ಮುಖಪುಟ › ಜನಪ್ರಿಯ ಬೈಬಲ್ ವಚನಗಳು › ಆದಿಕಾಂಡ 1:1
ಬೈಬಲ್ ವಚನ · IRV
ಆದಿಕಾಂಡ 1:1
ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
ಸಂದರ್ಭದಲ್ಲಿ
1ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
2ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
3ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.
4ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.
ಇಂಗ್ಲಿಷ್ನಲ್ಲಿ
ಅಡ್ಡ ಉಲ್ಲೇಖಗಳು
ಓದುಗರು ಇದರೊಂದಿಗೆ ಹೆಚ್ಚು ಜೋಡಿಸುವ ಭಾಗಗಳು.
ಯೋಹಾ 1:1–3
ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು. ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು. ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ.ಇಬ್ರಿ 11:3
ವಿಶ್ವವು ದೇವರ ಮಾತಿನಿಂದಲೇ ನಿರ್ಮಿತವಾಯಿತೆಂದು ನಾವು ನಂಬಿಕೆಯಿಂದಲೇ ತಿಳಿದುಕೊಂಡಿದ್ದೇವೆ. ಈ ಕಾರಣದಿಂದ ಕಾಣಿಸುವ ಈ ಜಗತ್ತು ದೃಶ್ಯವಸ್ತುಗಳಿಂದ ಉಂಟಾಗಲಿಲ್ಲವೆಂದು ಗ್ರಹಿಸುತ್ತೇವೆ.ಯೆಶಾ 45:18
ಆಕಾಶಮಂಡಲವನ್ನು ಸೃಷ್ಟಿಸಿದ ಯೆಹೋವನ ಮಾತನ್ನು ಕೇಳಿರಿ, ಆತನೇ ದೇವರು. ಭೂಲೋಕವನ್ನು ನಿರ್ಮಿಸಿ ರೂಪಿಸಿ ಸ್ಥಾಪಿಸಿದನು. ಅದನ್ನು ಶೂನ್ಯಸ್ಥಾನವಾಗಿರಲೆಂದು ಸೃಷ್ಟಿಸದೆ ಜನನಿವಾಸಕ್ಕಾಗಿಯೇ ರೂಪಿಸಿದನು. ಈತನು ಹೀಗೆನ್ನುತ್ತಾನೆ, “ನಾನೇ ಯೆಹೋವನು, ಇನ್ನು ಯಾರೂ ಇಲ್ಲ.ಇಬ್ರಿ 1:10
“ಕರ್ತನೇ ಆದಿಯಲ್ಲಿ ನೀನು ಭೂಮಿಗೆ ಅಸ್ತಿವಾರವನ್ನು ಹಾಕಿದ್ದೀ. ಆಕಾಶವು ನಿನ್ನ ಕೈಕೆಲಸವಾಗಿದೆ,ಕೊಲೊ 1:16–17
ಭೂಪರಲೋಕಗಳಲ್ಲಿರುವ ದೃಶ್ಯ ಅದೃಶ್ಯವಾದವುಗಳೆಲ್ಲವೂ, ಸಿಂಹಾಸನಗಳಾಗಲಿ, ಪ್ರಭುತ್ವಗಳಾಗಲಿ, ದೊರೆತನಗಳಾಗಲಿ, ಅಧಿಕಾರಗಳಾಗಲಿ ಆತನಿಂದ ಸೃಷ್ಟಿಸಲ್ಪಟ್ಟವು. ಸರ್ವವೂ ಆತನ ಮುಖಾಂತರವಾಗಿ ಆತನಿಗೋಸ್ಕರವಾಗಿ ಸೃಷ್ಟಿಸಲ್ಪಟ್ಟಿತು. ಆತನು ಎಲ್ಲಕ್ಕೂ ಮೊದಲು ಇದ್ದಾತನು, ಆತನಲ್ಲಿ ಸಮಸ್ತವು ಒಂದಾಗಿ ನೆಲೆಗೊಂಡಿದ್ದೆ.ಯೆಶಾ 42:5
ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ,ವಿಮೋ 20:11
ಆರು ದಿನಗಳಲ್ಲಿ ಯೆಹೋವನು ಭೂಮ್ಯಾಕಾಶಗಳನ್ನೂ, ಸಮುದ್ರವನ್ನೂ, ಅವುಗಳಲ್ಲಿರುವ ಸಮಸ್ತವನ್ನೂ ನಿರ್ಮಾಣ ಮಾಡಿ, ಏಳನೆಯ ದಿನದಲ್ಲಿ ವಿಶ್ರಮಿಸಿಕೊಂಡನು. ಆದುದರಿಂದ ಯೆಹೋವನು ಸಬ್ಬತ್ ದಿನವನ್ನು ತನ್ನ ಪರಿಶುದ್ಧ ದಿನವಾಗಿರಲಿ ಎಂದು ಆಶೀರ್ವದಿಸಿದನು.ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು