾವಾಗಲೂ ಮರಣಕ್ಕೆ ಒಪ್ಪಿಸಲ್ಪಡುತ್ತಾ ಇದ್ದೇವೆ.ಇದಲ್ಲದೆ ನಾವು ಕ್ರಿಸ್ತನೊಡನೆ ಸತ್ತ ಪಕ್ಷದಲ್ಲಿ ಆತನೊಡನೆ ಜೀವಿಸುವೆವೆಂದು ನಂಬುತ್ತೇವೆ.ನನಗಾದರೋ ನಮ್ಮ ಕರ್ತನಾದ ಯೇಸು ಕ್ರಿಸ್ತನ ಶಿಲುಬೆಯ ವಿಷಯದಲ್ಲಿಯೇ ಹೊರತು ಬೇರೆ ಯಾವ ವಿಷಯದಲ್ಲಿಯೂ ಹೆಚ್ಚಳಪಡುವುದು ಬೇಕಾಗಿಲ್ಲ. ಆತನ ಮೂಲಕ ನಾನು ಲೋಕಕ್ಕೂ, ಲೋಕವು ನನಗಾಗಿಯೂ ಶಿಲುಬೆಗೆ ಹಾಕಿಕೊಂಡು ಸತ್ತಿತು.ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು