ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಗಲಾತ್ಯದವರಿಗೆ 3:28
ಬೈಬಲ್ ವಚನ · IRV
ಗಲಾತ್ಯದವರಿಗೆ 3:28
ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
ಇಡೀ ಅಧ್ಯಾಯ ಓದಿ: ಗಲಾತ್ಯದವರಿಗೆ 3
ಸಂದರ್ಭದಲ್ಲಿ
25ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ.
26ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
27ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
28ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
29ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.
ಇಂಗ್ಲಿಷ್ನಲ್ಲಿ
There is neither Jew nor Greek, slave nor free, male nor female, for you are all one in Christ Jesus.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಹೇಗೆ ದೇಹವು ಒಂದಾಗಿದ್ದರೂ ಅದಕ್ಕಿರುವ ಅಂಗಗಳು ಅನೇಕವಾಗಿವೆಯೋ, ಹೇಗೆ ದೇಹದ ಅಂಗಗಳೆಲ್ಲವೂ ಅನೇಕವಾಗಿದ್ದು ಒಂದೇ ದೇಹವಾಗಿದೆಯೋ, ಹಾಗೆಯೇ ಕ್ರಿಸ್ತನು ಇದ್ದಾನೆ. ಯೆಹೂದ್ಯರಾಗಲಿ, ಗ್ರೀಕರಾಗಲಿ, ದಾಸರಾಗಲಿ, ಸ್ವತಂತ್ರರಾಗಲಿ ನಾವೆಲ್ಲರೂ ಒಂದೇ ದೇಹವಾಗುವುದಕ್ಕಾಗಿ ಒಂದೇ ಆತ್ಮನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡೆವು. ಒಂದೇ ಆತ್ಮವು ನಮ್ಮೆಲ್ಲರಿಗೆ ಪಾನವಾಗಿ ಕೊಡಲ್ಪಟ್ಟಿತು.ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ. ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ. ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ. ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ? ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.ನೀವು ಕರೆಯಲ್ಪಟ್ಟಾಗ ಒಂದೇ ನಿರೀಕ್ಷೆಗಾಗಿ ಕರೆಯಲ್ಪಟ್ಟವರಂತೆಯೇ, ನೀವೆಲ್ಲರೂ ಒಂದೇ ದೇಹಕ್ಕೆ ಸೇರಿದವರು, ಒಬ್ಬನೇ ಆತ್ಮನನ್ನು ಹೊಂದಿದವರು,ಆತನು ಕರುಣಿಸಿದ ನಮ್ಮನ್ನು ಯೆಹೂದ್ಯರೊಳಗಿಂದ ಮಾತ್ರ ಕರೆಯದೆ ಹೋಶೇಯನ ಗ್ರಂಥದ ವಚನದಲ್ಲಿ ತಾನು ಸೂಚಿಸಿರುವಂತೆ ಅನ್ಯಜನರೊಳಗಿಂದ ಸಹ ಕರೆದನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು