ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಗಲಾತ್ಯದವರಿಗೆ 6:7
ಬೈಬಲ್ ವಚನ · IRV
ಗಲಾತ್ಯದವರಿಗೆ 6:7
ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
ಇಡೀ ಅಧ್ಯಾಯ ಓದಿ: ಗಲಾತ್ಯದವರಿಗೆ 6
ಸಂದರ್ಭದಲ್ಲಿ
4ಪ್ರತಿಯೊಬ್ಬನು ತಾನು ಮಾಡಿದ ಕೆಲಸವನ್ನು ಪರೀಕ್ಷಿಸಿಕೊಳ್ಳಲಿ. ಆಗ ಅವನು ತನ್ನ ನಿಮಿತ್ತದಿಂದ ಹೆಚ್ಚಳಪಡಬಹುದೇ ಹೊರತು ಮತ್ತೊಬ್ಬನೊಂದಿಗೆ ಹೋಲಿಸಿಕೊಂಡು ಹೆಚ್ಚಳಪಡಬೇಕಾಗಿರುವುದಿಲ್ಲ.
5ಏಕೆಂದರೆ ಪ್ರತಿಯೊಬ್ಬನು ತನ್ನ ಸ್ವಂತ ಹೊರೆಯನ್ನು ತಾನೇ ಹೊತ್ತುಕೊಳ್ಳಬೇಕು.
6ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.
7ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.
8ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
9ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.
10ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.
ಇಂಗ್ಲಿಷ್ನಲ್ಲಿ
Do not be deceived: God is not to be mocked. Whatever a man sows, he will reap in return.ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಆದರೆ ಮಿತವಾಗಿ ಬಿತ್ತುವವನು ಮಿತವಾಗಿ ಕೊಯ್ಯುವನು. ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ.ನೀತಿಯ ಬೀಜವನ್ನು ಬಿತ್ತಿರಿ, ಪ್ರೀತಿಯ ಫಲವನ್ನು ಕೊಯ್ಯಿರಿ, ಹಾಳಾದ ನಿಮ್ಮ ಭೂಮಿಯನ್ನು ಫಲವತ್ತಾಗಿಸಿ; ಯೆಹೋವನು ಬಂದು ನಮ್ಮ ಮೇಲೆ ನೀತಿಯನ್ನು ವರ್ಷಿಸಲೆಂದು ಆತನಿಗೆ ಶರಣುಹೋಗುವ ಸಮಯವು ಒದಗಿದೆ.ನಾನು ನೋಡಿರುವ ಮಟ್ಟಿಗೆ ಅಧರ್ಮವನ್ನು ಉತ್ತು, ಕೇಡನ್ನು ಬಿತ್ತುವವರು ಕೇಡನ್ನೇ ಕೊಯ್ಯುವರು.ದೇವರು ಪ್ರತಿಯೊಬ್ಬರಿಗೆ ಅವರವರ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಕೊಡುವನು, ಯಾರು ಪ್ರಶಂಸೆ, ಗೌರವ, ಮತ್ತು ಭ್ರಷ್ಟರಹಿತ ಜೀವನ ಹೊಂದಬೇಕೆಂದು ಒಳ್ಳೆಯದನ್ನು ಬೇಸರಗೊಳ್ಳದೆ ಮಾಡುತ್ತಾರೋ, ಅವರಿಗೆ ನಿತ್ಯಜೀವವನ್ನು ಕೊಡುವನು. ಯಾರು ಸ್ವಾರ್ಥಸಾಧಕರಾಗಿದ್ದು, ಸತ್ಯವನ್ನು ಅನುಸರಿಸದೆ ಅನ್ಯಾಯವನ್ನು ಅನುಸರಿಸುತ್ತಾರೋ, ಅವರ ಮೇಲೆ ದೇವರ ಕೋಪ ಮತ್ತು ರೌದ್ರಗಳು ಬರುವವು. ಯೆಹೂದ್ಯರಿಗೆ ಮೊದಲು ಅನಂತರ ಗ್ರೀಕರಿಗೆ, ಕೆಟ್ಟದ್ದನ್ನು ಅನುಸರಿಸುವ ಪ್ರತಿಯೊಬ್ಬ ಮನುಷ್ಯನ ಮೇಲೂ ಸಂಕಟವೂ, ಯಾತನೆಯೂ ಬರುವವು. ಯೆಹೂದ್ಯರಿಗೆ ಮೊದಲು, ಅನಂತರ ಗ್ರೀಕರಿಗೆ, ಒಳ್ಳೆಯದನ್ನು ಅನುಸರಿಸುವ ಪ್ರತಿಯೊಬ್ಬನಿಗೆ ಗೌರವವೂ, ಮಾನವೂ, ಮನಶಾಂತಿಯೂ ಉಂಟಾಗುವವು.ಮೋಸಹೋಗಬೇಡಿರಿ; “ಕೆಟ್ಟ ಸಹವಾಸವು ಸದಾಚಾರವನ್ನು ಕೆಡಿಸುತ್ತವೆ.”ಅಧರ್ಮಿಯ ಸಂಬಳವು ಮೋಸ, ನೀತಿಯನ್ನು ಬಿತ್ತುವವನು ಲಾಭವನ್ನು ಪಡೆಯುವನು.ಆದುದರಿಂದ ಅವರು ತಮ್ಮ ನಡತೆಯ ಫಲವನ್ನು ಅನುಭವಿಸಿ, ಸ್ವಂತ ಕುಯುಕ್ತಿಗಳನ್ನೇ ಹೊಟ್ಟೆತುಂಬಾ ಉಣ್ಣಬೇಕಾಗುವುದು.ಹುರುಳಿಲ್ಲದ ಮಾತುಗಳಿಂದ ಯಾರು ನಿಮ್ಮನ್ನು ವಂಚಿಸದಿರಲಿ, ಇಂಥ ಕೃತ್ಯಗಳ ನಿಮಿತ್ತ ದೇವರ ಕೋಪವು ಆತನಿಗೆ ಅವಿಧೇಯರಾಗಿರುವವರ ಮೇಲೆ ಬರುತ್ತದೆ.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು