ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಗಲಾತ್ಯದವರಿಗೆ 5:19–21
ಬೈಬಲ್ ವಚನ · IRV
ಗಲಾತ್ಯದವರಿಗೆ 5:19–21
19ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,
20ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,
21ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
ಇಡೀ ಅಧ್ಯಾಯ ಓದಿ: ಗಲಾತ್ಯದವರಿಗೆ 5
ಸಂದರ್ಭದಲ್ಲಿ
16ನಾನು ಹೇಳುವುದೇನಂದರೆ ಪವಿತ್ರಾತ್ಮನನ್ನು ಅನುಸರಿಸಿ ನಡೆದುಕೊಳ್ಳಿರಿ, ಆಗ ನೀವು ಶರೀರಭಾವದ ಅಭಿಲಾಷೆಗಳನ್ನು ಎಷ್ಟು ಮಾತ್ರಕ್ಕೂ ನೆರವೇರಿಸುವುದಿಲ್ಲ.
17ಏಕೆಂದರೆ ಶರೀರಾಭಿಲಾಷೆಯೂ ಆತ್ಮನಿಗೆ ವಿರುದ್ಧವಾಗಿದೆ, ಆತ್ಮನ ಅಭಿಲಾಷೆಯು ಶರೀರಭಾವಕ್ಕೆ ವಿರುದ್ಧವಾಗಿದೆ. ನೀವು ಮಾಡಲಿಚ್ಚಿಸುವುದನ್ನು ಮಾಡದಂತೆ ಇವು ಒಂದಕ್ಕೊಂದು ಹೋರಾಡುತ್ತವೆ.
18ಆದರೆ ನೀವು ಆತ್ಮನಿಂದ ನಡಿಸಿಕೊಳ್ಳುವವರಾದರೆ ಧರ್ಮಶಾಸ್ತ್ರಕ್ಕೆ ಅಧೀನರಲ್ಲ.
19ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,
20ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,
21ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.
22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,
23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.
24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.
ಇಂಗ್ಲಿಷ್ನಲ್ಲಿ
The acts of the flesh are obvious: sexual immorality, impurity, and debauchery; idolatry and sorcery; hatred, discord, jealousy, and rage; rivalries, divisions, factions, and envy; drunkenness, orgies, and the like. I warn you, as I did before, that those who practice such things will not inherit the kingdom of God.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಅನೀತಿವಂತರು ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲವೆಂಬುದು ನಿಮಗೆ ತಿಳಿಯದೋ? ಸುಳ್ಳನ್ನು ನಂಬಬೇಡಿರಿ. ಜಾರರು, ವಿಗ್ರಹಾರಾಧಕರು, ವ್ಯಭಿಚಾರಿಗಳು, ಪುರುಷಗಾಮಿಗಳು, ಕಳ್ಳರು, ಲೋಭಿಗಳು, ಕುಡುಕರು, ಜಗಳಮಾಡುವವರು, ಸುಲುಕೊಳ್ಳುವವರು ಇವರೊಳಗೆ ಒಬ್ಬರಾದರೂ ದೇವರ ರಾಜ್ಯಕ್ಕೆ ಬಾಧ್ಯರಾಗುವುದಿಲ್ಲ.ಆದುದರಿಂದ ನಿಮ್ಮಲ್ಲಿರುವ ಲೌಕಿಕ ಆಸೆಗಳು ಅಂದರೆ, ಜಾರತ್ವ, ಅಶುದ್ಧತ್ವ, ಕಾಮಾಭಿಲಾಷೆ, ಕೆಟ್ಟ ಅಭಿಲಾಷೆ ಮತ್ತು ವಿಗ್ರಹಾರಾಧನೆಗೆ ಸಮವಾಗಿರುವ ದುರಾಶೆ ಇಂಥವುಗಳನ್ನು ಸಾಯಿಸಿರಿ. ಇವುಗಳ ನಿಮಿತ್ತ ಅವಿಧೇಯರಾಗುವವರ ಮೇಲೆ ದೇವರ ಕೋಪವು ಉಂಟಾಗುತ್ತದೆ. ಹಿಂದೆ ನೀವು ಸಹ ಅಂಥವುಗಳಲ್ಲಿ ಜೀವಿಸುತ್ತಿದ್ದು ಅವುಗಳನ್ನು ನಡಿಸುತ್ತಿದ್ದಿರಿ. ಆದರೆ ಈಗಲಾದರೋ ಕ್ರೋಧ, ಕೋಪ, ಮತ್ಸರ, ದೂಷಣೆ ಮತ್ತು ಬಾಯಿಂದ ಹೊರಡುವ ದುರ್ಭಾಷೆ ಇವುಗಳನ್ನು ಬಿಟ್ಟುಬಿಡಿರಿ.ಆದರೆ ಬಾಯೊಳಗಿಂದ ಹೊರ ಬರುವಂಥವುಗಳು ಹೃದಯದಿಂದ ಬರುತ್ತವೆ. ಇವೇ ಮನುಷ್ಯನನ್ನು ಅಶುದ್ಧಿಮಾಡುವವು. ಏಕೆಂದರೆ ಹೃದಯದಿಂದ ಕೆಟ್ಟ ಆಲೋಚನೆಗಳು, ಕೊಲೆ, ವ್ಯಭಿಚಾರ, ಜಾರತ್ವ, ಕಳ್ಳತನ, ಸುಳ್ಳುಸಾಕ್ಷಿ ಮತ್ತು ದೂಷಣೆಗಳು ಹೊರಟು ಬರುತ್ತವೆ.ಆದ್ದರಿಂದ ಉಳಿದಿರುವ ತನ್ನ ಜೀವಮಾನ ಕಾಲದಲ್ಲಿ ಇನ್ನೂ ಮನುಷ್ಯರ ಅಭಿಲಾಷೆಗಳ ಪ್ರಕಾರ ಬದುಕದೆ ದೇವರ ಚಿತ್ತದ ಪ್ರಕಾರ ಬದುಕುವುದಕ್ಕೆ ಪ್ರಯತ್ನಮಾಡುವನು. ನೀವು ಬಂಡುತನ, ದುರಾಶೆ, ಕುಡುಕತನ, ದುಂದೌತಣ, ಮದ್ಯಪಾನ ಗೋಷ್ಠಿ, ಅಸಹ್ಯವಾದ ವಿಗ್ರಹಾರಾಧನೆ, ಈ ಮೊದಲಾದವುಗಳನ್ನು ನಡಿಸುವುದರಲ್ಲಿಯೂ ಅನ್ಯಜನರಿಗೆ ಇಷ್ಟವಾದ ದುಷ್ಕೃತ್ಯಗಳನ್ನು ಮಾಡುವುದರಲ್ಲಿಯೂ ಕಾಲಕಳೆದದ್ದು ಸಾಕು. ಅವರು ಮಾಡುವ ಅಪರಿಮಿತವಾದ ಪಟಿಂಗತನದಲ್ಲಿ ನೀವು ಸೇರದೆ ಇದ್ದದ್ದಕ್ಕೆ ಅವರು ಆಶ್ಚರ್ಯಪಟ್ಟು ನಿಮ್ಮನ್ನು ದೂಷಿಸುತ್ತಾರೆ.ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಪಾಳುಗಾರರಾಗಿರುವವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ, ಅದು ಎರಡನೆಯ ಮರಣವು” ಎಂದು ನನಗೆ ಹೇಳಿದನು.ಜಾರತ್ವ ಮತ್ತು ಯಾವ ವಿಧವಾದ ಅಶುದ್ಧತ್ವ ಅಥವಾ ದ್ರವ್ಯಾಶೆ ಇವುಗಳ ಸುದ್ದಿಯಾದರೂ ನಿಮ್ಮಲ್ಲಿ ಇರಬಾರದು, ಇವುಗಳಿಗೆ ದೂರವಾಗಿರುವುದೇ ದೇವಜನರಿಗೆ ಯೋಗ್ಯವಾದದ್ದು. ಹೊಲಸು ಮಾತು, ಹುಚ್ಚು ಮಾತು, ಕುಚೋದ್ಯ ಇವು ಬೇಡ. ಇವು ಅಯುಕ್ತವಾಗಿವೆ. ಆದರೆ ಇವುಗಳಿಗೆ ಪ್ರತಿಯಾಗಿ ದೇವರಿಗೆ ಕೃತಜ್ಞತಾಸ್ತುತಿಮಾಡಿರಿ. ಜಾರನಿಗಾಗಲಿ, ದುರಾಚಾರಿಗಾಗಲಿ, ವಿಗ್ರಹಾರಾಧಕನಾಗಿರುವ ಲೋಭಿಗಾಗಲಿ ಕ್ರಿಸ್ತನ ಮತ್ತು ದೇವರ ರಾಜ್ಯದಲ್ಲಿ ಬಾಧ್ಯತೆ ಇಲ್ಲವೆಂದು ನಿಮಗೆ ನಿಶ್ಚಯವಾಗಿ ತಿಳಿದಿರಲಿ. ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.ಯಾಕೆಂದರೆ ನೀವು ಇನ್ನೂ ಪ್ರಾಪಂಚಿಕರಾಗಿದ್ದೀರಿ. ನಿಮ್ಮಲ್ಲಿ ಹೊಟ್ಟೆಕಿಚ್ಚು ಜಗಳಗಳು ಇರುವಲ್ಲಿ, ನೀವು ಪ್ರಾಪಂಚಿಕರಾಗಿದ್ದು ಕೇವಲ ಬೇರೆ ಮನುಷ್ಯರಂತೆ ನಡೆಯುತ್ತೀರಲ್ಲವೆ?ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು