Bible Explorer ಆ್ಯಪ್ ಪಡೆಯಿರಿ

ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಗಲಾತ್ಯದವರಿಗೆ 6:9

ಬೈಬಲ್ ವಚನ · IRV

ಗಲಾತ್ಯದವರಿಗೆ 6:9

ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.

ಇಡೀ ಅಧ್ಯಾಯ ಓದಿ: ಗಲಾತ್ಯದವರಿಗೆ 6

ಸಂದರ್ಭದಲ್ಲಿ

6ದೇವರ ವಾಕ್ಯವನ್ನು ಕಲಿಯುವವನು, ಅದನ್ನು ಕಲಿಸುವವನಿಗೆ ತನ್ನಲ್ಲಿರುವ ಎಲ್ಲಾ ಮೇಲುಗಳಲ್ಲಿಯೂ ಪಾಲನ್ನು ಕೊಡಬೇಕು.

7ಮೋಸಹೋಗಬೇಡಿರಿ. ದೇವರನ್ನು ಅಪಹಾಸ್ಯ ಮಾಡಲಾಗುವುದಿಲ್ಲ. ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು.

8ತನ್ನ ಶರೀರಭಾವವನ್ನು ಕುರಿತು ಬಿತ್ತುವವನು ಆ ಭಾವದಿಂದ ನಾಶವನ್ನು ಕೊಯ್ಯುವನು. ಆತ್ಮನ ಕುರಿತಾಗಿ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.

9ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳದೇ ಇರೋಣ. ಏಕೆಂದರೆ ಮನಗುಂದದಿದ್ದರೆ ತಕ್ಕ ಸಮಯದಲ್ಲಿ ಬೆಳೆಯನ್ನು ಕೊಯ್ಯುವೆವು.

10ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.

11ಇಗೋ ನೋಡಿರಿ, ಸ್ವಂತ ಕೈಯಿಂದ ಎಂಥಾ ದೊಡ್ಡ ಅಕ್ಷರಗಳಲ್ಲಿ ನಿಮಗೆ ಬರೆಯುತ್ತಾ ಇದ್ದೇನೆ.

12ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.

ಗಲಾತ್ಯದವರಿಗೆ 6

ಇಂಗ್ಲಿಷ್‌ನಲ್ಲಿ

Berean Standard BibleGalatians 6:9Let us not grow weary in well-doing, for in due time we will reap a harvest if we do not give up.

ಅಡ್ಡ ಉಲ್ಲೇಖಗಳು

ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.

1 ಕೊರಿ 15:58ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.
2 ಥೆಸ 3:13ಸಹೋದರರೇ, ನೀವಾದರೋ ಒಳ್ಳೆಯದನ್ನು ಮಾಡುವುದರಲ್ಲಿ ಬೇಸರಗೊಳ್ಳಬೇಡಿರಿ.
ಯೆಶಾ 40:30–31ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು. ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; ಅವರು ಓಡಿ ದಣಿಯರು, ನಡೆದು ಬಳಲರು.
ಇಬ್ರಿ 10:35–39ಆದ್ದರಿಂದ ನಿಮ್ಮ ಧೈರ್ಯವನ್ನು ಬಿಟ್ಟುಬಿಡಬೇಡಿರಿ. ಅದಕ್ಕೆ ಮಹಾ ಪ್ರತಿಫಲ ಉಂಟು. ನೀವು ದೇವರ ಚಿತ್ತವನ್ನು ನೆರವೇರಿಸಿದ ಮೇಲೆ ವಾಗ್ದಾನವನ್ನು ಹೊಂದಬೇಕಾದರೆ ನಿಮಗೆ ತಾಳ್ಮೆಯು ಅವಶ್ಯವಾಗಿದೆ. “ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ. ಆದರೆ ನನ್ನವನಾಗಿರುವ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಅದರಿಂದ ಹಿಂಜರಿದರೆ ಅವನಲ್ಲಿ ನನಗೆ ಮೆಚ್ಚಿಕೆಯಿರುವುದಿಲ್ಲ.” ನಾವಾದರೋ ಹಿಂಜರಿದವರಾಗಿ ನಾಶವಾಗುವವರಲ್ಲ, ನಂಬುವವರಾಗಿ ಆತ್ಮರಕ್ಷಣೆಯನ್ನು ಹೊಂದುವವರಾಗಿದ್ದೇವೆ.
ಇಬ್ರಿ 12:3ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.
1 ಪೇತ್ರ 2:15ತಿಳಿವಳಿಕೆಯಿಲ್ಲದೆ ಮಾತನಾಡುವ ಮೂಢ ಜನರ ಬಾಯನ್ನು ನೀವು ಒಳ್ಳೆ ನಡತೆಯಿಂದ ಮುಚ್ಚಿಸಬೇಕೆಂಬುದು ದೇವರ ಚಿತ್ತ.
ಯಾಕೋ 5:7ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
1 ಪೇತ್ರ 3:17ಕೆಟ್ಟ ನಡತೆಯುಳ್ಳವರಾಗಿ ಬಾಧೆಪಡುವುದಕ್ಕಿಂತಲೂ ಒಳ್ಳೆ ನಡತೆಯುಳ್ಳವರಾಗಿಯೇ ದೇವರ ಚಿತ್ತದ ಪ್ರಕಾರ ಬಾಧೆಪಡುವುದು ಉತ್ತಮ.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು