Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಗಲಾತ್ಯದವರಿಗೆ 5:22–23

ಬೈಬಲ್ ವಚನ · IRV

ಗಲಾತ್ಯದವರಿಗೆ 5:22–23

22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.

ಇಡೀ ಅಧ್ಯಾಯ ಓದಿ: ಗಲಾತ್ಯದವರಿಗೆ 5

ಸಂದರ್ಭದಲ್ಲಿ

19ಶರೀರಭಾವದ ಸ್ವಭಾವಗಳು ಪ್ರತ್ಯಕ್ಷವಾಗಿಯೇ ಇವೆ, ಅದು ಯಾವುವೆಂದರೆ, ಜಾರತ್ವ, ಬಂಡುತನ, ನಾಚಿಕೆಗೇಡಿತನ,

20ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಪಕ್ಷಪಾತ, ಭಿನ್ನಮತ,

21ಮತ್ಸರ, ಕುಡುಕುತನ, ಗಲಭೆ, ಢಂಭಾಚಾರ ಇಂಥವುಗಳೇ. ಇಂಥ ಕಾರ್ಯಗಳನ್ನು ನಡಿಸುವವರು ದೇವರ ರಾಜ್ಯಕ್ಕೆ ಬಾಧ್ಯಸ್ಥರಾಗುವುದಿಲ್ಲವೆಂದು ನಾನು ಈ ಮೊದಲು ಹೇಳಿದಂತೆಯೇ ಈಗಲೂ ನಿಮ್ಮನ್ನು ಎಚ್ಚರಿಸುತ್ತೇನೆ.

22ಆದರೆ ದೇವರಾತ್ಮನಿಂದ ಉಂಟಾಗುವ ಫಲವೇನಂದರೆ, ಪ್ರೀತಿ, ಸಂತೋಷ, ಸಮಾಧಾನ, ದೀರ್ಘಶಾಂತಿ, ದಯೆ, ಪರೋಪಕಾರ, ನಂಬಿಕೆ,

23ಸಾಧುತ್ವ, ಶಮೆದಮೆ ಇಂಥವುಗಳೇ. ಇವುಗಳಿಗೆ ವಿರುದ್ಧವಾಗಿ ಯಾವ ಧರ್ಮಶಾಸ್ತ್ರವೂ ಇಲ್ಲ.

24ಕ್ರಿಸ್ತ ಯೇಸುವಿನಲ್ಲಿರುವವರು ತಮ್ಮ ಶರೀರಭಾವವನ್ನು ಅದರ ವಿಷಯಾಭಿಲಾಷೆ, ಸ್ವೇಚ್ಛಾಭಿಲಾಷೆಗಳ ಸಹಿತವಾಗಿ ಶಿಲುಬೆಗೆ ಹಾಕಿದವರಾಗಿದ್ದಾರೆ.

25ನಾವು ಆತ್ಮನಿಂದ ಜೀವಿಸುತ್ತಿರಲಾಗಿ ಆತ್ಮನನ್ನನುಸರಿಸಿ ನಡೆಯೋಣ.

26ಅಹಂಕಾರಿಗಳೂ, ಒಬ್ಬರನ್ನೊಬ್ಬರು ಕೆಣಕುವವರೂ, ಒಬ್ಬರ ಮೇಲೊಬ್ಬರು ಮತ್ಸರವುಳ್ಳವರೂ ಆಗದೆ ಇರೋಣ.

ಗಲಾತ್ಯದವರಿಗೆ 5

ಇಂಗ್ಲಿಷ್‌ನಲ್ಲಿ

Berean Standard BibleGalatians 5:22–23But the fruit of the Spirit is love, joy, peace, patience, kindness, goodness, faithfulness, gentleness, and self-control. Against such things there is no law.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

ಕೊಲೊ 3:12–17ಹೀಗಿರಲಾಗಿ ದೇವರಿಂದ ಆರಿಸಿಕೊಂಡವರಾಗಿ, ಪರಿಶುದ್ಧರೂ ಹಾಗೂ ಪ್ರಿಯರೂ ಆಗಿರುವುದರಿಂದ ಕನಿಕರ, ದಯೆ, ದೀನತೆ, ಸಾತ್ವಿಕತ್ವ ಮತ್ತು ಸಹನೆ ಎಂಬ ಸದ್ಗುಣಗಳನ್ನು ಧರಿಸಿಕೊಳ್ಳಿರಿ. ಒಬ್ಬರನ್ನೊಬ್ಬರು ಸೈರಿಸಿಕೊಂಡು ಯಾರಿಗಾದರೂ ಮತ್ತೊಬ್ಬನ ಮೇಲೆ ತಪ್ಪುಹೊರಿಸುವುದಕ್ಕೆ ಕಾರಣವಿದ್ದರೂ, ತಪ್ಪುಹೊರಿಸದೆ ಕ್ಷಮಿಸಿರಿ, ಕರ್ತನು ನಿಮ್ಮನ್ನು ಕ್ಷಮಿಸಿದಂತೆಯೇ ನೀವೂ ಕ್ಷಮಿಸಿರಿ. ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ. ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ. ಕ್ರಿಸ್ತನ ವಾಕ್ಯವು ನಿಮ್ಮಲ್ಲಿ ಸಮೃದ್ಧಿಯಾಗಿ ವಾಸಿಸಲಿ. ಸಕಲಜ್ಞಾನದಿಂದ ಒಬ್ಬರಿಗೊಬ್ಬರು ಉಪದೇಶಮಾಡಿಕೊಂಡು ಬುದ್ಧಿಹೇಳಿಕೊಳ್ಳಿರಿ. ಕೀರ್ತನೆಗಳಿಂದಲೂ, ಸ್ತುತಿಪದಗಳಿಂದಲೂ ಮತ್ತು ಆತ್ಮೀಕವಾದ ಗೀತೆಗಳಿಂದಲೂ ಹಾಗೂ ನಿಮ್ಮ ಹೃದಯಗಳಲ್ಲಿ ದೇವರಿಗೆ ಕೃತಜ್ಞತೆಯಿಂದಲೂ ಹಾಡಿರಿ. ನೀವು ನುಡಿಯಿಂದಾಗಲಿ ನಡೆಯಿಂದಾಗಲಿ ಏನೇ ಮಾಡಿದರೂ ಅದೆಲ್ಲವನ್ನೂ ಕರ್ತನಾದ ಯೇಸುವಿನ ಹೆಸರಿನಲ್ಲಿಯೇ ಮಾಡಿರಿ ಮತ್ತು ತಂದೆಯಾದ ದೇವರಿಗೆ ಆತನ ಮೂಲಕ ಕೃತಜ್ಞತಾಸ್ತುತ್ತಿಯನ್ನು ಸಲ್ಲಿಸಿರಿ.
1 ಕೊರಿ 13:4–7ಪ್ರೀತಿಯು ಬಹು ತಾಳ್ಮೆಯುಳ್ಳದ್ದು, ದಯೆಯುಳ್ಳದ್ದು. ಪ್ರೀತಿಯು ಹೊಟ್ಟೆಕಿಚ್ಚುಪಡುವುದಿಲ್ಲ, ಹೊಗಳಿಕೊಳ್ಳುವುದಿಲ್ಲ. ಅದು ಗರ್ವಪಡುವುದಿಲ್ಲ, ಅಸಭ್ಯವಾಗಿ ನಡೆಯುವುದಿಲ್ಲ. ಸ್ವಪ್ರಯೋಜನವನ್ನು ಚಿಂತಿಸುವುದಿಲ್ಲ. ಬೇಗ ಸಿಟ್ಟುಗೊಳ್ಳುವುದಿಲ್ಲ. ಅಪಕಾರವನ್ನು ಮನಸ್ಸಿನಲ್ಲಿ ಇಟ್ಟುಕೊಳ್ಳುವುದಿಲ್ಲ. ಅನ್ಯಾಯದಲ್ಲಿ ಸಂತೋಷಪಡುವುದಿಲ್ಲ ಆದರೆ ಸತ್ಯದಲ್ಲಿ ಸಂತೋಷಪಡುತ್ತದೆ. ಎಲ್ಲವನ್ನು ತಾಳಿಕೊಳ್ಳುತ್ತದೆ. ಎಲ್ಲವನ್ನು ನಂಬುತ್ತದೆ. ಎಲ್ಲವನ್ನು ನಿರೀಕ್ಷಿಸುತ್ತದೆ. ಎಲ್ಲವನ್ನು ಸಹಿಸಿಕೊಳ್ಳುತ್ತದೆ.
ಯೋಹಾ 15:5ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.
ಯಾಕೋ 3:17–18ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ. ಸಮಾಧಾನವನ್ನು ಉಂಟುಮಾಡುವವರು ಸಮಾಧಾನವೆಂಬ ಬೀಜವನ್ನು ಬಿತ್ತಿ ನೀತಿಯೆಂಬ ಫಲವನ್ನು ಕೊಯ್ಯುವರು.
ಯೋಹಾ 15:2ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.
ಎಫೆ 5:9ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
ಕೀರ್ತ 1:3ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.
ಯೋಹಾ 15:16ನೀವು ನನ್ನನ್ನು ಆರಿಸಿಕೊಳ್ಳಲಿಲ್ಲ. ನಾನು ನಿಮ್ಮನ್ನು ಆರಿಸಿಕೊಂಡಿದ್ದೇನೆ, ನೀವು ಹೊರಟು ಹೋಗಿ ಫಲಕೊಡಬೇಕೆಂತಲೂ, ಹಾಗೂ ನೀವು ಕೊಡುವ ಫಲವು ಸದಾಕಾಲ ನಿಲ್ಲುವಂಥದ್ದಾಗಬೇಕಂತಲೂ ನಾನು ನಿಮ್ಮನ್ನು ನೇಮಿಸಿದ್ದೇನೆ. ಹೀಗಿರಲಾಗಿ ನೀವು ನನ್ನ ಹೆಸರಿನಲ್ಲಿ ತಂದೆಯನ್ನು ಏನೇನು ಬೇಡಿಕೊಳ್ಳುವಿರೋ, ಅದನ್ನು ಆತನು ನಿಮಗೆ ಕೊಡುವನು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು