ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಗಲಾತ್ಯದವರಿಗೆ 6:2
ಬೈಬಲ್ ವಚನ · IRV
ಗಲಾತ್ಯದವರಿಗೆ 6:2
ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
ಇಡೀ ಅಧ್ಯಾಯ ಓದಿ: ಗಲಾತ್ಯದವರಿಗೆ 6
ಸಂದರ್ಭದಲ್ಲಿ
1ಸಹೋದರರೇ, ನಿಮ್ಮಲ್ಲಿ ಯಾರಾದರೂ ಯಾವುದಾದರೂ ಪಾಪದಲ್ಲಿ ಸಿಕ್ಕಿಹಾಕಿಕೊಂಡಿದ್ದರೆ ಅಂಥವರನ್ನು ಆತ್ಮಭರಿತರಾದ ನೀವು ಶಾಂತಭಾವದಿಂದ ತಿದ್ದಿ ಸರಿಮಾಡಿರಿ. ನೀವಾದರೂ ಶೋಧನೆಗೆ ಒಳಗಾಗದಂತೆ ನಿಮ್ಮ ವಿಷಯದಲ್ಲಿ ಎಚ್ಚರಿಕೆಯಾಗಿರಿ.
2ಒಬ್ಬರು ಮತ್ತೊಬ್ಬರ ಭಾರವನ್ನು ಹೊತ್ತುಕೊಳ್ಳಲಿ, ಹೀಗೆ ಕ್ರಿಸ್ತನ ನೀತಿನಿಯಮಗಳನ್ನು ನೆರವೇರಿಸಿರಿ.
3ಯಾವನಾದರೂ ಅಲ್ಪನಾಗಿದ್ದು ತಾನು ದೊಡ್ಡವನೆಂದು ಭಾವಿಸಿಕೊಂಡರೆ ತನ್ನನ್ನು ತಾನೇ ಮೋಸಗೊಳಿಸಿಕೊಳ್ಳುವನಾಗಿದ್ದಾನೆ.
4ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ.
5ಏಕೆಂದರೆ ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.
ಇಂಗ್ಲಿಷ್‌ನಲ್ಲಿ
Carry one another’s burdens, and in this way you will fulfill the law of Christ.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ದೃಢವಾದ ನಂಬಿಕೆಯುಳ್ಳವರಾದ ನಾವು ಬಲಹೀನರಾದವರ ಭಾರಗಳನ್ನು ಹೊರುವುದಲ್ಲದೆ ಅದರಲ್ಲಿ ನಮ್ಮನ್ನು ನಾವೇ ಹೊಗಳಿಕೊಳ್ಳಬಾರದು.ಸಹೋದರರೇ, ಮೈಗಳ್ಳರಿಗೆ ಬುದ್ಧಿಹೇಳಿರಿ, ಮನಗುಂದಿದವರನ್ನು ಧೈರ್ಯಪಡಿಸಿರಿ, ಬಲಹೀನರಿಗೆ ಆಧಾರವಾಗಿರಿ, ಎಲ್ಲರೊಂದಿಗೆ ದೀರ್ಘಶಾಂತಿಯಿಂದಿರಿ ಎಂದು ನಿಮ್ಮನ್ನು ಪ್ರಬೋಧಿಸುತ್ತೇವೆ.ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.ದೇವರನ್ನು ಪ್ರೀತಿಸುವವನು, ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ.ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ ನನ್ನ ಆಜ್ಞೆಯಾಗಿದೆ.ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನ ಸ್ವಭಾವಕ್ಕೆ ಆಸ್ಪದವಾಗಿ ಬಳಸದೆ, ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸು” ಎಂಬ ಒಂದೇ ಮಾತಿನಲ್ಲಿ ಧರ್ಮಶಾಸ್ತ್ರವೆಲ್ಲಾ ಅಡಗಿದೆ.ಹಾಗಾದರೆ ಕರ್ತನೂ, ಗುರುವೂ ಆಗಿರುವ ನಾನೇ ನಿಮ್ಮ ಪಾದಗಳನ್ನು ತೊಳೆದಿರುವಾಗ, ನೀವು ಸಹ ಒಬ್ಬರ ಪಾದಗಳನ್ನೊಬ್ಬರು ತೊಳೆಯಬೇಕು. ನಾನು ನಿಮಗೆ ಮಾಡಿದಂತೆಯೇ ನೀವು ಸಹ ಮಾಡಬೇಕೆಂದು ನಾನು ನಿಮಗೆ ಮಾದರಿಯನ್ನು ತೋರಿಸಿದ್ದೇನೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು